ಪೆಟ್ರೋಲ್ ದರ ಮಾಡ್ಬೇಡಿ ಗೆಸ್: ಮಾಡಿ ಜಸ್ಟ್ ಒಂದು SMS!

By Web DeskFirst Published Nov 27, 2018, 12:20 PM IST
Highlights

ಮತ್ತೆ ಇಳಿಕೆಯತ್ತ ಮುಖ ಮಾಡಿದ ಪೆಟ್ರೋಲ್, ಡೀಸೆಲ್ ಬೆಲೆ! ಪೆಟ್ರೋಲ್ 35-37, ಡೀಸೆಲ್ ದರ 42-43 ಪೈಸೆ ಇಳಿಕೆ! ದೇಶದ ಮಹಾನಗರಗಳಲ್ಲಿ ತೈಲದರದಲ್ಲಿ ಗಮನಾರ್ಹ ಇಳಿಕೆ! ಎಸ್‌ಎಂಎಸ್ ಮೂಲಕ ಇಂದಿನ ಪೆಟ್ರೋಲ್, ಡೀಸೆಲ್ ಬೆಲೆ ತಿಳಿಯಿರಿ

ಮುಂಬೈ(ನ.27): ನಿರಂತರವಾಗಿ ಇಳಿಕೆಯತ್ತ ಮುಖ ಮಾಡಿರುವ ತೈಲೋತ್ಪನ್ನಗಳ ದರ ಮಂಗಳವಾರವೂ ಇಳಿಕೆಯಾಗಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಗಮನಾರ್ಹ ಇಳಿಕೆ ಕಂಡು ಬಂದಿದೆ.

ದೇಶದ ಪ್ರಮುಖ ಮೆಟ್ರೋ ನಗರಳಲ್ಲಿ ಪೆಟ್ರೋಲ್ ದರ 35 ರಿಂದ 37 ಪೈಸೆಯಷ್ಟು ಇಳಿಕೆಯಾಗಿದ್ದು, ಡೀಸೆಲ್ ದರ ಕೂಡ 42 ರಿಂದ 43 ಪೈಸೆಯಷ್ಟು ಇಳಿಕೆಯಾಗಿದೆ. ಇನ್ನು ವಾಣಿಜ್ಯ ನಗರಿ ಮುಂಬೈನಲ್ಲಿ 90ರ ಗಡಿ ದಾಟಿದ್ದ ಪೆಟ್ರೋಲ್ ಬೆಲೆ ಇದೀಗ 80ರ ಆಸುಪಾಸು ಬಂದಿದ್ದು, ಇದು ಕಳೆದ 10 ತಿಂಗಳ ಹಿಂದಿನ ದರಕ್ಕೆ ಸಮನಾಗಿದೆ.

ಅದರಂತೆ ದೇಶದ ಮಹಾನಗರಗಳಲ್ಲಿ ಇಂದಿನ ಪೆಟ್ರೋಲ್, ಡೀಸೆಲ್ ಬೆಲೆ ನೋಡುವುದಾದರೆ..

ರಾಷ್ಟ್ರ ರಾಜಧಾನಿ ನವದೆಹಲಿ-

ಪೆಟ್ರೋಲ್ ದರ: 74.49 ರೂ.

ಡೀಸೆಲ್ ದರ: 69.29 ರೂ.

ವಾಣಿಜ್ಯ ರಾಜಧಾನಿ ಮುಂಬೈ-

ಪೆಟ್ರೋಲ್ ದರ: 80.03 ರೂ.

ಡೀಸೆಲ್ ದರ: 72.56 ರೂ.

ಪ.ಬಂಗಾಳ ರಾಜಧಾನಿ ಕೋಲ್ಕತ್ತಾ-

ಪೆಟ್ರೋಲ್ ದರ: 76.47 ರೂ.

ಡೀಸೆಲ್ ದರ: 70.74 ರೂ.

ತಮಿಳುನಾಡು ರಾಜಧಾನಿ ಚೆನ್ನೈ-

ಪೆಟ್ರೋಲ್ ದರ: 77.32 ರೂ.

ಡೀಸೆಲ್ ದರ: 72.77 ರೂ.

ರಾಜ್ಯ ರಾಜಧಾನಿ ಬೆಂಗಳೂರು-

ಪೆಟ್ರೋಲ್ ದರ: 75.08 ರೂ.

ಡೀಸೆಲ್ ದರ: 69.65 ರೂ.

ಅಂತರಾಷ್ಟ್ರೀಯ ಕಚ್ಛಾ ತೈಲ ದರ ಇಳಿಕೆಯೇ ತೈಲದರಗಳ ಇಳಿಕೆಗೆ ಕಾರಣ ಎನ್ನಲಾಗುತ್ತಿದ್ದು, ಮುಂದಿನ ದಿನಗಳಲ್ಲೂ ಬೆಲೆಯಲ್ಲಿ ಮತ್ತಷ್ಟು ಇಳಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ತೈಲೋತ್ಪನ್ನಗಳ ದರ ತಿಳಿಯಲು ಉಚಿತ ಎಸ್ಎಂಎಸ್ ಸೇವೆ:

ಇನ್ನು ಇಂಡಿಯನ್ ಆಯಿಲ್ ಕಾರ್ಪೋರೇಷನ್ ಸಂಸ್ಥೆಗೆ ಗ್ರಾಹಕರು ಎಸ್ಎಂಎಸ್ ಕಳುಹಿಸುವ ಮೂಲಕ ಆಯಾ ನಗರದಲ್ಲಿನ ದರಗಳ ಮಾಹಿತಿ ಪಡೆಯಬಹುದು. ಈ ಬಗ್ಗೆ ಸಂಸ್ಥೆ ತನ್ನ ವೆಬ್‌ಸೈಟ್‌ನಲ್ಲಿ ಮಾಹಿತಿ ನೀಡಿದೆ

ಗ್ರಾಹಕರು https://www.iocl.com/Products/PetrolDieselPrices.aspx ಗೆ ಭೇಟಿ ಅಥವಾ 92249-92249 ನಂಬರ್ ಗೆ ಆಯಾ ಜಿಲ್ಲೆಯ ಕೋಡ್ ಅನ್ನು ಎಸ್ಎಂಎಸ್ ಮಾಡಿ ದರಗಳ ಮಾಹಿತಿ ಪಡೆಯಬಹುದು.

click me!