10 ಬ್ಯಾಂಕ್‌ಗಳ ವಿಲೀನಕ್ಕೆ ಕೇಂದ್ರ ಸರ್ಕಾರ ನಿರ್ಧಾರ; ನಿರ್ಮಲಾ ಸೀತಾರಾಮನ್ ಘೋಷಣೆ; 4 ಹಂತಗಳಲ್ಲಿ ವಿಲೀನ ಪ್ರಕ್ರಿಯೆ
ನವದೆಹಲಿ (ಆ.30): ನರೇಂದ್ರ ಮೋದಿ ನೇತೃತ್ವದ ಎರಡನೇ ಅವಧಿಯಲ್ಲೂ ಕೇಂದ್ರ ಸರ್ಕಾರ ಬ್ಯಾಂಕ್‌ಗಳ ವಿಲೀನ ಪ್ರಕ್ರಿಯೆಯನ್ನು ಮುಂದುವರಿಸಿದೆ.
ಶುಕ್ರವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ವಿಲೀನವಾಗುವ ಸಾರ್ವಜನಿಕ ವಲಯದ ಬ್ಯಾಂಕ್‌ಗಳ ವಿವರಗಳನ್ನು ಬಹಿರಂಗಪಡಿಸಿದರು.
ನಾಲ್ಕು ಹಂತಗಳಲ್ಲಿ 10 ಬ್ಯಾಂಕ್‌ಗಳ ವಿಲೀನ ಪ್ರಕ್ರಿಯೆ ನಡೆಯಲಿದ್ದು, ಕರ್ನಾಟಕದಲ್ಲಿ ಹುಟ್ಟಿದ 3 ರಾಷ್ಟ್ರೀಕೃತ ಬ್ಯಾಂಕ್‌ಗಳು ಇದರಲ್ಲಿ ಸೇರಿವೆ.
ಇದನ್ನೂ ಓದಿ | ಬ್ಯಾಂಕ್ ವಿಲೀನದ ಇತರೆ ಸುದ್ದಿಗಳು
ಈ ಹಿಂದೆ ನವಂಬರ್ 2018ರಲ್ಲಿ ವಿಜಯಾ ಬ್ಯಾಂಕ್ ಮತ್ತು ದೇನಾ ಬ್ಯಾಂಕನ್ನು ಬ್ಯಾಂಕ್ ಆಫ್ ಬರೋಡಾ ಜೊತೆ ವಿಲೀನಗೊಳಿಸಲಾಗಿತ್ತು.