ರಾಜ್ಯದ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ನವೀನ ತಂತ್ರಜ್ಞಾನ ಬಳಸಿಕೊಂಡು ಕಲಬುರಗಿ, ಹುಬ್ಬಳ್ಳಿ, ಧಾರವಾಡ, ಮಂಗಳೂರು, ಮೈಸೂರು, ಬೆಂಗಳೂರಿನ ಪಕ್ಕದಲ್ಲಿ ‘ತಂತ್ರಜ್ಞಾನ ನಗರ’ಗಳನ್ನು ನಿರ್ಮಿಸಲಾಗುವುದು’ ಎಂದ ಸಿಎಂ ಬೊಮ್ಮಾಯಿ
ಬೆಂಗಳೂರು(ನ.17): ಜ್ಞಾನ ಮತ್ತು ಮಾಹಿತಿ-ತಂತ್ರಜ್ಞಾನ ಕ್ಷೇತ್ರಗಳ ಬೆಳವಣಿಗೆ ಉತ್ತೇಜಿಸಲು ರಾಜ್ಯದಲ್ಲಿ 6 ಹೊಸ ‘ಟೆಕ್ ಸಿಟಿ’ಗಳನ್ನು ಯೋಜನಾಬದ್ಧವಾಗಿ ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು. ಬೆಂಗಳೂರಿನ ಅರಮನೆಯಲ್ಲಿ ಆಯೋಜಿಸಿರುವ ಮೂರು ದಿನಗಳ ‘ಬೆಂಗಳೂರು ತಂತ್ರಜ್ಞಾನ ಶೃಂಗ’ದ ರಜತೋತ್ಸವ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ರಾಜ್ಯದ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ನವೀನ ತಂತ್ರಜ್ಞಾನ ಬಳಸಿಕೊಂಡು ಕಲಬುರಗಿ, ಹುಬ್ಬಳ್ಳಿ, ಧಾರವಾಡ, ಮಂಗಳೂರು, ಮೈಸೂರು, ಬೆಂಗಳೂರಿನ ಪಕ್ಕದಲ್ಲಿ ‘ತಂತ್ರಜ್ಞಾನ ನಗರ’ಗಳನ್ನು ನಿರ್ಮಿಸಲಾಗುವುದು’ ಎಂದರು.
‘ನಗರ ನಿರ್ಮಾಣದ ಬಗ್ಗೆ ಆರು ತಿಂಗಳೊಳಗೆ ಯೋಜನೆ ರೂಪಿಸಿ ಅನುಷ್ಠಾನಕ್ಕೆ ತರಲಾಗುವುದು. ಬೆಂಗಳೂರಿನ ಪಕ್ಕ ಹೊಸ ಜ್ಞಾನ, ವಿಜ್ಞಾನ ಹಾಗೂ ಟೆಕ್ ಸಿಟಿಯನ್ನು ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ನಿರ್ಮಿಸಲಾಗುವುದು. ಸ್ಟಾರ್ಟಪ್‌ಗಳನ್ನು ಪ್ರೋತ್ಸಾಹಿಸಲು ಸ್ಟಾರ್ಟಪ್ ಪಾರ್ಕ್ ಅಗತ್ಯವಿದ್ದು ಇದನ್ನೂ 6 ತಿಂಗಳಲ್ಲಿ ಸ್ಥಾಪಿಸಲಾಗುವುದು’ ಎಂದು ಭರವಸೆ ನೀಡಿದರು.
BTS2022: 100ಕ್ಕೂ ಹೆಚ್ಚು ಸ್ಟಾರ್ಟಪ್ ಮಳಿಗೆಗಳಿಗೆ ಭೇಟಿ ನೀಡಿ ಪ್ರೋತ್ಸಾಹಿಸಿದ ಅಶ್ವತ್ಥನಾರಾಯಣ
ಬೆಂಗಳೂರಿನಲ್ಲಿ ಎಲ್ಲವೂ ಸಾಧ್ಯ:
‘ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (ಬಿಐಎಎಲ್) 2ನೇ ಟರ್ಮಿನಲ್ ಉದ್ಘಾಟನೆ ಮಾಡಿದ್ದು, ಜಗತ್ತಿನ ಅತ್ಯಂತ ಸುಂದರವಾದ ಟರ್ಮಿನಲ್ ಇದಾಗಿದೆ. ಕಳೆದ 25 ವರ್ಷಗಳಿಂದ ಬೆಂಗಳೂರು ಟೆಕ್ ಸಮ್ಮಿಟ್ ಯಶಸ್ವಿಯಾಗಿ ನಡೆಯುತ್ತಿದೆ. ನಗರಕ್ಕೆ ಆಗಮಿಸಿದವರು ಮೊದಲು ಇಸ್ಫೋಸಿಸ್, ವಿಪ್ರೋ ಮತ್ತಿತರ ಕಂಪನಿಗಳಿಗೆ ಭೇಟಿ ನೀಡುತ್ತಾರೆ. ಬೆಂಗಳೂರಿನಲ್ಲಿ ಎಲ್ಲವೂ ಸಾಧ್ಯವಿದೆ. ಆದ್ದರಿಂದಲೇ ಎಲ್ಲರೂ ಬೆಂಗಳೂರನ್ನು ಇಷ್ಟಪಡುತ್ತಾರೆ’ ಎಂದು ಬಣ್ಣಿಸಿದರು.
‘ಬೆಂಗಳೂರಿಗೆ ಪ್ರತಿ ದಿನ 5 ಸಾವಿರಕ್ಕೂ ಅಧಿಕ ಎಂಜಿನಿಯರ್‌ಗಳು ಭೇಟಿ ನೀಡಿ ತೆರಳುತ್ತಾರೆ. ನಗರದಲ್ಲಿ ಸುಮಾರು 400 ಆರ್ ಆ್ಯಂಡ್ ಡಿ (ಸಂಶೋಧನೆ ಮತ್ತು ಅಭಿವೃದ್ಧಿ) ಕೇಂದ್ರಗಳಿವೆ. ಬೆಂಗಳೂರಿನ ಆಚೆಯೂ ಅಭಿವೃದ್ಧಿಗೆ ಸರ್ಕಾರ ಉದ್ಯಮಿಗಳಿಗೆ ಎಲ್ಲ ರೀತಿಯ ಸಹಕಾರ ನೀಡಲಿದೆ. ಮೈಸೂರು, ಮಂಗಳೂರು, ಹುಬ್ಬಳ್ಳಿ-ಧಾರವಾಡ ಭಾಗದಲ್ಲಿ ಮಾಹಿತಿ ತಂತ್ರಜ್ಞಾನ ಉದ್ಯಮಕ್ಕೆ ಆದ್ಯತೆ ನೀಡುತ್ತೇವೆ’ ಎಂದು ತಿಳಿಸಿದರು.
ರಾಜ್ಯದಲ್ಲಿ ಅತ್ಯಂತ ಆಸಕ್ತಿದಾಯಕ ಸ್ಟಾರ್ಟಪ್‌ಗಳು ಜನ್ಮ ತಾಳಿವೆ. ನಮ್ಮ ಶೈಕ್ಷಣಿಕ ವ್ಯವಸ್ಥೆ ಉತ್ತಮವಾಗಿದೆ. ರಾಜ್ಯದ ಜೈವಿಕ ತಂತ್ರಜ್ಞಾನದ ಶೇ.40 ರಷ್ಟು ಕಂಪನಿಗಳು ಬೆಂಗಳೂರಿನಲ್ಲೇ ಇವೆ ಅಂತ ಉದ್ಯಮಿ ಕಿರಣ್ ಮಜುಂದಾರ್ ಶಾ ತಿಳಿಸಿದ್ದಾರೆ.
Bengaluru Tech Summit 2020 : ಕೃಷಿ, ವಿದ್ಯುತ್ ಉತ್ಪಾದನೆ ಹೆಚ್ಚಳ ಅನಿವಾರ್ಯ
ಸಂಶೋಧನೆಗಳಲ್ಲಿ ಬೆಂಗ್ಳೂರು ಮುಂದು
ಬೆಂಗಳೂರು ನಗರ ತಂತ್ರಜ್ಞಾನ ಮತ್ತು ಸ್ಟಾರ್ಟಪ್‌ಗಳ ತವರು. ಸಂಶೋಧನೆಯ ತಾಣ. ತಂತ್ರಜ್ಞಾನದ ಕ್ರಾಂತಿಯೇ ಇಲ್ಲಿ ನಡೆಯುತ್ತಿದೆ. ಎಲ್ಲರನ್ನೂ ಒಳಗೊಳ್ಳುವ ನಾವೀನ್ಯತೆಯ, ಸಂಸ್ಕೃತಿಯ ನಗರ ಬೆಂಗಳೂರು. ಸ್ಟಾರ್ಟಪ್, ತಂತ್ರಜ್ಞಾನಗಳ ತವರಾಗಿದ್ದು, ಅತಿ ಹೆಚ್ಚು ಸಂಶೋಧನೆಗಳು ಇಲ್ಲಿಯೇ ನಡೆಯುತ್ತವೆ ಅಂತ ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ಎಲ್ಲೆಲ್ಲಿ ಟೆಕ್ ಸಿಟಿ?
ಕಲಬುರಗಿ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ಮೈಸೂರು, ಮಂಗಳೂರು, ಬೆಂಗಳೂರಿನ ಹೊರಭಾಗದಲ್ಲಿ