ಎಲ್ಲರ ಶ್ರೇಯೋಭಿವೃದ್ಧಿಯ ಬಜೆಟ್‌: ಯಡಿಯೂರಪ್ಪ

By Kannadaprabha News  |  First Published Feb 19, 2023, 1:00 AM IST

ನಮ್ಮ ಪಕ್ಷದ ಆಶಯದಂತೆ ರೈತರ ಆದಾಯವನ್ನು ದ್ವಿಗುಣಗೊಳಿಸಲು ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದೆ. ರಾಜ್ಯದ ಬಡವರು, ದುರ್ಬಲ ವರ್ಗದವರ, ಮಹಿಳೆಯರ, ಶೋಷಿತರ ಮತ್ತು ಯುವ ಜನರ ಶ್ರೇಯೋಭಿವೃದ್ಧಿಗೆ ಹಲವು ಉಪಕ್ರಮಗಳನ್ನು ಕೈಗೊಳ್ಳಲಾಗಿದೆ: ಬಿ.ಎಸ್‌.ಯಡಿಯೂರಪ್ಪ 


ಬೆಂಗಳೂರು(ಫೆ.19): ಕೋವಿಡ್‌ ಮತ್ತು ಇತರೆ ಕಾರಣಗಳಿಂದಾಗಿ ಜಾಗತಿಕ ಆರ್ಥಿಕ ಹಿಂಜರಿತವಿದ್ದರೂ ರಾಜ್ಯ ಆರ್ಥಿಕ ಸ್ಥಿತಿಯನ್ನು ಉತ್ತಮವಾಗಿ ನಿರ್ವಹಿಸಿ ಒಳ್ಳೆಯ ಬಜೆಟ್‌ ಅನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಬಣ್ಣಿಸಿದ್ದಾರೆ.

ನಮ್ಮ ಪಕ್ಷದ ಆಶಯದಂತೆ ರೈತರ ಆದಾಯವನ್ನು ದ್ವಿಗುಣಗೊಳಿಸಲು ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದೆ. ರಾಜ್ಯದ ಬಡವರು, ದುರ್ಬಲ ವರ್ಗದವರ, ಮಹಿಳೆಯರ, ಶೋಷಿತರ ಮತ್ತು ಯುವ ಜನರ ಶ್ರೇಯೋಭಿವೃದ್ಧಿಗೆ ಹಲವು ಉಪಕ್ರಮಗಳನ್ನು ಕೈಗೊಳ್ಳಲಾಗಿದೆ. ಮೂಲಸೌಕರ್ಯಗಳಿಗೆ ಒತ್ತು ನೀಡುವುದನ್ನು ಬಜೆಟ್‌ನಲ್ಲಿ ಮುಂದುವರಿಸಿದ್ದು, ಇದರಿಂದ ರಾಜ್ಯವು ದೇಶದಲ್ಲಿಯೇ ಹೂಡಿಕೆದಾರರ ನೆಚ್ಚಿನ ತಾಣವಾಗಿ ಮುಂದುವರಿಯಲಿದೆ. ಬೆಂಗಳೂರು ನಗರ ಅಭಿವೃದ್ಧಿಗೆ ನಮ್ಮ ಪಕ್ಷದ ಆದ್ಯತೆಯಾಗಿದ್ದು, ಅದರಂತೆ 2023-24ನೇ ಸಾಲಿನ 9,698 ಕೋಟಿ ರು. ಅನುದಾನವನ್ನು ಒದಗಿಸಲು ಉದ್ದೇಶಿಸಿರುವುದು ಬೆಂಗಳೂರು ನಗರದ ಸಮಗ್ರ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಅಭಿಪ್ರಾಯಪಟ್ಟಿದ್ದಾರೆ.

Tap to resize

Latest Videos

ಬಾಗಲಕೋಟೆ: ಕೋಟೆ ನಾಡಿಗೆ ಮತ್ತೆ ನಿರಾಶಾದಾಯಕ ಬಜೆಟ್‌..!

ಬಡ್ಡಿ ರಹಿತ ಸಾಲದ ಮೊತ್ತವನ್ನು ಮೂರು ಲಕ್ಷ ರು.ನಿಂದ ಐದು ಲಕ್ಷ ರು.ವರೆಗೆ ಹೆಚ್ಚಿಸಿರುವುದು ಸ್ವಾಗತಾರ್ಹ. ರೈತರ ಬದುಕಿಗೆ ಭದ್ರತೆ ಒದಗಿಸಲು 180 ಕೋಟಿ ರು. ವೆಚ್ಚದಲ್ಲಿ ಜೀವನ ಜ್ಯೋತಿ ವಿಮಾ ಯೋಜನೆ ಜಾರಿಗೆ ತರಲಾಗಿದೆ. ಕೃಷಿ ಉತ್ಪನ್ನಗಳನ್ನು ಪ್ರೋತ್ಸಾಹಿಹಿ ಬೆಲೆ ಬರುವಂತಾಗಲು ಕೊಯ್ಲೋತ್ತರ ತಂತ್ರಜ್ಞಾನಕ್ಕೆ 100 ಕೋಟಿ ರು. ಯೋಜನೆ ರೂಪಿಸಿದೆ. ಕ್ರೀಡಾಪಟುಗಳಿಗೆ ಪ್ರೋತ್ಸಾಹಿಸಲು ಕರ್ನಾಟಕ ಒಲಂಪಿಕ್‌ ಕನಸಿನ ಯೋಜನೆ ರೂಪಿಸಿರುವುದು ಕ್ರೀಡೆಗೆ ಉತ್ತೇಜನ ನೀಡಲಾಗಿದೆ. ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಆರ್ಥಿಕ ಚಟುವಟಿಕೆಯಲ್ಲಿ ಭಾಗವಹಿಸಲು ಅನುಕೂಲವಾಗಲು ಶೂನ್ಯ ಬಡ್ಡಿದರದಲ್ಲಿ ಗೃಹಿಣಿ ಶಕ್ತಿ ಯೋಜನೆ ಜಾರಿಗೊಳಿಸಲಾಗಿದೆ ಎಂದಿದ್ದಾರೆ.

ಯುವಕರಿಗೆ ಉದ್ಯೋಗ ದೊರೆಯುವಂತಾಗಲು ಕಲಿಕೆ ಜತೆಗೆ ಕೌಶಲ್ಯ ಎಂಬ ಯೋಜನೆ ರೂಪಿಸಿ ವಿದ್ಯಾರ್ಥಿಗಳಿಗೆ ಹೆಚ್ಚುವರಿ ಆರ್ಥಿಕ ತಾಂತ್ರಿಕ ಕೌಶಲ್ಯ ಹೊಂದಿ ನಿರುದ್ಯೋಗ ಸಮಸ್ಯೆಗೆ ಪರಿಹಾರ ರೂಪಿಸಲಾಗಿದೆ ಎಂದು ತಿಳಿಸಿದ್ದಾರೆ.

click me!