
Business Desk: ಭಾರತದಲ್ಲಿ ಹಣದುಬ್ಬರ ದರ ಭಾರತೀಯ ರಿಸರ್ವ್ ಬ್ಯಾಂಕಿನ (RBI) ಸಹನಾ ಮಟ್ಟ ಶೇ.2-6 ಕ್ಕಿಂತ ಹೆಚ್ಚಿದ್ದು, ತನ್ನ ಉದ್ಯೋಗಿಗಳು ಹಾಗೂ ಪಿಂಚಣಿದಾರರಿಗೆ ನಿರಾಳತೆ ಒದಗಿಸಲು ಕೇಂದ್ರ ಸರ್ಕಾರ ಮುಂದಾಗಿದೆ ಎನ್ನಲಾಗಿದೆ. 7ನೇ ವೇತನ ಆಯೋಗದ ಅಡಿಯಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ ಈ ತಿಂಗಳು (ಜುಲೈ) ಸರ್ಕಾರ ಶೇ.5ರಷ್ಟು ತುಟ್ಟಿ ಭತ್ಯೆ ಯನ್ನು (DA) ಹೆಚ್ಚಳ ಮಾಡುವ ಸಾಧ್ಯತೆಯಿದೆ ಎಂದು ವರದಿಗಳು ಹೇಳಿವೆ.
ದೇಶದಲ್ಲಿ ಸಿಪಿಐ ಆಧಾರಿತ ಹಣದುಬ್ಬರ (CPI inflation) 8 ವರ್ಷಗಳ ಗರಿಷ್ಠ ಮಟ್ಟಕ್ಕೆ ತಲುಪಿದೆ. ಇನ್ನು ವಿವಿಧ ವಸ್ತುಗಳ ಬೆಲೆಗಳಲ್ಲಿ ಕೂಡ ಹೆಚ್ಚಳವಾಗಿದೆ. ಹೀಗಾಗಿ ಹಣದುಬ್ಬರ ಹೆಚ್ಚಳದಿಂದ ತತ್ತರಿಸಿರುವ ನೌಕರರಿಗೆ ಕೇಂದ್ರ ಸರ್ಕಾರ ಇನ್ನೊಮ್ಮೆ ತುಟ್ಟಿ ಭತ್ಯೆ ಹೆಚ್ಚಳ ಮಾಡುವ ಮೂಲಕ ಸ್ವಲ್ಪ ಮಟ್ಟಿನ ನಿರಾಳತೆ ಒದಗಿಸಲಿದೆ ಎಂದು ಹೇಳಲಾಗಿದೆ. ಸರ್ಕಾರ ಶೇ.5ರಷ್ಟು ತುಟ್ಟಿ ಭತ್ಯೆ ಹೆಚ್ಚಳ ಮಾಡಿದ್ರೆ ಕೇಂದ್ರ ಸರ್ಕಾರಿ ಉದ್ಯೋಗಿಗಳು ಒಟ್ಟು ಶೇ.39ರಷ್ಟು ತುಟ್ಟಿ ಭತ್ಯೆ ಪಡೆಯಲಿದ್ದಾರೆ ಎಂದು ವರದಿ ಹೇಳಿದೆ. ಪ್ರಸ್ತುತ ಸರ್ಕಾರಿ ಉದ್ಯೋಗಿಗಳು ಮೂಲ ವೇತನದ ಶೇ.34ರಷ್ಟು ತುಟ್ಟಿ ಭತ್ಯೆ ಪಡೆಯುತ್ತಿದ್ದಾರೆ. ತುಟ್ಟಿ ಭತ್ಯೆ ಅಥವಾ ಡಿಎ ಅನ್ನು ಸರ್ಕಾರಿ ನೌಕರರಿಗೆ ನೀಡಿದ್ರೆ, ಡಿಯರನೆಸ್ ರಿಲೀಫ್ (DR) ಅನ್ನು ಪಿಂಚಣಿದಾರರಿಗೆ ನೀಡಲಾಗುತ್ತದೆ.
Credit Card Users:ಕ್ರೆಡಿಟ್ ಕಾರ್ಡ್ ಬಳಕೆದಾರರಿಗೆ ಗುಡ್ ನ್ಯೂಸ್; ಬಿಲ್ಲಿಂಗ್ ಸೈಕಲ್ ಬದಲಾಯಿಸಲು ಅವಕಾಶ
ಅಖಿಲ ಭಾರತ ಗ್ರಾಹಕರ ಬೆಲೆ ಸೂಚ್ಯಂಕದಲ್ಲಿನ (AICPI) ಬದಲಾವಣೆ ಆಧಾರಿಸಿ ಡಿಎ ಪರಿಷ್ಕರಿಸಲಾಗುತ್ತದೆ. ಪ್ರಸ್ತುತ AICPI ಅಧಿಕ ಮಟ್ಟದಲ್ಲಿರುವ ಕಾರಣ ಸರ್ಕಾರಿ ಉದ್ಯೋಗಿಗಳ ಡಿಎಯಲ್ಲಿ ಹೆಚ್ಚಳವಾಗುವ ಸಾಧ್ಯತೆ ಅಧಿಕವಿದೆ. ಮೇನಲ್ಲಿ ರಿಟೇಲ್ ಹಣದುಬ್ಬರ ಶೇ.7.04ರಷ್ಟಿದ್ದು, ಇದು ಆರ್ ಬಿಐ ಸಹನಾ ಮಟ್ಟವಾದ ಶೇ.2-6ರನ್ನು ಮೀರಿತ್ತು.
ಕೋವಿಡ್ -19 ಕಾರಣದಿಂದ ಸೃಷ್ಟಿಯಾದ ಹೆಚ್ಚುವರಿ ವೆಚ್ಚಗಳನ್ನು ಭರಿಸಲು ಕೇಂದ್ರ ಸರ್ಕಾರ ಡಿಎ (DA) ಹಾಗೂ ಡಿಆರ್ (DR) ದರ ಹೆಚ್ಚಳದ ಮೂರು ಕಂತುಗಳನ್ನು ತಡೆ ಹಿಡಿದಿತ್ತು. 2020 ಜನವರಿ 1, 2020 ಜುಲೈ 1 ಹಾಗೂ 2021ರ ಜನವರಿ 1ರ ಡಿಎ ಹಾಗೂ ಡಿಆರ್ ಕಂತುಗಳನ್ನು ಸರ್ಕಾರ ತಡೆ ಹಿಡಿದಿತ್ತು. ಕೇಂದ್ರ ಸರ್ಕಾರಿ ನೌಕರರ ಡಿಎ ಹಾಗೂ ಡಿಆರ್ ದರವನ್ನು ವರ್ಷಕ್ಕೆ ಎರಡು ಬಾರಿ ಜನವರಿ ಮತ್ತು ಜುಲೈಯಲ್ಲಿ ನವೀಕರಿಸಲಾಗುತ್ತದೆ. ಡಿಎ ಹಾಗೂ ಡಿಆರ್ ದರ ಏರಿಕೆಯನ್ನು ತಡೆ ಹಿಡಿಯೋ ಮೂಲಕ ಸುಮಾರು 34,402 ಕೋಟಿ ರೂ. ಉಳಿತಾಯ ಮಾಡಲಾಗಿದೆ ಎಂದು ಕಳೆದ ವರ್ಷ ಆಗಸ್ಟ್ ನಲ್ಲಿ ರಾಜ್ಯಸಭೆಗೆ ನೀಡಿದ ಲಿಖಿತ ಉತ್ತರದಲ್ಲಿ ವಿತ್ತ ಸಚಿವೆ (Finance Minister) ನಿರ್ಮಲಾ ಸೀತಾರಾಮನ್ (Nirmala Sitharaman ) ಮಾಹಿತಿ ನೀಡಿದ್ದರು. 2021ರ ಜುಲೈನಲ್ಲಿ ಡಿಎ ಹಾಗೂ ಡಿಆರ್ ಹೆಚ್ಚಳದ ಮೇಲಿನ ತಡೆಯನ್ನು ಹಿಂಪಡೆದ ಸರ್ಕಾರ, ಆ ಬಳಿಕ ಒಟ್ಟು ಮೂರು ಬಾರಿ ಡಿಎ ಹಾಗೂ ಡಿಆರ್ ಭತ್ಯೆಗಳಲ್ಲಿ ಹೆಚ್ಚಳ ಮಾಡಿತ್ತು.
Business Idea: ಅತಿ ಹೆಚ್ಚು ಬೇಡಿಕೆಯಿರೋ ಈ ಬ್ಯುಸಿನೆಸ್ ಶುರು ಮಾಡಿ ಲಾಭ ಗಳಿಸಿ
ಡಿಎ ಲೆಕ್ಕಾಚಾರ ಹೇಗೆ?
ಉದ್ಯೋಗಿಗಳ ಜೀವನ ನಿರ್ವಹಣಾ ವೆಚ್ಚದ ಆಧಾರದಲ್ಲಿ ಡಿಎ ನಿಗದಿಪಡಿಸಲಾಗುತ್ತದೆ. ಉದ್ಯೋಗಿ ನಗರ, ಗ್ರಾಮೀಣ, ಅರೆಪಟ್ಟಣ ಹೀಗೆ ಯಾವ ಪ್ರದೇಶದಲ್ಲಿ ವಾಸಿಸುತ್ತಾನೆ ಎಂಬ ಆಧಾರದಲ್ಲಿ ಡಿಎ ನಿಗದಿಪಡಿಸಲಾಗುತ್ತದೆ. ಕೇಂದ್ರ ಸರ್ಕಾರಿ ನೌಕರರು ಹಾಗೂ ಪಿಂಚಣಿದಾರರ ಡಿಎ ಲೆಕ್ಕಾಚಾರ ಮಾಡೋ ಫಾರ್ಮುಲಾವನ್ನು ಕೇಂದ್ರ ಸರ್ಕಾರ 2006ರಲ್ಲಿ ಬದಲಾಯಿಸಿತ್ತು.ಅದು ಈ ಕೆಳಗಿನಂತಿದೆ.
ತುಟ್ಟಿ ಭತ್ಯೆ %= (ಅಖಿಲಾ ಭಾರತ ಗ್ರಾಹಕ ದರ ಸೂಚ್ಯಂಕದ ಸರಾಸರಿ (ಮೂಲ ವರ್ಷ 2001=100) ಕಳೆದ 3 ತಿಂಗಳು-126.33)/126.33)x100.
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.