ಯುದ್ಧದ ಆತಂಕ: ಪೆಟ್ರೋಲ್‌, ಎಲ್‌ಪಿಜಿ ಕೊರತೆ ಇಲ್ಲ

Published : May 10, 2025, 06:45 AM IST
ಯುದ್ಧದ ಆತಂಕ: ಪೆಟ್ರೋಲ್‌, ಎಲ್‌ಪಿಜಿ ಕೊರತೆ ಇಲ್ಲ

ಸಾರಾಂಶ

ಯುದ್ಧದ ಆತಂಕದ ಈ ಸಂದರ್ಭದಲ್ಲಿ ಭಾರತದಲ್ಲಿ ಪೆಟ್ರೋಲ್‌, ಡೀಸೆಲ್‌ಗಾಗಲಿ ಅಥವಾ ಗ್ಯಾಸ್‌ಗಾಗಲಿ ಯಾವುದೇ ಕೊರತೆ ಇಲ್ಲ. ಭಾರತದಲ್ಲಿ ಪೆಟ್ರೋಲ್‌, ಡೀಸೆಲ್‌ ಮತ್ತು ಎಲ್‌ಪಿಜಿಯ ಸಾಕಷ್ಟು ದಾಸ್ತಾನು ಇದೆ ಎಂದು ಭಾರತದ ತೈಲ ಸಂಸ್ಥೆಗಳು ಸ್ಪಷ್ಟೀಕರಣ ನೀಡಿವೆ.   

ನವದೆಹಲಿ (ಮೇ.10): ಯುದ್ಧದ ಆತಂಕದ ಈ ಸಂದರ್ಭದಲ್ಲಿ ಭಾರತದಲ್ಲಿ ಪೆಟ್ರೋಲ್‌, ಡೀಸೆಲ್‌ಗಾಗಲಿ ಅಥವಾ ಗ್ಯಾಸ್‌ಗಾಗಲಿ ಯಾವುದೇ ಕೊರತೆ ಇಲ್ಲ. ಭಾರತದಲ್ಲಿ ಪೆಟ್ರೋಲ್‌, ಡೀಸೆಲ್‌ ಮತ್ತು ಎಲ್‌ಪಿಜಿಯ ಸಾಕಷ್ಟು ದಾಸ್ತಾನು ಇದೆ ಎಂದು ಭಾರತದ ತೈಲ ಸಂಸ್ಥೆಗಳು ಸ್ಪಷ್ಟೀಕರಣ ನೀಡಿವೆ. ಭಾರತ-ಪಾಕ್‌ ನಡುವೆ ಯುದ್ಧದ ಕಾರ್ಮೋಡ ಮನೆಮಾಡಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಪೆಟ್ರೋಲ್‌, ಡೀಸೆಲ್‌ ಮತ್ತು ಎಲ್‌ಪಿಜಿ ಕೊರತೆಯಾಗಬಹುದೆಂದು ಕೆಲವರಲ್ಲಿ ಆತಂಕಕ್ಕೊಳಗಾಗಿದ್ದರು. 

ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಸುದ್ದಿ ನಂಬಿ ಜನ ಭಯಭೀತರಾಗಿ ಪೆಟ್ರೋಲ್‌ ಬಂಕ್‌ಗಳ ಮುಂದೆ ಸಾಲು ನಿಂತ ಘಟನೆಗಳು ವರದಿಯಾಗಿತ್ತು. ವಿಶೇಷವಾಗಿ ಪಾಕಿಸ್ತಾನದೊಂದಿಗೆ ಗಡಿ ಹಂಚಿಕೊಂಡಿರುವ ಜಮ್ಮು ಮತ್ತು ಕಾಶ್ಮೀರ, ಪಂಜಾಬ್‌ನ ಕೆಲಕಡೆ ಇಂಥ ದೃಶ್ಯಗಳು ಕಂಡುಬಂದಿದ್ದವು. ಈ ಹಿನ್ನೆಲೆಯಲ್ಲಿ ಸ್ಪಷ್ಟೀಕರಣ ನೀಡಿರುವ ಇಂಡಿಯನ್‌ ಆಯಿಲ್‌ ಕಾರ್ಪೊರೆಷನ್‌(ಐಒಸಿ) ಮತ್ತು ಭಾರತ್‌ ಪೆಟ್ರೋಲಿಯಂ ಲಿಮಿಟೆಡ್‌(ಬಿಪಿಸಿಎಲ್‌) ಯಾರೂ ಆತಂಕಪಡಬೇಕಿಲ್ಲ ಎಂದು ತಿಳಿಸಿದೆ.

ಆಹಾರ ಸಾಮಗ್ರಿ ಅಕ್ರಮ ದಾಸ್ತಾನು: ಭಾರತ-ಪಾಕಿಸ್ತಾನದ ನಡುವೆ ಯುದ್ಧದಂತಹ ಸ್ಥಿತಿ ನಿರ್ಮಾಣವಾಗಿರುವ ಹೊತ್ತಿನಲ್ಲಿ, ಜನ ಹಾಗೂ ವ್ಯಾಪಾರಿಗಳು ಅಗತ್ಯ ಆಹಾರ ಸಾಮಾಗ್ರಿಗಳನ್ನು ಅಕ್ರಮವಾಗಿ ಕೂಡಿಟ್ಟುಕೊಳ್ಳುತ್ತಿದ್ದಾರೆ. ಇದನ್ನು ಅನಗತ್ಯ ಎಂದಿರುವ ಕೇಂದ್ರ ಆಹಾರ ಸಚಿವ ಪ್ರಹ್ಲಾದ್‌ ಜೋಶಿ, ವ್ಯಾಪಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ನಮ್ಮೊಳಗೇ ಇದ್ದಾರೆ ಪಾಕ್‌ ಪ್ರೇಮಿಗಳು, ಭಾರತ ವಿರೋಧಿ ಹಿತ ಶತ್ರುಗಳು!

‘ದೇಶದ ಆಹಾರ ದಾಸ್ತಾನು ಬಗೆಗಿನ ಸುದ್ದಿಗಳನ್ನು ನಂಬಬೇಡಿ. ನಮ್ಮಲ್ಲಿ ಅಗತ್ಯಕ್ಕಿಂತಲೂ ಹೆಚ್ಚು ಆಹಾರ ಸಂಗ್ರಹವಿದೆ’ ಎಂದು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ ಮಾಡಿರುವ ಸಚಿವ ಜೋಶಿ, ‘ಅಗತ್ಯ ವಸ್ತುಗಳ ವ್ಯಾಪಾರದಲ್ಲಿ ತೊಡಗಿರುವ, ಸಗಟು, ಚಿಲ್ಲರೆ ವ್ಯಾಪಾರಿಗಳು ಅಥವಾ ವ್ಯಾಪಾರ ಸಂಸ್ಥೆಗಳು ಕಾನೂನು ಜಾರಿ ಸಂಸ್ಥೆಗಳೊಂದಿಗೆ ಸಹಕರಿಸಿ. ಆಹಾರ ವಸ್ತುಗಳನ್ನು ಸಂಗ್ರಹಿಸಿ ಇಟ್ಟುಕೊಳ್ಳಬೇಡಿ. ಹೀಗೆ ಮಾಡಿದಲ್ಲಿ, ಅಗತ್ಯ ಸರಕುಗಳ ಕಾಯ್ದೆಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು’ ಎಂದು ಎಚ್ಚರಿಕೆ ನೀಡಿದ್ದಾರೆ.

PREV

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

Read more Articles on
click me!

Recommended Stories

ವಿಶ್ವದ ಅತಿ ಬಲಿಷ್ಠ ಕರೆನ್ಸಿಗಳಿವು: ಭಾರತದ ರುಪಾಯಿ ಮುಂದೆ ಘರ್ಜಿಸುವ ಡಾಲರ್ ಈ ದೇಶದ ಕರೆನ್ಸಿ ಮುಂದೆ ಡಮ್ಮಿ!
ಆರ್‌ಬಿಐ ಮಹತ್ವದ ನಿರ್ಧಾರ, ರೆಪೋ ದರ ಬದಲಾವಣೆಯಿಂದ ಸಾಲದ ಬಡ್ಡಿ ಭಾರಿ ಇಳಿಕೆ