
ಚಿತ್ರದುರ್ಗ(ಫೆ.17): ಮುಖ್ಯಮಂತ್ರಿ ಸಿದ್ದರಾಮಯ್ಯ ನಾಡು ಕಂಡ ಖ್ಯಾತ ಆರ್ಥಿಕ ತಜ್ಞ ಎಂಬುದನ್ನು ತಾವು ಮಂಡಿಸುತ್ತಿರುವ ಪ್ರತಿ ಬಜೆಟ್‍ಲ್ಲೂ ದೃಢಪಡಿಸುತ್ತಿದ್ದಾರೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಅಭಿಪ್ರಾಯಪಟ್ಟಿದ್ದಾರೆ.
ಕುರಿ ಕಾಯುವ ಸಮುದಾಯದ ವ್ಯಕ್ತಿ ಹಣಕಾಸು ಮಂತ್ರಿಯಾದ ಸಂದರ್ಭದಲ್ಲಿ ಅನೇಕ ಟೀಕೆ-ಟಿಪ್ಪಣಿಗಳು ಎದುರುಗೊಂಡಿದ್ದವು. ಆದರೆ, ಇಂಥ ಎಲ್ಲಾ ಲೆಕ್ಕಾಚಾರಗಳನ್ನೂ ಉಲ್ಟಾ ಮಾಡಿ ನಾಡಿನ ಅಭಿವೃದ್ಧಿಗೆ ಪಕ್ಕಾ ಲೆಕ್ಕಾಚಾರದಲ್ಲಿ 15 ಬಜೆಟ್‍ಗಳನ್ನು ಮಂಡಿಸಿ, ದೇಶದ ಶ್ರೇಷ್ಠ ಆರ್ಥಿಕ ತಜ್ಞ ಎಂಬುದನ್ನು ಸಾಬೀತುಪಡಿಸಿದ್ದಾರೆ ಎಂದು ಹೇಳಿದರು.
ಈ ಬಾರಿಯ ಬಜೆಟ್ ಸವಾಲು ಆಗಿತ್ತು. ಒಂದೆಡೆ ಗ್ಯಾರಂಟಿ ಯೋಜನೆಗಳಿಗೆ ಕೋಟ್ಯಂತರ ಹಣ ಹೊಂದಿಸುವುದು, ಮತ್ತೊಂದು ಕಡೆ ವಿವಿಧ ಕ್ಷೇತ್ರಗಳಿಗೆ ಅನುದಾನ ಹಂಚಿಕೆ. ಆದರೆ, ಸಿದ್ದರಾಮಯ್ಯ ಅವರು ಈ ಎಲ್ಲ ಸವಾಲನ್ನು ಸಮರ್ಥವಾಗಿ ಎದುರಿಸಿದ್ದಾರಷ್ಟೇ ಅಲ್ಲದೆ, ಈ ಹಿಂದೆ ಎಲ್ಲ ಹಣಕಾಸು ಮಂತ್ರಿಗಳಷ್ಟೇ ಅಲ್ಲದೇ ತಾವೇ ಮಂಡಿಸಿದ ಬಜೆಟ್‍ಗಿಂತ ಶ್ರೇಷ್ಠ, ಅತ್ಯುತ್ತಮ ಬಜೆಟ್ ಮಂಡಿಸಿ ದಾಖಲೆ ಬರೆದಿದ್ದಾರೆ ಎಂದೂ ಪ್ರತಿಪಾದಿಸಿದರು.
ಸರ್ವರಿಗೂ ಸಮಪಾಲು-ಸಮಬಾಳು ನೀಡಿದ ಬಜೆಟ್: ಸಚಿವ ಸತೀಶ್ ಜಾರಕಿಹೊಳಿ
ಕೃಷಿ, ತೋಟಗಾರಿಕೆ, ರೇಷ್ಮೆ, ಮೀನುಗಾರಿಕೆ, ಸಹಕಾರ ಸಂಘ, ಶಿಕ್ಷಣ, ಆರೋಗ್ಯ, ಹೀಗೆ ಎಲ್ಲ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸಿದ್ದಾರೆ. ಅಭಿವೃದ್ಧಿ ಕಾರ್ಯ ಗಳ ಜತೆಗೆ ಬಡ, ಮಧ್ಯಮ ಜನರಿಗೆ ವರದಾನವಾಗಿರುವ ಐದು ಗ್ಯಾರಂಟಿ ಯೋಜನೆಗಳಿಗೆ ಹಣ ಮೀಸಲಿಟ್ಟಿರುವುದು ಅರ್ಥಶಾಸ್ತ್ರಜ್ಞರೇ ಅಚ್ಚರಿ ಪಡುವಂತದ್ದಾಗಿದೆ. ಡಿಸಿಸಿ ಬ್ಯಾಂಕ್, ಪಿಕಾರ್ಡ್‍ಗಳಲ್ಲಿ ಸುಸ್ತಿ ಸಾಲಗಳ ಮೇಲಿನ ಬಡ್ಡಿ ಮನ್ನಾ ಮಾಡಲು ನಿರ್ಧರಿಸಿರುವುದು ಸಿದ್ದರಾಮಯ್ಯನವರ ದಿಟ್ಟ ನಡೆಯಾಗಿದೆ ಎಂದು ಆಂಜನೇಯ ತಿಳಿಸಿದರು.
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.