
ನವದೆಹಲಿ(ಅ30): ಕೇಂದ್ರ ಸರ್ಕಾರ ಮತ್ತು ಭಾರತೀಯ ರಿಸರ್ವ್ ಬ್ಯಾಂಕ್ ನಡುವಿನ ಕಿತ್ತಾಟ ಮತ್ತಷ್ಟು ವೇಗ ಪಡೆದುಕೊಂಡಿದೆ. ರಿಸರ್ವ್ ಬ್ಯಾಂಕ್ ಮೇಲೆ ಈ ಬಾರಿ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಹರಿಹಾಯ್ದಿದ್ದು, ಹೆಚ್ಚುವರಿ ಸಾಲ ನೀಡುವಿಕೆಯನ್ನು ತಡೆಯುವಲ್ಲಿ ರಿಸರ್ವ್ ಬ್ಯಾಂಕ್ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.
2008ರಿಂದ 2014ರವರೆಗೆ ವಿವೇಚನೆಯಿಲ್ಲದೆ ಬ್ಯಾಂಕ್‌ಗಳು ಗ್ರಾಹಕರಿಗೆ ಸಾಲ ನೀಡುವಾಗ, ರಿಸರ್ವ್ ಬ್ಯಾಂಕ್ ಅದಕ್ಕೆ ತಡೆಯೊಡ್ಡಲಿಲ್ಲ ಎಂದು ಜೇಟ್ಲಿ ಗುಡುಗಿದ್ದಾರೆ.
ಆರ್‌ಬಿಐ ಸ್ವಾತಂತ್ರ್ಯವನ್ನು ದುರ್ಬಲಗೊಳಿಸುವುದು ಸಂಭಾವ್ಯ ದುರಂತ ಎಂದು ಇತ್ತೀಚಿಗಷ್ಟೇ ಉಪ ಗವರ್ನರ್ ವಿರಾಲ್ ಆಚಾರ್ಯ ಕೇಂದ್ರ ಸರ್ಕಾರವನ್ನು ಟೀಕಿಸಿದ್ದರು. ಇದರಿಂದ ಆರ್‌ಬಿಐ ಮತ್ತು ಕೇಂದ್ರ ಹಣಕಾಸು ಸಚಿವಾಲಯದ ಮಧ್ಯೆ ಭಿನ್ನಾಭಿಪ್ರಾಯ ತಲೆದೋರಿದೆ.
ತನ್ನ ನೀತಿಯನ್ನು ಸಡಿಲಗೊಳಿಸಿ ತನ್ನ ಅಧಿಕಾರವನ್ನು ಕುಂಠಿತಗೊಳಿಸುವ ಕೇಂದ್ರ ಸರ್ಕಾರದ ಒತ್ತಡಕ್ಕೆ ಆರ್‌ಬಿಐಯ ವಿರೋಧವಿದೆ ಎಂಬರ್ಥದಲ್ಲಿ ವಿರಾಲ್ ಆಚಾರ್ಯ ಹೇಳಿಕೆ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.