ಗ್ರಾಮಗಳಿಗೆ ಸರ್ವಋತು ಸಾರಿಗೆ ನೀತಿ: ಹಳ್ಳಿಯಿಂದ ದಿಲ್ಲಿಗೆ ಬರಲು ದಾರಿ ಐತಿ!

Published : Jul 05, 2019, 12:28 PM IST
ಗ್ರಾಮಗಳಿಗೆ ಸರ್ವಋತು ಸಾರಿಗೆ ನೀತಿ: ಹಳ್ಳಿಯಿಂದ ದಿಲ್ಲಿಗೆ ಬರಲು ದಾರಿ ಐತಿ!

ಸಾರಾಂಶ

ಲೋಕಸಭೆಯಲ್ಲಿ ಮೋದಿ 2.0 ಸರ್ಕಾರದ ಮೊದಲ ಬಜೆಟ್ ಮಂಡನೆ| ಬಜೆಟ್ ಮಂಡಿಸುತ್ತಿರುವ ಕೇಂದ್ರ ಹಣಕಾಸು ಸಚಿವೆ| ಅರ್ಥ ಪಥದ ನೀಲನಕ್ಷೆ ಬಿಚ್ಚಿಡುತ್ತಿರುವ ನಿರ್ಮಲಾ ಸೀತಾರಾಮನ್| ಗ್ರಾಮಗಳಿಗೆ ಸರ್ವಋತು ಸಾರಿಗೆ ನೀತಿ ಜಾರಿಗೆ|'ಮುಂದಿನ ಐದು ವರ್ಷದಲ್ಲಿ 1 ಲಕ್ಷ, 25 ಸಾವಿರ ಕಿ.ಮೀ ರಸ್ತೆ ನಿರ್ಮಾಣ ಪೂರ್ಣ'| ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಹೆಚ್ಚುವರಿ 24 ಸಾವಿರ ಕೋಟಿ ರೂ. ಘೋಷಣೆ| 'ರೈಲು ಮೂಲ ಸೌಕರ್ಯ ಅಭಿವೃದ್ಧಿಗೆ 50 ಲಕ್ಷ ಕೋಟಿ ರೂ. ಅಗತ್ಯ'|

ನವದೆಹಲಿ(ಜು.05): ಮೋದಿ 2.0 ಸರ್ಕಾರದ ಮೊದಲ ಪೂರ್ಣ ಪ್ರಮಾಣದ ಬಜೆಟ್ ಲೋಕಸಭೆಯಲ್ಲಿ ಮಂಡನೆಯಾಗುತ್ತಿದ್ದು, ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಬುತ್ತಿ ಬಿಚ್ಚಿಡುತ್ತಿದ್ದಾರೆ. ಬಜೆಟ್ ಭಾಷಣ ಆರಂಭಿಸಿರುವ ನಿರ್ಮಲಾ ಸೀತಾರಾಮನ್, ದೇಶದ ಆರ್ಥಿಕ ಅಭಿವೃದ್ಧಿಯ ನೀಲನಕ್ಷೆಯನ್ನು ಎಳೆ ಎಳೆಯಾಗಿ ಬಿಚ್ಚಿಡುತ್ತಿದ್ದಾರೆ.

ದೇಶದ ಸುಮಾರು ಶೇ.97ರಷ್ಟು ಗ್ರಾಮಗಳಿಗೆ ಸರ್ವಋತು ಸಾರಿಗೆ ನೀತಿಯಡಿ ರಸ್ತೆ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು, ಮುಂದಿನ ಐದು ವರ್ಷದಲ್ಲಿ  1 ಲಕ್ಷ, 25 ಸಾವಿರ ಕಿ.ಮೀ ರಸ್ತೆ ನಿರ್ಮಾಣ ಪೂರ್ಣಗೊಳಿಸಲಾಗುವುದು ಎಂದು ಹಣಕಸು ಸಚಿವೆ ಸ್ಪಷ್ಟಪಡಿಸಿದರು.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಹೆಚ್ಚುವರಿ 24 ಸಾವಿರ ಕೋಟಿ ರೂ. ಘೋಷಿಸಿರುವ ನಿರ್ಮಲಾ ಸೀತಾರಾಮನ್, ದೇಶದ ಮೂಲೆ ಮೂಲೆಗೂ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕೇಂದ್ರ ಸರ್ಕಾರದ ಕನಸು ಎಂದು ಹೇಳಿದರು.

ಇದೇ ವೇಳೆ ರೈಲು ಮೂಲ ಸೌಕರ್ಯ ಅಭಿವೃದ್ಧಿಗೆ 50 ಲಕ್ಷ ಕೋಟಿ ರೂ. ಅಗತ್ಯವಿದ್ದು, ಸಾರ್ವಜನಿಕ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಈ ಗುರಿಯನ್ನು ತಲುಪಲಾಗುವುದು ಎಂದು ನಿರ್ಮಳಾ ಸೀತಾರಾಮನ್ ಸದನಕ್ಕೆ ಮಾಹಿತಿ ನೀಡಿದರು.

ಉಡಾನ್ ಯೋಜನೆಯ ಮೂಲಕ ದೇಶದ ಎರಡು ಮತ್ತು ಮೂರನೇ ದರ್ಜೆಯ ನಗರಗಳಿಗೆ ವಿಮಾನಯಾನ ಸೇವೆ ಕಲ್ಪಿಸಲು ಸರ್ಕಾರ ಸಂಕಲ್ಪ ಬದ್ಧವಾಗಿದ್ದು, ಭೂ, ಜಲ ಜಲ ಹಾಗೂ ವಾಯುಸಾರಿಗೆಯ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದು ಸಚಿವರು ಘೋಷಿಸಿದರು.

PREV

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

click me!

Recommended Stories

YouTube ನಲ್ಲಿ ಗೋಲ್ಡನ್ ಬಟನ್ ಸಿಕ್ಕಿದ್ರೆ ಹಣದ ಹೊಳೆ, ಜಾಸ್ತಿ ಆಗುತ್ತೆ ತೆರಿಗೆ ಭಾರ
ಒನ್‌8 ಬ್ರ್ಯಾಂಡ್‌ ಸೇಲ್‌: ತನ್ನ ಆಪ್ತ ಗೆಳೆಯನ ಈ ಸಂಸ್ಥೆಯಲ್ಲಿ ಕೊಹ್ಲಿ 40 ಕೋಟಿ ಹೂಡಿಕೆ!