‘ನಾನು ಸಿಎಂ ಆಗಿದ್ದೇ ತಡ ರಾಜ್ಯದ ಆರ್ಥಿಕ ಗ್ರಾಫ್ ಏರಿದೆ’!

Published : Aug 14, 2018, 12:07 PM ISTUpdated : Sep 09, 2018, 10:00 PM IST
‘ನಾನು ಸಿಎಂ ಆಗಿದ್ದೇ ತಡ ರಾಜ್ಯದ ಆರ್ಥಿಕ ಗ್ರಾಫ್ ಏರಿದೆ’!

ಸಾರಾಂಶ

ರಾಜ್ಯದ ಆರ್ಥಿಕ ಬೆಳವಣಿಗೆ ಶೇ.32.7ರಷ್ಟು ಏರಿಕೆ! ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ! ರೈತರ ರಾಷ್ಟ್ರೀಕೃತ ಬ್ಯಾಂಕ್ ಸಾಲಮನ್ನಾ ಶೀಘ್ರ! ರಾಜ್ಯದ ಆರ್ಥಿಕ ಶಿಸ್ತು ಉತ್ತಮ ಎಂದ ಸಿಎಂ

ಹಾಸನ(ಆ.14): ರಾಜ್ಯ ಸರ್ಕಾರ ಆರ್ಥಿಕ ಶಿಸ್ತು ಉಲ್ಲಂಘಿಸದೆ ರೈತರ ಸಾಲಮನ್ನಾ ಮಾಡಲು ಕ್ರಮ ಕೈಗೊಂಡಿದೆ ಎಂದು ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ರೈತರ ರಾಷ್ಟ್ರೀಕೃತ ಬ್ಯಾಂಕ್‌ಗಳ ಸಾಲಮನ್ನಾ ಮಾಡಲು ಶೀಘ್ರದಲ್ಲೇ ಆದೇಶ ನೀಡುವುದಾಗಿ ಹೇಳಿದ ಸಿಎಂ, ಈ ಘೋಷಣೆಯಿಂದ ರಾಜ್ಯದ ಆರ್ಥಿಕ ಶಿಸ್ತಿನ ಮೇಲೆ ನಕಾರಾತ್ಮಕ ಪರಿಣಾಮ ಬೀರದು ಎಂದು ಸ್ಪಷ್ಟಪಡಿಸಿದರು.

ಹಣಕಾಸಿನ ಸ್ಥಿತಿಗತಿ ಬಗ್ಗೆ ತಾವು ಅಧ್ಯಯನ ನಡೆಸುತ್ತಿದ್ದು, ಮುಂದಿನ ವರ್ಷವೇ ಬ್ಯಾಂಕ್‌ಗಳಿಗೆ ಹಣ ನೀಡಲು ತಯಾರಿ ನಡೆಸಿದ್ದಾಗಿ ಸಿಎಂ ತಿಳಿಸಿದರು. ಇದೇ ವೇಳೆ ಸೋರಿಕೆ ತಡೆಗೆ ಕ್ರಮ ಕೈಗೊಂಡಿದ್ದು, ರಾಜ್ಯದ ಆದಾಯ ಹೆಚ್ಚಲು ಕಾರಣವಾಗಿದೆ ಎಂದು ಅಭಿಪ್ರಾಯಪಟ್ಟರು.

ತಾವು ಸಿಎಂ ಆಗಿ ಅಧಿಕಾರವಹಿಸಿಕೊಂಡ ಮೇಲೆ ರಾಜ್ಯದ ಆರ್ಥಿಕ ಬೆಳವಣಿಗೆ ಶೇ.32.7ರಷ್ಟು ಏರಿಕೆಯಾಗಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಅಬಕಾರಿ ಮತ್ತು ವಾಣಿಜ್ಯ ತೆರಿಗೆ ಸಂಗ್ರಹ ಕೂಡ ಹೆಚ್ಚಾಗಿದೆ ಎಂದು ಸಿಎಂ ತಿಳಿಸಿದರು.

ಆಂಧ್ರಪ್ರದೇಶ ಮಾದರಿಯಲ್ಲಿ ರಾಜ್ಯದಲ್ಲೂ ಶೂನ್ಯ ಬಂಡವಾಳದಲ್ಲಿ ನೈಸರ್ಗಿಕ ಕೃಷಿಯನ್ನು ಪರಿಚಯಿಸುವುದಕ್ಕೆ ಅಜಿಮ್ ಪ್ರೇಮ್ ಜಿ ನೇತೃತ್ವದ ಅಜಿಮ್ ಪೌಂಡೇಷನ್ ಒಪ್ಪಿಕೊಂಡಿದೆ. ಆಂಧ್ರದಲ್ಲಿ ಆರು ಲಕ್ಷ ರೈತರು ಈ ಶೂನ್ಯ ಬಂಡವಾಳ ನೈಸರ್ಗಿಕ ಕೃಷಿಯನ್ನು ಅಳವಡಿಸಿಕೊಂಡಿದ್ದಾರೆ ಎಂದು ಸಿಎಂ ತಿಳಿಸಿದರು.

PREV

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

click me!

Recommended Stories

ಈ ರಾಶಿ ಜನರು ಹೊಸ ವರ್ಷ 2026 ರಲ್ಲಿ ಲಕ್ಷಾಧಿಪತಿಗಳಾಗುತ್ತಾರೆ, ಬಂಪರ್ ಯಶಸ್ಸು, ಸಂತೋಷ ಮತ್ತು ಸಮೃದ್ಧಿ
2026 ರಲ್ಲಿ ಮೇಷ ರಾಶಿಯವರ ಆರ್ಥಿಕ ಸ್ಥಿತಿ ಹೇಗಿರುತ್ತದೆ? AI ಪ್ರಕಾರ ಲಾಭನಾ ಅಥವಾ ನಷ್ಟನಾ?