
ನವದೆಹಲಿ(ಜು.24): ಕಪ್ಪು ಹಣ ಕುರಿತಂತೆ ರಾಜ್ಯಸಭೆಯಲ್ಲಿ ಮಾತನಾಡಿದ ಸಚಿವ ಪಿಯೂಷ್ ಗೊಯಲ್, 2014ರಿಂದ 2017ರ ಅವಧಿಯಲ್ಲಿ ಭಾರತೀಯರು ಸ್ವಿಸ್ ರಾಷ್ಟ್ರೀಯ ಬ್ಯಾಂಕಿನಲ್ಲಿ ಇಟ್ಟಿರುವ ಠೇವಣಿ ಮೊತ್ತದಲ್ಲಿ ಶೇ. 80 ರಷ್ಟು ಇಳಿಕೆಯಾಗಿದೆ ಎಂದು ತಿಳಿಸಿದರು.
ಈ ಹಿಂದಿನ ವರ್ಷಕ್ಕೆ ಹೋಲಿಸಿದರೆ ಕಳೆದ ಸಾಲಿನಲ್ಲಿ ಭಾರತೀಯರು ಸ್ವೀಸ್ ರಾಷ್ಟ್ರೀಯ ಬ್ಯಾಂಕಿನಲ್ಲಿ ಇಟ್ಟಿರುವ ಠೇವಣಿ ಮೊತ್ತ ಹಾಗೂ ಸಾಲದ ಪ್ರಮಾಣದಲ್ಲಿ ಶೇ. 34. 5 ರಷ್ಟು ಕಡಿಮೆಯಾಗಿದೆ ಗೊಯಲ್ ಮಾಹಿತಿ ನೀಡಿದರು.
ಸ್ವಿಸ್ ರಾಷ್ಟ್ರೀಯ ಬ್ಯಾಂಕ್ ಬಿಡುಗಡೆ ಮಾಡಿರುವ ವರದಿಯಲ್ಲಿ ಈ ಮಾಹಿತಿ ಲಭ್ಯವಿದ್ದು, ಮೋಧಿ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಕೈಗೊಂಡ ಕಠಿಣ ನಿರ್ಧಾರಗಳೇ ಈ ಬೆಳವಣಿಗೆಗೆ ಕಾರಣ ಎಂದು ಪಿಯೂಷ್ ರಾಜ್ಯಸಭೆಗೆ ತಿಳಿಸಿದರು.
ಸ್ವಿಟ್ಜರ್ ಲ್ಯಾಂಡ್‌ನಲ್ಲಿ ಭಾರತೀಯ ನಿವಾಸಿಗಳ ಆಸ್ತಿಗಳ ಬಗ್ಗೆ ಇನ್ನೂ ಘೋಷಣೆಯಾಗಿಲ್ಲ. 2016ರ ಸಾಲಿಗೆ ಹೋಲಿಸಿದರೆ ಬ್ಯಾಂಕೇತರ ಸಾಲ ಮತ್ತು ಠೇವಣಿಯಲ್ಲಿ ಶೇ.34. 5 ರಷ್ಟು ಇಳಿದಿದೆ ಎಂದು ಬಿಐಎಸ್ ಮಾಹಿತಿಯಲ್ಲಿ ಹೇಳಲಾಗಿದೆ ಎಂದು ಗೊಯಲ್ ಸದನಕ್ಕೆ ಮಾಹಿತಿ ನೀಡಿದರು.
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.