Petrol Diesel Rate:ವಾಹನ ಸವಾರರೇ ಡೋಂಟ್ ವರಿ, ಇಂದು ಕೂಡ ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗಿಲ್ಲ

By Suvarna NewsFirst Published Dec 14, 2021, 10:28 AM IST
Highlights

ಪೆಟ್ರೋಲ್, ಡೀಸೆಲ್ ಬೆಲೆ ಇನ್ನೂ ಹೆಚ್ಚಾದ್ರೆ ಏನ್ ಮಾಡೋದಪ್ಪ ಎಂಬ ಚಿಂತೆ ಅನೇಕರನ್ನು ಕಾಡುತ್ತಿರಬಹುದು. ಆದ್ರೆ ಇಂದಿನ ಮಟ್ಟಿಗೆ ವಾಹನ ಸವಾರರಿಗೆ ಮತ್ತೆ ನಿರಾಳತೆ ಸಿಕ್ಕಿದ್ದು,ಇಂಧನ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. 
 

ಬೆಂಗಳೂರು (ಡಿ.14):  ದೆಹಲಿ (Delhi) ಹೊರತುಪಡಿಸಿ ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ (Petrol) ಹಾಗೂ ಡೀಸೆಲ್  (Diesel) ಬೆಲೆ (Price) ಒಂದು ತಿಂಗಳಿಗೂ ಅಧಿಕ ಸಮಯದಿಂದ ಸ್ಥಿರತೆ ಕಾಯ್ದುಕೊಂಡಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಏರಿಕೆಯಾಗುತ್ತಿದ್ರೂ ದೇಶದಲ್ಲಿ ಮಾತ್ರ ಯಾವ ಬದಲಾವಣೆಯೂ ಆಗಿಲ್ಲ. ಅಕ್ಟೋಬರ್ ತಿಂಗಳಲ್ಲಿ ಪೆಟ್ರೋಲ್ ದರ ಏರಿಕೆಯನ್ನು ದಾಖಲಿಸುತ್ತ 100ರ ಗಡಿ ದಾಟಿತ್ತು. ಇದು ವಾಹನ ಸವಾರರ ನೆಮ್ಮದಿ ಕೆಡಿಸಿತ್ತು. ಅಲ್ಲದೆ, ಹಣ್ಣು, ತರಕಾರಿ ಸೇರಿದಂತೆ ನಿತ್ಯ ವಸ್ತುಗಳ ಬೆಲೆಯೇರಿಕೆಗೂ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ನವೆಂಬರ್ ಮೊದಲ ವಾರದಲ್ಲಿ ಕೇಂದ್ರ ಸರ್ಕಾರ (Central Government))ಪೆಟ್ರೋಲ್ ಹಾಗೂ ಡೀಸೆಲ್  ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಿತ್ತು. ಇದರಿಂದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಇಳಿಕೆಯಾಗಿತ್ತು. ಅಲ್ಲದೆ, ನಂತರದ ದಿನಗಳಲ್ಲಿ ಕೂಡ ಇಂಧನ ದರ ಸ್ಥಿರತೆ ಕಾಯ್ದುಕೊಂಡಿದೆ. ಆದ್ರೆ, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇತ್ತೀಚಿನ ದಿನಗಳಲ್ಲಿ ಕಚ್ಚಾ ತೈಲದ (Crude oil) ಬೆಲೆ ಏರಿಕೆಯಾಗುತ್ತಿದ್ದು, ಇದು ಮುಂದಿನ ದಿನಗಳಲ್ಲಿ ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯೇರಿಕೆಗೆ ಕಾರಣವಾಗಬಹುದಾ ಎಂಬ ಅನುಮಾನವಂತೂ ಎಲ್ಲರನ್ನೂ ಕಾಡುತ್ತಿದೆ.  ಆದ್ರೆ ಸದ್ಯದ ಮಟ್ಟಿಗೆ ಅಂಥ ಯಾವುದೇ ಸಾಧ್ಯತೆಗಳು ಕಾಣಿಸುತ್ತಿಲ್ಲ. ಈ ನಡುವೆ ಇಂದು (ಡಿ.14) ಕೂಡ ಪೆಟ್ರೋಲ್  ಹಾಗೂ ಡೀಸೆಲ್ ಬೆಲೆ ಯಥಾಸ್ಥಿತಿ ಕಾಯ್ದುಕೊಂಡಿದೆ.  ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಇಂದಿನ (ಡಿ.14)  ಪೆಟ್ರೋಲ್ ಹಾಗೂ ಡೀಸೆಲ್ ದರದ ಮಾಹಿತಿ ಇಲ್ಲಿದೆ.

ರಾಜ್ಯದ ಪ್ರಮುಖ ನಗರಗಳಲ್ಲಿಇಂಧನ ದರ
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ(Bengaluru) ಇಂದು ಪೆಟ್ರೋಲ್ ದರ ಲೀಟರ್ ಗೆ 100.58ರೂ. ಹಾಗೂ ಡೀಸೆಲ್  ದರ 85.01 ರೂ.ಇದೆ. ಹುಬ್ಬಳ್ಳಿಯಲ್ಲಿ (Hubli)ಪೆಟ್ರೋಲ್ ಬೆಲೆ 100.31ರೂ. ಹಾಗೂ ಡೀಸೆಲ್ ಬೆಲೆ 84.79 ರೂ.ಇದೆ. ಮಂಗಳೂರಿನಲ್ಲಿ (Mangalore) ಪೆಟ್ರೋಲ್ ಬೆಲೆ 99.76 ರೂ. ಹಾಗೂ ಡೀಸೆಲ್ ದರ 84.24ರೂ.ಇದೆ. ಮೈಸೂರಿನಲ್ಲಿ (Mysore)ಪೆಟ್ರೋಲ್ ದರ ಲೀಟರ್ ಗೆ 100.08ರೂ. ಹಾಗೂ ಡೀಸೆಲ್ ದರ ಲೀಟರ್ ಗೆ  84.56ರೂ.ಇದೆ. ಕಲಬುರಗಿಯಲ್ಲಿ(Kalburgi)ಪೆಟ್ರೋಲ್ ಗೆ 101.04ರೂ. ಹಾಗೂ ಡೀಸೆಲ್ ಗೆ 85.45ರೂ.ಇದೆ. 

LPG subsidy: ನಿಮ್ಮ ಅಕೌಂಟ್ ಗೆ LPG ಸಬ್ಸಿಡಿ ಕ್ರೆಡಿಟ್ ಆಗ್ತಿದ್ಯಾ?

ಪೆಟ್ರೋಲ್ ದರ ಪರಿಷ್ಕರಣೆ ಹೇಗೆ?
ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ನಿರ್ಧರಣೆಯಲ್ಲಿಅನೇಕ ಅಂಶಗಳು ನಿರ್ಣಾಯಕ ಪಾತ್ರ ವಹಿಸುತ್ತವೆ. ಮೊದಲನೆಯದಾಗಿ ಕಚ್ಚಾ ತೈಲದ ಬೆಲೆ, ಎರಡನೆಯದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಧಿಸುತ್ತಿರೋ ತೆರಿಗೆಗಳು. ಇವೆರಡರ ಜೊತೆಗೆ ಡೀಲರ್‌ಗಳ ಕಮೀಷನ್ ಹಾಗೂ ವ್ಯಾಟ್(VAT) ಕೂಡ ಬೆಲೆ ಮೇಲೆ ಪರಿಣಾಮ ಬೀರುತ್ತವೆ. ಪೆಟ್ರೋಲ್‌ ಹಾಗೂ ಡೀಸೆಲ್ ದುಬಾರಿಯಾಗಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಧಿಸೋ ತೆರಿಗೆಗಳೇ ಕಾರಣ.ಇಂಧನಗಳ ಮೇಲೆ ವಿಧಿಸೋ ತೆರಿಗೆಗಳಿಂದ ಸರ್ಕಾರಕ್ಕೆ ದೊಡ್ಡ ಮೊತ್ತದ ಆದಾಯ ಸೃಷ್ಟಿಯಾಗುತ್ತದೆ. ಇದೇ ಕಾರಣಕ್ಕೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಇಂಧನದ ಮೇಲಿನ ತೆರಿಗೆ ಕಡಿತಗೊಳಿಸಲು ಹಿಂದೇಟು ಹಾಕೋದು.ಅಂತಾರಾಷ್ಟ್ರೀಯ ಕಚ್ಚಾ ತೈಲಗಳ ಮಾರುಕಟ್ಟೆಯಲ್ಲಿ ದರಗಳ ಏರಿಳಿತವಾಗುತ್ತಿರೋ ಕಾರಣ ಪ್ರತಿದಿನ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳನ್ನು ಪರಿಷ್ಕರಿಸಲಾಗುತ್ತದೆ. ಈ ಹಿಂದೆ ಪೆಟ್ರೋಲ್ ದರವನ್ನು ಪ್ರತಿ 15 ದಿನಗಳಿಗೊಮ್ಮೆ ಬದಲಾಯಿಸಲಾಗುತ್ತಿತ್ತು. ಅಂದ್ರೆ ಪ್ರತಿ ತಿಂಗಳು 1 ಹಾಗೂ 16ನೇ ತಾರೀಖಿನಂದು ದರ ಬದಲಾವಣೆ ಮಾಡಲಾಗುತ್ತಿತ್ತು. ಆದ್ರೆ 2017ರ ಜೂನ್ 16ರಿಂದ ಹೊಸ ಯೋಜನೆಯನ್ನು ಅನುಷ್ಠಾನಗೊಳಿಸಲಾಯಿತು. ಅದರಡಿಯಲ್ಲಿ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಬೆಲೆ ಪರಿಷ್ಕರಣೆ ಮಾಡಲಾಗುತ್ತಿದೆ. ಹೀಗಾಗಿ ಪ್ರತಿದಿನ ಬೆಳಗ್ಗೆ ತೈಲ ಕಂಪನಿಗಳು ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. 

IT Returns Deadline: ಡಿ.31 ಅಂತಿಮ ಗಡುವು, ಇ-ಫೈಲಿಂಗ್ ಪೋರ್ಟಲ್ ಮೂಲಕ ಐಟಿ ರಿಟರ್ನ್ಸ್ ಸಲ್ಲಿಕೆಗೆ ಒತ್ತಾಯ

GST ಇಲ್ಲ
ಪೆಟ್ರೋಲ್ ಹಾಗೂ ಡೀಸೆಲ್ ಸರಕು ಹಾಗೂ ಸೇವಾ ತೆರಿಗೆ (GST) ವ್ಯಾಪ್ತಿಗೆ ಬಾರದಿದ್ರೂ ಕೂಡ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಅನೇಕ ತೆರಿಗೆಗಳನ್ನು ವಿಧಿಸುತ್ತವೆ. ಈ ಹಿಂದೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಹೆಚ್ಚಿದಾಗ ಅದರ ಮೇಲಿನ ಸುಂಕವನ್ನು ಸರ್ಕಾರ ಕಡಿತಗೊಳಿಸುತ್ತಿತ್ತು.ಆದ್ರೆ 2014ರಿಂದ ಕೇಂದ್ರ ಸರ್ಕಾರ ಈ ಕ್ರಮವನ್ನು ಕೈಬಿಟ್ಟಿದೆ. 

"

click me!