
ಬೆಂಗಳೂರು(ಸೆ.24): ತೈಲ ಬೆಲೆ ಮತ್ತೆ ಏರಿಕೆಯಾಗಿದ್ದು, ಮುಂಬೈ ನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 90 ರೂಪಾಯಿಯ ಸನಿಹಕ್ಕೆ ಬಂದಿದೆ.
ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 89.97 ರೂಪಾಯಿಯಷ್ಟಾಗಿದ್ದು, ಡೀಸೆಲ್ 78.53 ರೂಪಾಯಿಯಷ್ಟಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟೋಲ್ ದರ 82.61 ರೂಪಾಯಿಯಷ್ಟಾಗಿದ್ದರೆ ಡೀಸೆಲ್ ದರ 73.97 ರೂಪಾಯಿಯಷ್ಟಾಗಿದೆ.
ಪ್ರತಿ ಬ್ಯಾರೆಲ್ ಕಚ್ಚಾ ತೈಲ ದರ 78.80 ಡಾಲರ್ ಆಗಿದ್ದು, ಅಧಿಕವಾದ ಅಬಕಾರಿ ಸುಂಕದಿಂದ ತೈಲ ಬೆಲೆ ಏರಿಕೆಯಾಗುತ್ತಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.