ಬೆಂಗಳೂರಿನಿಂದ ಚಿತ್ರದುರ್ಗಕ್ಕೆ ಕಡಿಮೆಯಾಗಲಿದೆ 110 ಕಿ.ಮೀ. ಅಂತರ !

Kannadaprabha News, Ravi Janekal |   | Kannada Prabha
Published : Jul 08, 2025, 01:10 PM ISTUpdated : Jul 08, 2025, 02:15 PM IST
Chitradurga

ಸಾರಾಂಶ

ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲು ಮಾರ್ಗ 2027ರ ಮಾರ್ಚ್‌ ವೇಳೆಗೆ ಪೂರ್ಣಗೊಳ್ಳಲಿದೆ. ಬೆಂಗಳೂರಿನಿಂದ ದಾವಣಗೆರೆ, ಹುಬ್ಬಳ್ಳಿ, ಬೆಳಗಾವಿ, ಗದಗ ಮತ್ತು ವಿಜಯಪುರ ನಡುವಿನ ಅಂತರ ಕಡಿಮೆಯಾಗಲಿದ್ದು, ಪ್ರಯಾಣ ಸಮಯ ಉಳಿತಾಯವಾಗಲಿದೆ. ಈ ಮಾರ್ಗದಿಂದ ಹಲವು ಪ್ರಯೋಜನಗಳನ್ನು ಪಡೆಯಬಹುದು.

ದಾವಣಗೆರೆ (ಜು.8): ತುಮಕೂರು- ಚಿತ್ರದುರ್ಗ- ದಾವಣಗೆರೆ ನೇರ ರೈಲು ಮಾರ್ಗ ಕಾಮಗಾರಿಯನ್ನು ಮಾರ್ಚ್- 2027ರೊಳಗೆ ಮುಗಿಸುವಂತೆ ದಾವಣಗೆರೆಯ ನೈರುತ್ಯ ರೈಲ್ವೆ ವಲಯ ಪ್ರಯಾಣಿಕರ ಸಂಘ ಕಾರ್ಯದರ್ಶಿ ರೋಹಿತ್ ಎಸ್. ಜೈನ್ ರೈಲ್ವೆ ಮಂತ್ರಿ ಅಶ್ವಿನಿ ವೈಷ್ಣವ್ ಅವರಿಗೆ ಪತ್ರ ಬರೆದಿದ್ದಾರೆ.

ಈ ಹೊಸ ಮಾರ್ಗವು ಬೆಂಗಳೂರಿನಿಂದ ದಾವಣಗೆರೆ, ಹುಬ್ಬಳ್ಳಿ, ಬೆಳಗಾವಿ, ಗದಗ ಮತ್ತು ವಿಜಯಪುರ ಅಂತರವನ್ನು 65 ಕಿ.ಮೀ.ನಷ್ಟು ಕಡಿಮೆ ಮಾಡುತ್ತದೆ. ಈ ರೈಲು ಮಾರ್ಗದ ಅಂತಿಮ ಸಮೀಕ್ಷೆ ಮುಗಿದಿದೆ ಮತ್ತು ದಾವಣಗೆರೆ ಮತ್ತು ತುಮಕೂರು ಕಡೆಯಿಂದ ಕಾಮಗಾರಿ ಪ್ರಾರಂಭವಾಗಿದೆ ಎಂದು ತಿಳಿಸಿದ್ದಾರೆ.

ಹೊಸ ರೈಲು ಮಾರ್ಗದಿಂದ ಉಪಯೋಗಗಳು:

ಬೆಂಗಳೂರಿನಿಂದ ಚಿತ್ರದುರ್ಗಕ್ಕೆ 110 ಕಿ.ಮೀ. ಅಂತರ ಕಡಿಮೆಯಾಗುತ್ತದೆ. ಸಿರಾ ಮತ್ತು ಹಿರಿಯೂರು ಹೊಸ ಸ್ಥಳಗಳು ರೈಲು ಸಂಪರ್ಕವನ್ನು ಪಡೆಯುತ್ತವೆ. ಬೆಂಗಳೂರು-ಅರಸಿಕೆರೆ-ಶಿವಮೊಗ್ಗ ಮಾರ್ಗದಲ್ಲಿ ರೈಲು ಸಂಚಾರ 50% ರಷ್ಟು ಕಡಿಮೆಯಾಗುತ್ತದೆ. ಶಿವಮೊಗ್ಗವು ಬೆಂಗಳೂರಿನಿಂದ ಹೆಚ್ಚು ಪ್ರಯಾಣಿಕ ರೈಲುಗಳನ್ನು ಹೊಂದಬಹುದು. ಅಲ್ಲದೇ, ಬೆಂಗಳೂರಿನಿಂದ ಬೆಳಗಾವಿ ಮತ್ತು ಬಿಜಾಪುರ ನಡುವಿನ ಅಸ್ತಿತ್ವದಲ್ಲಿ ಇರುವ ಮಾರ್ಗಗಳಲ್ಲಿ ಸಂಚಾರ ಕನಿಷ್ಠ 35% ಕಡಿಮೆ ಆಗುತ್ತದೆ. ಇದರ ಪರಿಣಾಮ ಪ್ರಸ್ತುತ ಹರಿಹರ- ಬೀರೂರು- ಅರಸಿಕೆರೆ ಸಾಲಿನಲ್ಲಿ ದಟ್ಟಣೆ ಕಡಿಮೆ ಆಗುವುದರಿಂದ ಹೆಚ್ಚಿನ ಸರಕು ಸಾಗಣೆಯೂ ಮಾಡಬಹುದು. ಪ್ರಯಾಣದ ದೂರ ಕಡಿಮೆ ಆಗುವುದರಿಂದ, ಇಂಧನ ಮತ್ತು ಸಾಕಷ್ಟು ಪ್ರಯಾಣ ಸಮಯ ಉಳಿಸಬಹುದು ಎಂದು ತಿಳಿಸಿದ್ದಾರೆ.

ಐತಿಹಾಸಿಕ ಚಿತ್ರದುರ್ಗದ ಕೋಟೆ ನೋಡಲು ದೇಶ- ವಿದೇಶದಿಂದ ಬರುವ ಪ್ರವಾಸಿಗರಿಗೆ ತುಂಬಾ ಅನುಕೂಲ ಆಗುತ್ತದೆ. ಹೆಚ್ಚಿನ ಆದಾಯವೂ ಸಂಗ್ರಹವಾಗಲಿದೆ. ದಾವಣಗೆರೆಗೆ, ಆನಗೋಡು, ಹೆಬ್ಬಾಳು, ಭರಮಸಾಗರ, ಸಿರಿಗೆರೆ ಕ್ರಾಸ್, ಐಮಂಗಲ, ಹಿರಿಯೂರು, ಸಿರಾ ಹಾಗೂ ಊರಕೇರೆಗೆ ರೈಲು ಸಂಪರ್ಕ ಕಲ್ಪಿಸದಂತಾಗುತ್ತದೆ ಎಂದು ತಿಳಿಸಿದ್ದಾರೆ.

PREV

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

Read more Articles on
click me!

Recommended Stories

Gold Silver Price Today: ಚಿನ್ನದ ದರದಲ್ಲಿ ಏರಿಕೆನಾ? ಇಳಿಕೆನಾ?
ಜಿಎಸ್‌ಟಿ ದರ ಬದಲಾವಣೆ ಬಳಿಕ ವಾಣಿಜ್ಯ ತೆರಿಗೆ ಸಂಗ್ರಹ ಕುಸಿತ