* ಸ್ಟಾರ್ಟ್ ಅಪ್ ದಿನಾಚರಣೆಯ ಭಾಷಣ ಮುಖ್ಯಾಂಶಗಳು
* ಐಟಿ-ಬಿಟಿಯಲ್ಲಿ ದೇಶದಲ್ಲೇ ಕರ್ನಾಟಕ ಪ್ರಥಮ ಸ್ಥಾನ
* ನವೋದ್ಯಮಿಗಳಿಗೆ ಆರ್ಥಿಕ ನೆರವು ಘೋಷಿಸಿದ ಸಿಎಂ
ಬೆಂಗಳೂರು, (ಜ.16): ಭವಿಷ್ಯದಲ್ಲಿ ದೇಶದ ಆರ್ಥಿಕತೆಯಲ್ಲಿ ಕರ್ನಾಟಕ(Karnataka) ದೊಡ್ಡ ಪಾತ್ರವನ್ನು ವಹಿಸಲಿದೆ. ದೇಶದ 54000 ಸ್ಟಾರ್ಟ್ ಅಪ್ಗಳಲ್ಲಿ 13000 ಕರ್ನಾಟಕದಲ್ಲಿ ಪ್ರಾರಂಭವಾಗಿರುವುದು ಹೆಮ್ಮೆಯ ವಿಷಯ. ಸ್ಟಾರ್ಟ್ ಅಪ್ಗಳ (Start up) ಸ್ಥಾಪನೆಯ ಉತ್ತೇಜನಕ್ಕಾಗಿ ಕರ್ನಾಟಕ ಸರ್ಕಾರ ಹಲವಾರು ಕ್ರಮಗಳನ್ನು ತೆಗೆದುಕೊಂಡಿದ್ದು, ಸ್ಟಾರ್ಟ್ ಅಪ್ (Start up) ಸೆಲ್ ಮೂಲಕ ಮಾರ್ಗದರ್ಶನ, ವೈಜ್ಞಾನಿಕ ಬೆಂಬಲ ನೀಡುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಈ ಮೂಲಕ ನವಭಾರತಕ್ಕಾಗಿ, ನವಕರ್ನಾಟಕ ನಿರ್ಮಾಣದ ಪರಿಕಲ್ಪನೆಯನ್ನು ಸಾಕಾರಗೊಳಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದ್ದಾರೆ.
ಇಂದು(ಸೋಮವಾರ) ಸ್ಟಾರ್ಟ್ ಅಪ್ ದಿನಾಚರಣೆಯ (Start up Day ) ಅಂಗವಾಗಿ ಆನ್ಲೈನ್ ಮೂಲಕ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿ, ಪ್ರಧಾನಮಂತ್ರಿಯವರ ಅಭಿಲಾಷೆಯಂತೆ ಸ್ಟಾರ್ಟ್ ಅಪ್ ದಿನಾಚರಣೆಯನ್ನು ರಾಜ್ಯದಲ್ಲಿ ಇಂದು ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಬರುವ ವರ್ಷದಲ್ಲಿ ಸರ್ಕಾರ ನವೋದ್ಯಮಗಳಿಗೆ, ಉದ್ಯಮಶೀಲತೆಗೆ, ವೈಜ್ಞಾನಿಕ ಚಿಂತನೆಗೆ ಸಂಪೂರ್ಣ ಬೆಂಬಲ ನೀಡುವುದು ಈ ವೇಳೆ ಎಂದು ಹೇಳಿದರು.
undefined
National Startup Day: 200 ಸ್ಟಾರ್ಟ್ ಅಪ್ ಗಳಿಗೆ ತಲಾ 50 ಲಕ್ಷದವರೆಗೆ ಮೂಲನಿಧಿ, ಅಶ್ವತ್ಥ್ ನಾರಾಯಣ
ಪ್ರಧಾನಮಂತ್ರಿಯವರ ದೂರದೃಷ್ಟಿಯ ಫಲವಾಗಿ ದೇಶದಲ್ಲಿ 500 ರ ಆಸುಪಾಸಿನಲ್ಲಿದ್ದ ಸ್ಟಾರ್ಟ್ ಅಪ್ಗಳ ಇಂದು 54000ದ ಗಡಿ ದಾಟಿದೆ. ಸರ್ಕಾರದ ಕಟ್ಟುಪಾಡುಗಳಿಂದ ಮುಕ್ತಿಗೊಳಿಸಿ ಇನ್ನೊವೇಶನ್, ನವೋದ್ಯಮಗಳಿಗೆ ಸಹಾಯ ಒದಗಿಸಲು ಒಂದು ವೇದಿಕೆಯನ್ನು ಸ್ಟಷ್ಟಿ ಮಾಡುವ ಮೂಲಕ ಸ್ಟಾರ್ಟ್ ಅಪ್ಗಳ ಸ್ಥಾಪನೆಗೆ ಪ್ರೋತ್ಸಾಹಿಸಿದ್ದಾರೆ. ಕರ್ನಾಟಕದಲ್ಲಿ ಅತಿ ಹೆಚ್ಚು ಸ್ಟಾರ್ಟ್ ಅಪ್ಗಳ ಬೆಳವಣಿಗೆಗೆ ಮಾನ್ಯ ಪ್ರಧಾನಮಂತ್ರಿಗಳೇ ಪ್ರೇರಣೆಯಾಗಿದ್ದಾರೆ. ಸ್ಟಾರ್ಟ್ ಅಪ್ಗಳಲ್ಲಿ ತೊಡಗಿರುವ ರಾಜ್ಯದ ಎಲ್ಲ ಯುವಕರ ಪರವಾಗಿ ಪ್ರಧಾನಮಂತ್ರಿಗಳಿಗೆ ಧನ್ಯವಾದಗಳನ್ನು ಅರ್ಪಿಸುವೆ ಎಂದರು.
Speaking on https://t.co/pOiXPr5UNA
ಐಟಿಬಿಟಿಯಲ್ಲಿ ದೇಶದಲ್ಲಿ ಕರ್ನಾಟಕ ಪ್ರಥಮ ಸ್ಥಾನ
ಕರ್ನಾಟಕ ಐಟಿಬಿಟಿ ಕ್ಷೇತ್ರದಲ್ಲಿ ದೇಶದಲ್ಲಿ ಮೊದಲ ಸ್ಥಾನದಲ್ಲಿದೆ. 80 ರ ದಶಕದಲ್ಲಿ ಮೊದಲ ಸಾಫ್ಟ್ ವೇರ್ ಕಂಪನಿ ಕರ್ನಾಟಕದಲ್ಲಿ ಪ್ರಾರಂಭವಾಯಿತು. ಅಂದಿನಿಂದ ಇಂದಿನವರೆಗೂ ರಾಜ್ಯದಲ್ಲಿ ಈ ಕ್ಷೇತ್ರದಲ್ಲಿ ಬೆಳೆದಿದ್ದು, ಐಟಿಬಿಟಿಗಳ ರಫ್ತು ಕರ್ನಾಟಕದಿಂದ ಹೆಚ್ಚಿನ ಪ್ರಮಾಣದಲ್ಲಿ ಆಗುತ್ತಿದೆ ಎಂದು ಸಿಎಂ ಬೊಮ್ಮಾಯಿ ವಿವರಿಸಿದರು.
ನವೋದ್ಯಮಿಗಳಿಗೆ ಆರ್ಥಿಕ ನೆರವು
ಎಲಿವೇಟ್ 100, ಎಸ್ಸಿಎಸ್ಟಿಯವರಿಗೆ ಎಲಿವೇಟ್ ಉನ್ನತಿ ಕಾರ್ಯಕ್ರಮಗಳ ಮೂಲಕ ನವೋದ್ಯಮಿಗಳಿಗೆ ಆರ್ಥಿಕ ನೆರವು ನೀಡಲಾಗುತ್ತಿದೆ. ಅಮೃತ ನವೋದ್ಯಮ ಯೋಜನೆಯಡಿ ಓಬಿಸಿ ಹಾಗೂ ಅಲ್ಪಸಂಖ್ಯಾತರ 75 ಸ್ಟಾರ್ಟ್ ಅಪ್ಗಳಿಗೆ ಆರ್ಥಿಕ ನೆರವು ನೀಡಲಾಗುತ್ತಿದೆ. ಮಹಿಳಾ ನವೋದ್ಯಮಿಗಳಿಗೆ ಉತ್ತೇಜಿಸಲು ಎಲಿವೇಟ್ 25 ಸ್ಟಾರ್ಟ್ ಅಪ್ಗಳಿಗೆ ಆರ್ಥಿಕ ನೆರವು ನೀಡಲಾಗುತ್ತಿದೆ. ರಾಜ್ಯದಲ್ಲಿ 482 ಸ್ಟಾರ್ಟ್ ಅಪ್ಗಳಿಗೆ 120 ಕೋಟಿ ರೂ.ಗಳ ಆರ್ಥಿಕ ನೆರವು ನೀಡಲಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಬಿಯಾಂಡ್ ಬೆಂಗಳೂರು
ಬಿಯಾಂಡ್ ಬೆಂಗಳೂರು ಯೋಜನೆಯಡಿ ರಾಜ್ಯದ ಜಿಲ್ಲೆಗಳಲ್ಲಿ ನವೋದ್ಯಮ, ಐಟಿ ಬಿಟಿ, ಸ್ಟಾರ್ಟ್ ಅಪ್ಗಳನ್ನು ಪ್ರಾರಂಭಿಸುವ ಚಿಂತನೆಯಿದೆ. ರಾಜ್ಯದಲ್ಲಿ ನೂತನ ಆರ್ ಎಂಡ್ ಡಿ ನೀತಿಯನ್ನು ಪ್ರಾರಂಭಿಸಿ, ಸಣ್ಣ ಮಟ್ಟದ ಗ್ಯಾರೇಜಿನಿಂದ ಹಿಡಿದು ದೊಡ್ಡ ಕೈಗಾರಿಕೆವರೆಗೂ ವೈಜ್ಞಾನಿಕ ಸಂಶೋಧನೆಗೆ ಸಹಕಾರ ನೀಡಲಾಗುವುದು ಎಂದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಶಾಲೆಗಳಲ್ಲಿ ಸಂಶೋಧನೆ ಹಾಗೂ ನವೋದ್ಯಮಕ್ಕೆ ಭದ್ರ ಬುನಾದಿ
ಶಾಲೆಗಳಲ್ಲಿ ವೈಜ್ಞಾನಿಕ ಚಿಂತನೆ, ಉದ್ಯಮಶೀಲತೆಗೆ ಉತ್ತೇಜನ ನೀಡಲು ಶಾಲೆಗಳ ಪಠ್ಯಪುಸ್ತಕದಲ್ಲಿ ಈ ವಿಷಯಗಳನ್ನು ಸೇರಿಸಲು ತೀರ್ಮಾನಿಸಲಾಗಿದೆ. 150 ಐಟಿಐಗಳನ್ನು ಉನ್ನತೀಕರಿಸಲಾಗಿದೆ. ಡಿಪ್ಲೊಮಾ ಕಾಲೇಜುಗಳನ್ನು ಉನ್ನತೀಕರಿಸಲು ಯೋಜಿಸಲಾಗಿದೆ. ಶಾಲೆ ಕಾಲೇಜುಗಳಲ್ಲಿ ವೈಜ್ಞಾನಿಕ ಚಿಂತನೆ ಸಂಶೋಧನೆ ಹಾಗೂ ನವೋದ್ಯಮಕ್ಕೆ ಭದ್ರ ಬುನಾದಿ ಹಾಕುವ ಮಹಾತ್ವಾಕಾಂಕ್ಷೆಯ ಯೋಜನೆಯನ್ನು ಸರ್ಕಾರ ತರಲಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಬೆಂಗಳೂರು ನಗರದಲ್ಲಿ 180 ಕ್ಕೂ ಹೆಚ್ಚು ವಿವಿಧ ಕ್ಷೇತ್ರಗಳಲ್ಲಿ ಸಂಶೋಧನಾ ಕೇಂದ್ರಗಳಿವೆ. ಕೃಷಿ, ತೋಟಗಾರಿಕೆ, ರೇಷ್ಮೆ ಉದ್ಯಮ, ಹೆಚ್ಚು ಉದ್ಯೋಗ ಸೃಜಿಸುವಂತಹ ಕ್ಷೇತ್ರಗಳಲ್ಲಿ ಸ್ಟಾರ್ಟ್ ಅಪ್ಗಳು ಬರಬೇಕೆನ್ನುವ ಚಿಂತನೆ ಸರ್ಕಾರ ಹೊಂದಿದೆ. ಸಾಮಾಜಿಕ ಜವಾಬ್ದಾರಿಯಿಂದ ಶಿಕ್ಷಣ, ಆರೋಗ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಕ್ಷೇತ್ರಗಳಲ್ಲಿ ಸ್ಟಾರ್ಟ್ ಅಪ್ಗಳು ಹೆಚ್ಚು ಬರಬೇಕೆನ್ನುವ ಆಶಯವನ್ನು ಸಿಎಂ ಬೊಮ್ಮಾಯಿ ವ್ಯಕ್ತಪಡಿಸಿದರು.