
ನವದೆಹಲಿ(ಸೆ.29): ಗಗನದತ್ತ ಮುಖ ಮಾಡಿರುವ ತೈಲೋತ್ಪನ್ನಗಳ ದರ ಮತ್ತೆ ಏರಿಕೆಯಾಗಿದ್ದು, ಶನಿವಾರ ಒಂದೇ ದಿನ ಪೆಟ್ರೋಲ್ ಪ್ರತೀ ಲೀಟರ್ ಗೆ 22 ಪೈಸೆಯಷ್ಟು ಏರಿಕೆಯಾಗಿದೆ.
ಅದರಂತೆ ಪ್ರತೀ ಲೀಟರ್ ಡೀಸೆಲ್ ದರದಲ್ಲಿ 21 ಪೈಸೆಯಷ್ಟು ಏರಿಕೆಯಾಗಿದೆ.
ದೆಹಲಿಯಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 83.40 ರೂ. ಗೆ ಏರಿಕೆಯಾಗಿದ್ದು, ಡೀಸೆಲ್ 74.63 ರೂ.ಗೆ ಏರಿಕೆಯಾಗಿದೆ. ಇನ್ನು ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಪೆಟ್ರೋಲ್ ದರ 90.75 ರೂ. ಗೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 79.23 ರೂ. ಗೆ ಏರಿಕೆಯಾಗಿದೆ.
ಇನ್ನು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 84.19 ರೂ.ಗೆ ಏರಿಕೆಯಾಗಿದ್ದು, ಡೀಸೆಲ್ ದರ 75.09 ರೂ.ಗೆ ಏರಿಕೆಯಾಗಿದೆ. ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರದಲ್ಲಿ ಗಣನೀಯ ಏರಿಕೆಯಾಗುತ್ತಿರುವುದು ಇಂಧನ ದರ ಏರಿಕೆಗೆ ಕಾರಣ ಎನ್ನಲಾಗಿದೆ.
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.