Petrol Rate:ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಇಂದು ಪೆಟ್ರೋಲ್, ಡೀಸೆಲ್ ದರ ಸ್ಥಿರ

By Suvarna NewsFirst Published Dec 7, 2021, 10:39 AM IST
Highlights

ಒಮಿಕ್ರಾನ್ ವೈರಸ್ ಭೀತಿ ಹೆಚ್ಚುತ್ತಿರೋ ಬೆನ್ನಲ್ಲೇ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ವ್ಯತ್ಯಯವಾಗಬಹುದೆಂಬ ನಿರೀಕ್ಷೆ ಮುಂದುವರಿದಿದೆ. ಆದ್ರೆ ಕಳೆದ ಕೆಲವು ದಿನಗಳಿಂದ ಯಥಾಸ್ಥಿತಿ ಕಾಯ್ದುಕೊಂಡಿರೋ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಇಂದು ಕೂಡ ಯಾವುದೇ ಬದಲಾವಣೆಯಾಗಿಲ್ಲ. 

ಬೆಂಗಳೂರು (ಡಿ.7):  ಕಳೆದ ಕೆಲವು ದಿನಗಳಿಂದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಯಥಾಸ್ಥಿತಿ ಕಾಯ್ದುಕೊಂಡಿದೆ. ಇಂದು (ಡಿ.7) ಕೂಡ ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. ಕಳೆದ ವಾರದ ಪ್ರಾರಂಭದಲ್ಲಿ ದೆಹಲಿ (Delhi)ಸರ್ಕಾರ ಪೆಟ್ರೋಲ್ ಮೇಲಿನ  ವ್ಯಾಟ್ (VAT)ಕಡಿತಗೊಳಿಸೋ ಮೂಲಕ ಲೀಟರ್ ಗೆ 8ರೂ. ಬೆಲೆ ಇಳಿಕೆ ಮಾಡಿತ್ತು. ಒಮಿಕ್ರಾನ್ ವೈರಸ್ ಭೀತಿ ದಿನೇದಿನೆ ಹೆಚ್ಚುತ್ತಿರೋದು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಮೇಲೆ  ಪರಿಣಾಮ ಬೀರೋ ಸಾಧ್ಯತೆಯಿದೆ.  ಇನ್ನು ಡಿಸೆಂಬರ್ ಮೊದಲ ವಾರದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಇಳಿಕೆಯಾಗಬಹುದು ಎಂಬ ನಿರೀಕ್ಷೆಯಿತ್ತು. ಆದ್ರೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮಾತ್ರ ತೆರಿಗೆ ಇಳಿಕೆ ಮಾಡೋ ಮನಸ್ಸು ಮಾಡಿಲ್ಲ. ಪ್ರಸ್ತುತ ಪೆಟ್ರೋಲ್ ಮೇಲೆ ಕೇಂದ್ರ ಅಬಕಾರಿ ಸುಂಕ ಪ್ರತಿ ಲೀಟರ್ ಗೆ 27.9ರೂ. ಹಾಗೂ ಡೀಸೆಲ್ ಲೀಟರ್ ಗೆ 21.08ರೂ. ಇದೆ. ಕೇಂದ್ರ ಹಾಗೂ ಆಯಾ ರಾಜ್ಯ ಸರ್ಕಾರಗಳು ಇಂಧನ ದರದ ಮೇಲಿನ ತೆರಿಗೆಗಳನ್ನು ಕಡಿತಗೊಳಿಸಿದ್ರೆ ಮಾತ್ರ ಬೆಲೆಯಲ್ಲಿ ಇಳಿಕೆ ಕಾಣಲು ಸಾಧ್ಯ. ರಾಜ್ಯದ ಪ್ರಮುಖ ನಗರಗಳಲ್ಲಿ ಇಂದು (ಡಿ.7) ಕೂಡ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಯಥಾಸ್ಥಿತಿ ಕಾಯ್ದುಕೊಂಡಿದೆ.  ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ (Cities)ಇಂದು ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಎಷ್ಟಿದೆ ಗೊತ್ತಾ?

ರಾಜ್ಯದ ಪ್ರಮುಖ ನಗರಗಳಲ್ಲಿಇಂಧನ ದರ
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ(Bengaluru)ಇಂದು ಪೆಟ್ರೋಲ್ ದರ ಲೀಟರ್ ಗೆ 100.58ರೂ. ಹಾಗೂ ಡೀಸೆಲ್  ದರ 85.01 ರೂ.ಇದ್ದು, ಕಳೆದ 14  ದಿನಗಳಿಂದ ಯಥಾಸ್ಥಿತಿ ಕಾಯ್ದುಕೊಂಡಿದೆ. ಹುಬ್ಬಳ್ಳಿಯಲ್ಲಿ (Hubli)ಪೆಟ್ರೋಲ್ ಬೆಲೆ 100.30ರೂ. ಹಾಗೂ ಡೀಸೆಲ್ ಬೆಲೆ 84.78 ರೂ.ಇದೆ. ಪೆಟ್ರೋಲ್ ಹಾಗೂ ಡೀಸೆಲ್ ಎರಡರ ಬೆಲೆಯಲ್ಲೂ ನಿನ್ನೆಗಿಂತ 0.10 ರೂ. ಕಡಿಮೆಯಾಗಿದೆ.  ಮಂಗಳೂರಿನಲ್ಲಿ (Mangalore) ಪೆಟ್ರೋಲ್ ಬೆಲೆ 99.76 ರೂ. ಹಾಗೂ ಡೀಸೆಲ್ ದರ 84.24ರೂ.ಇದ್ದು, ಕಳೆದ ಅನೇಕ ದಿನಗಳಿಂದ ಈ ದರದಲ್ಲಿ ಸ್ವಲ್ಪವೂ ಬದಲಾವಣೆಯಾಗಿಲ್ಲ. ಸಾಂಸ್ಕ್ರತಿಕ ನಗರಿ ಮೈಸೂರಿನಲ್ಲಿ(Mysore)ಪೆಟ್ರೋಲ್ ದರ ಲೀಟರ್ ಗೆ 100.08ರೂ. ಹಾಗೂ ಡೀಸೆಲ್ ದರ ಲೀಟರ್ ಗೆ  84.56ರೂ.ಇದೆ. ಬಿಸಿಲ ನಗರಿ ಕಲಬುರಗಿಯಲ್ಲಿ(Kalburgi)ಪೆಟ್ರೋಲ್ ಗೆ 100.28ರೂ. ಹಾಗೂ ಡೀಸೆಲ್ ಗೆ 84.77ರೂ.ಇದೆ.

ಅತೀಹೆಚ್ಚು ಫೋರೆಕ್ಸ್ ಸಂಗ್ರಹ ಹೊಂದಿರೋ ಜಗತ್ತಿನ ನಾಲ್ಕನೇ ರಾಷ್ಟ್ರ ನಮ್ಮದು: ಸಚಿವ ಚೌಧರಿ

ಪೆಟ್ರೋಲ್ ದರ ಪರಿಷ್ಕರಣೆ ಹೇಗೆ?
ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ನಿರ್ಧರಣೆಯಲ್ಲಿಅನೇಕ ಅಂಶಗಳು ನಿರ್ಣಾಯಕ ಪಾತ್ರ ವಹಿಸುತ್ತವೆ. ಮೊದಲನೆಯದಾಗಿ ಕಚ್ಚಾ ತೈಲದ ಬೆಲೆ, ಎರಡನೆಯದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಧಿಸುತ್ತಿರೋ ತೆರಿಗೆಗಳು. ಇವೆರಡರ ಜೊತೆಗೆ ಡೀಲರ್‌ಗಳ ಕಮೀಷನ್ ಹಾಗೂ ವ್ಯಾಟ್(VAT) ಕೂಡ ಬೆಲೆ ಮೇಲೆ ಪರಿಣಾಮ ಬೀರುತ್ತವೆ. ಪೆಟ್ರೋಲ್‌ ಹಾಗೂ ಡೀಸೆಲ್ ದುಬಾರಿಯಾಗಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಧಿಸೋ ತೆರಿಗೆಗಳೇ ಕಾರಣ.ಇಂಧನಗಳ ಮೇಲೆ ವಿಧಿಸೋ ತೆರಿಗೆಗಳಿಂದ ಸರ್ಕಾರಕ್ಕೆ ದೊಡ್ಡ ಮೊತ್ತದ ಆದಾಯ ಸೃಷ್ಟಿಯಾಗುತ್ತದೆ. ಇದೇ ಕಾರಣಕ್ಕೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಇಂಧನದ ಮೇಲಿನ ತೆರಿಗೆ ಕಡಿತಗೊಳಿಸಲು ಹಿಂದೇಟು ಹಾಕೋದು.ಅಂತಾರಾಷ್ಟ್ರೀಯ ಕಚ್ಚಾ ತೈಲಗಳ ಮಾರುಕಟ್ಟೆಯಲ್ಲಿ ದರಗಳ ಏರಿಳಿತವಾಗುತ್ತಿರೋ ಕಾರಣ ಪ್ರತಿದಿನ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳನ್ನು ಪರಿಷ್ಕರಿಸಲಾಗುತ್ತದೆ. ಈ ಹಿಂದೆ ಪೆಟ್ರೋಲ್ ದರವನ್ನು ಪ್ರತಿ 15 ದಿನಗಳಿಗೊಮ್ಮೆ ಬದಲಾಯಿಸಲಾಗುತ್ತಿತ್ತು. ಅಂದ್ರೆ ಪ್ರತಿ ತಿಂಗಳು 1 ಹಾಗೂ 16ನೇ ತಾರೀಖಿನಂದು ದರ ಬದಲಾವಣೆ ಮಾಡಲಾಗುತ್ತಿತ್ತು. ಆದ್ರೆ 2017ರ ಜೂನ್ 16ರಿಂದ ಹೊಸ ಯೋಜನೆಯನ್ನು ಅನುಷ್ಠಾನಗೊಳಿಸಲಾಯಿತು. ಅದರಡಿಯಲ್ಲಿ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಬೆಲೆ ಪರಿಷ್ಕರಣೆ ಮಾಡಲಾಗುತ್ತಿದೆ. ಹೀಗಾಗಿ ಪ್ರತಿದಿನ ಬೆಳಗ್ಗೆ ತೈಲ ಕಂಪನಿಗಳು ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. 

ಬೆಂಗಳೂರಿನ ಪ್ರತಿಷ್ಟಿತ ಮಂತ್ರಿ ಮಾಲ್‌ಗೆ ಬೀಗ

GST ಇಲ್ಲ
ಪೆಟ್ರೋಲ್ ಹಾಗೂ ಡೀಸೆಲ್ ಸರಕು ಹಾಗೂ ಸೇವಾ ತೆರಿಗೆ (GST) ವ್ಯಾಪ್ತಿಗೆ ಬಾರದಿದ್ರೂ ಕೂಡ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಅನೇಕ ತೆರಿಗೆಗಳನ್ನು ವಿಧಿಸುತ್ತವೆ. ಈ ಹಿಂದೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಹೆಚ್ಚಿದಾಗ ಅದರ ಮೇಲಿನ ಸುಂಕವನ್ನು ಸರ್ಕಾರ ಕಡಿತಗೊಳಿಸುತ್ತಿತ್ತು.ಆದ್ರೆ 2014ರಿಂದ ಕೇಂದ್ರ ಸರ್ಕಾರ ಈ ಕ್ರಮವನ್ನು ಕೈಬಿಟ್ಟಿದೆ. 

"


 

click me!