
ಬೆಂಗಳೂರು(ನ.02): ದೇಶದ ಪ್ರಮುಖ ಖಾಸಗಿ ಬ್ಯಾಂಕ್ HDFCಯಲ್ಲಿ, ತಾಂತ್ರಿಕ ದೋಷದ ಪರಿಣಾಮ ನೆಟ್ ಬ್ಯಾಂಕಿಂಗ್ ವ್ಯವಸ್ಥೆ ಕಾರ್ಯ ನಿರ್ವಹಿಸುತ್ತಿಲ್ಲ ಎಂಬ ದೂರು ಕೇಳಿ ಬಂದಿದೆ.
ನೆಟ್ ಬ್ಯಾಂಕಿಂಗ್‌ಗೆ ಲಾಗ್ ಆನ್ ಮಾಡಲಾಗದ ಕೆಲವು ಗ್ರಾಹಕರು ಟ್ವಿಟ್ಟರ್ ಮೂಲಕ ಬ್ಯಾಂಕ್‌ನ್ನು ತರಾಟೆಗೆ ತೆಗೆದುಕೊಂಡಿದ್ದು, ಕೂಡಲೇ ದೋಷ ಸರಿಪಡಿಸುವಂತೆ ಒತ್ತಾಯಿಸಿದ್ದಾರೆ.
ಆನ್‌ಲೈನ್ ಟ್ರಾನ್ಸಫರ್, ಕ್ರೆಡಿಟ್ ಕಾರ್ಡ್ ಬಿಲ್ ಹಾಗೂ ಇತರೆ ವ್ಯವಹಾರಗಳಿಗೆ ಗ್ರಾಹರಕರಿಗೆ ತೊಂದರೆಯಾಗಿದ್ದು, ಮೊಬೈಲ್ ಆ್ಯಪ್ ಕೂಡ ಕಾರ್ಯ ಸ್ಥಗಿತಗೊಳಿಸಿರುವುದು ಗ್ರಾಹಕರಿಗೆ ತೊಂದರೆಯಾಗಿದೆ.
ಪ್ರಮುಖವಾಗಿ ಕ್ರೆಡಿಟ್ ಕಾರ್ಡ್ ಪಾವತಿ ವಿಳಂಬವಾಗಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಶುಲ್ಕ ಪಾವತಿಸಬೇಕಾದ ಅನಿವಾರ್ಯತೆಗೆ ಸಿಲುಕುವ ಭೀತಿ HDFC ಬ್ಯಾಂಕ್ ಗ್ರಾಹರಕನ್ನು ಕಾಡುತ್ತಿದೆ.
ಈ ಹಿನ್ನೆಲೆಯಲ್ಲಿ ಕೂಡಲೇ ಆನ್‌ಲೈನ್ ಮತ್ತು ಫೋನ್ ಆಪ್ ಬ್ಯಾಂಕಿಂಗ್ ವ್ಯವಸ್ಥೆಯನ್ನು ಸರಿಪಡಿಸುವಂತೆ ಗ್ರಾಹರಕರು ಒತ್ತಾಯಿಸುತ್ತಿದ್ದು, ಈ ಕುರಿತು ತುರ್ತು ಕ್ರಮ ಕೈಗೊಳ್ಳುತ್ತಿರುವುದಾಗಿ HDFC ಬ್ಯಾಂಕ್ ಸ್ಪಷ್ಟನೆ ನೀಡಿದೆ.
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.