
ನವದೆಹಲಿ (ಮಾ.28): ಪಾನ್ ಕಾರ್ಡ್‌ಅನ್ನು ಆಧಾರ್ ಕಾರ್ಡ್‌ನೊಂದಿಗೆ ಲಿಂಕ್ ಮಾಡುವ ಗಡುವನ್ನು 2023ರ ಜೂನ್ 30 ರವರೆಗೆ ವಿಸ್ತರಿಸಲಾಗಿದೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ. ಮಂಗಳವಾರ ಹೊರಡಿಸಲಾದ ಪ್ರಕಟಣೆಯಲ್ಲಿ ಈ ಮಾಹಿತಿ ನೀಡಿದೆ. ಪ್ರಸ್ತುತ ಇರುವ ಗಡುವು ಮಾರ್ಚ್ 31ಕ್ಕೆ ಅಂತ್ಯಗೊಳ್ಳಲಿದೆ. ಆದರೆ, ಇನ್ನೂ ಸಾಕಷ್ಟು ಜನರು ಪಾನ್ ಕಾರ್ಡ್ ಜೊತೆ ಆಧಾರ್ ಕಾರ್ಡ್ ಲಿಂಕ್ ಮಾಡಿಲ್ಲ ಹಾಗಾಗಿ ಈ ನಿರ್ಧಾರ ಮಾಡಲಾಗಿದೆ. ಆಧಾರ್‌ನೊಂದಿಗೆ ಲಿಂಕ್ ಮಾಡದ ಪ್ಯಾನ್ ಕಾರ್ಡ್‌ಗಳು ಜುಲೈ 1 ರಿಂದ ನಿಷ್ಕ್ರಿಯಗೊಳ್ಳುತ್ತವೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ. "ಅಂತಹ PAN ಗಳ ವಿರುದ್ಧ ಯಾವುದೇ ಮರುಪಾವತಿಯನ್ನು ಮಾಡಲಾಗುವುದಿಲ್ಲ. PAN ನಿಷ್ಕ್ರಿಯವಾಗಿರುವ ಅವಧಿಗೆ ಅಂತಹ ಮರುಪಾವತಿಗೆ ಬಡ್ಡಿಯನ್ನು ಪಾವತಿಸಲಾಗುವುದಿಲ್ಲ ಮತ್ತು ಟಿಡಿಎಸ್ ಮತ್ತು ಟಿಸಿಎಸ್ ಅನ್ನು ಹೆಚ್ಚಿನ ದರದಲ್ಲಿ ಕಡಿತಗೊಳಿಸಲಾಗುತ್ತದೆ ಎಂದು ಹಣಕಾಸು ಇಲಾಖೆ ತಿಳಿಸಿದೆ. ಆದಾಯ ತೆರಿಗೆ ಇಲಾಖೆಯ ವೆಬ್‌ಸೈಟ್‌ಗೆ ಭೇಟಿ ನೀಡಿದ 1 ಸಾವಿರ ರೂಪಾಯಿ ಶುಲ್ಕವನ್ನು ಪಾವತಿಸುವ ಮೂಲಕ ಪಾನ್ ಮತ್ತು ಆಧಾರ್ ಲಿಂಕ್ ಮಾಡುವುದನ್ನು ಪೂರ್ಣ ಮಾಡಬಹುದಾಗಿದೆ.
PAN Aadhaar Link:ಕೇವಲ 3 ದಿನಗಳಷ್ಟೇ ಬಾಕಿ,ಆಧಾರ್-ಪ್ಯಾನ್ ಲಿಂಕ್ ಮಾಡೋದು ಹೇಗೆ? ಇಲ್ಲಿದೆ ಮಾಹಿತಿ
ಅಧಿಕೃತ ಮಾಹಿತಿಯ ಪ್ರಕಾರ, ಇಲ್ಲಿಯವರೆಗೆ 51 ಕೋಟಿಗೂ ಹೆಚ್ಚು ಪಾನ್ ಕಾರ್ಡ್‌ಗಳು ಈಗಾಗಲೇ ಆಧಾರ್‌ನೊಂದಿಗೆ ಲಿಂಕ್ ಮಾಡಲಾಗಿದೆ. ಕಳೆದ ವಾರ ವಿರೋಧ ಪಕ್ಷದ ನಾಯಕರು ಪಾನ್-ಆಧಾರ್ ಲಿಂಕ್ ಮಾಡುವ ಗಡುವನ್ನು ವಿಸ್ತರಿಸಲು ಮತ್ತು 1,000 ರೂಪಾಯಿಗಳ ಶುಲ್ಕವನ್ನು ಮನ್ನಾ ಮಾಡುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದರು.
ಆಧಾರ್, ಪಾನ್ ಜೋಡಣೆಗೆ ಕೇವಲ 6 ದಿನ ಬಾಕಿ; ತಪ್ಪಿದರೆ ಪಾನ್ ಅಮಾನ್ಯ: ಬ್ಯಾಂಕ್ ವ್ಯವಹಾರವೂ ಇಲ್ಲ..!
ಜೂನ್ 30ರ ಗಡುವು ಕೂಡ ತಪ್ಪಿಹೋದಲ್ಲಿ, ಪಾನ್ ಕಾರ್ಡ್ ನಿಷ್ಕ್ರೀಯವಾಗಲಿದೆ. ಆದರೆ, ಆ ನಂತರದ 30 ದಿನಗಳಲ್ಲಿ ಇದನ್ನು ಸಕ್ರಿಯಗೊಳಿಸಿಕೊಳ್ಳಬಹುದು. 1 ಸಾವಿರ ರೂಪಾಯಿ ಶುಲ್ಕವನ್ನು ಪಾವತಿಸಿ ನಿಗದಿತ ಪ್ರಾಧಿಕಾರಕ್ಕೆ ಆಧಾರ್‌ಅನ್ನು ತಿಳಿಸಿ ಲಿಂಕ್ ಮಾಡಬಹುದು ಎಂದು ಹಣಕಾಸು ಸಚಿವಾಲಯವು ತಿಳಿಸಿದೆ.
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.