
ನವದೆಹಲಿ: ಕೇಂದ್ರ ಬಜೆಟ್ ಮಂಡನೆಗೂ ಮುನ್ನವೇ ಎಲ್‌ಪಿಜಿ ಸಿಲಿಂಡರ್ ಬೆಲೆ ಇಳಿಕೆಯಾಗಿದೆ. ಹೊಸ ದರಗಳು ಇಂದಿನಿಂದಲೇ ಅನ್ವಯವಾಗಲಿದೆ. ಹೊಸ ದರದ ಪ್ರಕಾರ, ದೇಶದ ರಾಜಧಾನಿ ನವದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ 1,797 ರೂಪಾಯಿ ಆಗಿದೆ. ನವದೆಹಲಿಯಲ್ಲಿ 19 ಕೆಜಿ ಸಿಲಿಂಡರ್ ಬೆಲೆಯಲ್ಲಿ 7 ರೂಪಾಯಿ ಇಳಿಕೆಯಾಗಿದೆ. ಗೃಹ ಬಳಕೆಯ 14 ಕೆಜಿ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಗೃಹ ಬಳಕೆ ಸಿಲಿಂಡರ್‌ನ ಹಿಂದಿನ ದರಗಳೇ ಮುಂದುವರಿಯಲಿವೆ.
19 ಕೆಜಿ ವಾಣಿಜ್ಯ LPG ಸಿಲಿಂಡರ್‌ಗಳನ್ನು ಹೋಟೆಲ್, ರೆಸ್ಟೋರೆಂಟ್ ಮತ್ತು ಇತರ ವ್ಯವಹಾರಗಳಲ್ಲಿ ವ್ಯಾಪಕವಾಗಿ ಬಳಸಲಾಗುತ್ತದೆ. ಆದ್ದರಿಂದ ಈ ಬೆಲೆ ಪರಿಷ್ಕರಣೆಯು ದೈನಂದಿನ ಕಾರ್ಯಾಚರಣೆಗಳಿಗಾಗಿ ಈ ಸಿಲಿಂಡರ್‌ಗಳನ್ನು ಬಳಸುವ ರೆಸ್ಟೋರೆಂಟ್‌ಗಳು, ಹೋಟೆಲ್‌ಗಳು ಮತ್ತು ಇತರ ವಾಣಿಜ್ಯ ಸಂಸ್ಥೆಗಳ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ. ಒಂದು ವೇಳೆ ಸತತವಾಗಿ ವಾಣಿಜ್ಯ ಸಿಲಿಂಡರ್ ಬೆಲೆ ದರ ಏರಿಕೆಯಾದ್ರೆ ಹೋಟೆಲ್ ತಿಂಡಿ ದರ ಸೇರಿದಂತೆ ಇನ್ನಿತರ ವಸ್ತುಗಳ ಮೇಲೆ ನೇರ ಪರಿಣಾಮ ಬೀರುತ್ತದೆ.
2024ರ ಡಿಸೆಂಬರ್ ನಲ್ಲಿ 16 ಕೆಜಿ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ 62 ರೂಪಾಯಿಗಳಷ್ಟು ಏರಿಕೆಯಾಗಿತ್ತು. ಸ್ಥಳೀಯ ತೆರಿಗೆಗಳು ಮತ್ತು ಸಾರಿಗೆ ವೆಚ್ಚಗಳ ಆಧಾರದ ಮೇಲೆ LPG ಬೆಲೆಗಳು ರಾಜ್ಯದಿಂದ ರಾಜ್ಯಕ್ಕೆ ಬದಲಾಗುತ್ತವೆ. ತೈಲ ಮಾರುಕಟ್ಟೆ ಕಂಪನಿಗಳು ಪ್ರತಿ ತಿಂಗಳ ಮೊದಲ ದಿನದಂದು ಎಲ್‌ಪಿಜಿ ಸಿಲಿಂಡರ್‌ಗಳನ್ನು ಪರಿಷ್ಕರಣೆ ಮಾಡುತ್ತವೆ. ಹೊಸ ದರಗಳು ತಿಂಗಳ ಮೊದಲ ದಿನದಿಂದಲೇ ಅನ್ವಯವಾಗುತ್ತವೆ.
ಪ್ರಮುಖ ನಗರಗಳಲ್ಲಿ 19 ಕೆಜಿ ಸಿಲಿಂಡರ್ ಬೆಲೆ
ನವದೆಹಲಿ: 1,797 ರೂಪಾಯಿ
ಕೋಲ್ಕತ್ತಾ: 1,907 ರೂಪಾಯಿ
ಮುಂಬೈ: 1,749 ರೂಪಾಯಿ
ಚೆನ್ನೈ: 1,959 ರೂಪಾಯಿ
ಇದನ್ನೂ ಓದಿ: ಅನಿಶ್ಚಿತತೆಗಳ ನಡುವೆಯೂ ಭಾರತದ ಆರ್ಥಿಕತೆ: ಬೆಳವಣಿಗೆ ಮತ್ತು ಸವಾಲುಗಳು
ಬೆಂಗಳೂರಿನಲ್ಲಿ ಸಿಲಿಂಡರ್ ಬೆಲೆಗಳು ಹೀಗಿವೆ
ಗೃಹ ಬಳಕೆ (14.2 ಕೆಜಿ): 805.50 ರೂಪಾಯಿ
ವಾಣಿಜ್ಯ ಬಳಕೆ (19 ಕೆಜಿ) : 1,874 ರೂಪಾಯಿ (6 ರೂ. ಇಳಿಕೆ)
ಗೃಹ ಬಳಕೆ (5 ಕೆಜಿ): 300.50 ರೂಪಾಯಿ
ವಾಣಿಜ್ಯ ಬಳಕೆ (47.5 ಕೆಜಿ): 4,682 ರೂಪಾಯಿ (15 ರೂ. ಇಳಿಕೆ)
ಗೃಹ ಬಳಕೆ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಗಳು ಆಗಿಲ್ಲ. ಹಳೆಯ ದರಗಳೇ ಮುಂದುವರಿಯಲಿವೆ. ಗೃಹಬಳಕೆ ಸಿಲಿಂಡರ್ ಬೆಲೆ ಈ ವರ್ಷದ ಆಗಸ್ಟ್‌ನಿಂದ ಗೃಹ ಬಳಕೆ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಗಳು ಆಗಿಲ್ಲ. ಕಳೆದ 5 ತಿಂಗಳಿನಿಂದ ಗೃಹಬಳಕೆ ಸಿಲಿಂಡರ್ ಬೆಲೆ ಸ್ಥಿರವಾಗಿದೆ. ಇಂಡೇನ್ ಕಂಪನಿ ಅತಿದೊಡ್ಡ ಎಲ್‌ಪಿಜಿ ಬ್ರ್ಯಾಂಡ್ ಆಗಿದ್ದು, ಇಂಡಿಯನ್ ಆಯಿಲ್ ಎರಡನೇ ಸ್ಥಾನದಲ್ಲಿದೆ.
ಇದನ್ನೂ ಓದಿ:Union Budget 2025 Live Updates: ಇಂದು ನಿರ್ಮಲಾ 8ನೇ ಕೇಂದ್ರ ಬಜೆಟ್ ಮಂಡನೆ
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.