
ನವದೆಹಲಿ(ಜು.05): ಮೋದಿ 2.0 ಸರ್ಕಾರದ ಮೊದಲ ಪೂರ್ಣ ಪ್ರಮಾಣದ ಬಜೆಟ್ ಲೋಕಸಭೆಯಲ್ಲಿ ಮಂಡನೆಯಾಗಿದೆ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಬುತ್ತಿ ಬಿಚ್ಚಿಟ್ಟಿದ್ದಾರೆ. ಬಜೆಟ್ ಭಾಷಣ ಪೂರ್ಣಗೊಳಿಸಿರುವ ನಿರ್ಮಲಾ ಸೀತಾರಾಮನ್, ದೇಶದ ಆರ್ಥಿಕ ಅಭಿವೃದ್ಧಿಯ ನೀಲನಕ್ಷೆಯನ್ನು ಎಳೆ ಎಳೆಯಾಗಿ ಬಿಚ್ಚಿಟ್ಟರು.
ಸ್ವಚ್ಛ ಭಾರತ ಅಭಿಯಾನದ ಬೆಳವಣಿಗೆ ಕುರಿತು ಎಳೆ ಎಳೆಯಾಗಿ ಬಿಚ್ಚಿಟ್ಟ ಹಣಕಸು ಸಚಿವೆ, ಸ್ವಚ್ಛ ಭಾರತದ ಅಭಿಯಾನ ಕೇಂದ್ರ ಸರ್ಕಾರದ ಅತ್ಯಂತ ಯಶಸ್ವಿ ಅಭಿಯಾನವಾಗಿ ಮುನ್ನುಗ್ಗುತ್ತಿದೆ ಎಂದು ಹೇಳಿದ್ದಾರೆ.
ಯೋಜನೆಯಡಿ 1,700 ನಗರಗಳಲ್ಲಿ 45,000ಕ್ಕೂ ಹೆಚ್ಚು ಸಾರ್ವಜನಿಕ ಶೌಚಾಲಯ ನಿರ್ಮಾಣವಾಗಿದ್ದು, ಶೌಚಾಲಯ ನಿರ್ಮಾಣಗಳನ್ನು ಗೂಗಲ್ ಮ್ಯಾಪ್ ಮೂಲಕವೂ ಹುಡುಕಬಹುದಾಗಿದೆ ಎಂದು ಸಚಿವರು ಪ್ರಕಟಿಸಿದ್ದಾರೆ.
1 ಕೋಟಿಗೂ ಹೆಚ್ಚು ಜನರು ಸ್ವಚ್ಛತಾ ಆಪ್ ಡೌನ್ ಲೋಡ್ ಮಾಡಿದ್ದು, ಗ್ರಾಮೀಣ ಭಾಗದಲ್ಲೂ ತ್ಯಾಜ್ಯ ವಿಲೇವಾರಿಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದರು.
ಪ್ರತಿ ಗ್ರಾಮದಲ್ಲೂ ಘನತ್ಯಾಜ್ಯ ನಿರ್ವಹಣಾ ಘಟಕ ನಿರ್ಮಾಣಕ್ಕೆ ಮುಂದಾಗಿರುವ ಕೇಂದ್ರ, ನಗರ ಪ್ರದೇಶಗಳು ಶೇ.94ರಷ್ಟು ಬಯಲು ಶೌಚಾಲಯ ಮುಕ್ತವಾಗಿವೆ ಎಂದು ಸಚಿವರು ತಿಳಿಸಿದ್ದಾರೆ.
ಇದೇ ಅಕ್ಟೊಬರ್ 2ರಂದು ರಾಜಘಾಟ್'ನಲ್ಲಿ ಸ್ವಚ್ಛತಾ ಕೇಂದ್ರ ಉದ್ಘಾಟನೆಯಾಗಲಿದೆ ಎಂದು ಹಣಕಸು ಸಚಿವರು ತಿಳಿಸಿದರು.
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.