
ಶ್ರಾವಣ ಮಾಸ ಆರಂಭವಾಗುತ್ತಿದ್ದಂತೆ ಏರಿಕೆಯಾಗಿದ್ದ ಬಂಗಾರದ ದರ ಇಂದು ಇಳಿಕೆಯಾಗಿದೆ. ಈ ಹಿನ್ನೆಲೆ ಬಂಗಾರದ ಆಭರಣಗಳನ್ನು ಖರೀದಿಸಲು ಪ್ಲ್ಯಾನ್ ಮಾಡುತ್ತಿದ್ದವರು ಇಂದೇ ಒಡವೆ ಖರೀದಿಸಬಹುದು. ಹಾಗೂ, ಶುಭ ಸಮಾರಂಭಗಳು ಹೆಚ್ಚಾಗಿರುವ ಹಿನ್ನೆಲೆ ಆಭರಣಗಳನ್ನು ಖರೀದಿಗೆ ಮುಮದಾಗಿರುವವರು ಸಹ ಇಂದೇ ಹೋಗಬಹುದು, ಇದರಿಂದ ನಿಮ್ಮ ಜೇಬಿಗೆ ಬೀಳುವ ಹೊರೆ ಸ್ವಲ್ಪ ಕಡಿಮೆಯಾಗುತ್ತದೆ. ಆದರೆ, ದೇಶದಲ್ಲಿ ಬೆಳ್ಳಿ ದರ ಏರಿಕೆಯಾಗಿದ್ದರೂ, ರಾಜ್ಯ ರಾಜಧಾನಿಯಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ. ನೀವೂ ಸಹ ಚಿನ್ನ, ಬೆಳ್ಳಿ ಖರೀದಿಸುವ ಪ್ಲ್ಯಾನ್ ಮಾಡುತ್ತಿದ್ದೀರಾ..? ಹಾಗಾದರೆ, ಬೆಂಗಳೂರಿನಲ್ಲಿ ಇಂದು ಚಿನ್ನ, ಬೆಳ್ಳಿ ಬೆಲೆ ಎಷ್ಟಿದೆ..? ದೇಶದ ಪ್ರಮುಖ ನಗರಗಳಲ್ಲಿ ದರ ಹೇಗಿದೆ..? ಇಲ್ಲಿದೆ ವಿವರ.
ಒಂದು ಗ್ರಾಂ (1GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,714
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,142
ಇದನ್ನು ಓದಿ: ಧಾರವಾಡದಲ್ಲಿ ಹೆಚ್ಚಾದ ಪೆಟ್ರೋಲ್, ಡೀಸೆಲ್ ದರ; ನಿಮ್ಮ ನಗರಗಳಲ್ಲಿ ಇಂದಿನ ಇಂಧನ ಬೆಲೆ ವಿವರ ಇಲ್ಲಿದೆ..
ಎಂಟು ಗ್ರಾಂ (8GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 37,712
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 41,136
ಹತ್ತು ಗ್ರಾಂ (10GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 47,140
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 51,420
ನೂರು ಗ್ರಾಂ (100GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,71,400
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,14,200
ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 47,140 ಆಗಿದ್ದರೆ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 47,940, ರೂ. 47,090, ರೂ. 47,090 ಆಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 47,200 ರೂ. ಆಗಿದೆ.
ಇಂದಿನ ಬೆಳ್ಳಿ ದರ
ಇನ್ನು, ನಿನ್ನೆಗೆ ಹೋಲಿಸಿದರೆ ಇಂದು ಭಾರತದಲ್ಲಿ ಬೆಳ್ಳಿ ದರದಲ್ಲಿ ಸಹ ಏರಿಕೆಯಾಗಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಆಗಾಗ ಬೆಲೆಯಲ್ಲಿ ಎರಿಳಿತ ಉಂಟಾಗುತ್ತಿರುತ್ತದೆ. ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ.
ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್
ಒಂದೆಡೆ, ದೇಶದಲ್ಲಿ ಬೆಳ್ಳಿ ದರ ಏರಿಕೆಯಾಗಿದ್ದರೆ, ರಾಜ್ಯ ರಾಜಧಾನಿ ಅಂದರೆ ಬೆಂಗಳೂರಿನಲ್ಲಿ ಬೆಳ್ಳಿ ದರ ಯಥಾಸ್ಥಿತಿ ಕಾಯ್ದುಕೊಂಡಿದೆ. ಇಂದು, ಬೆಂಗಳೂರಿನಲ್ಲಿ 10 gm, 100 gm, 1000 gm (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 633, ರೂ. 6,330 ಹಾಗೂ ರೂ. 63,300 ಗಳಾಗಿವೆ. ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 63,300 ಆಗಿದ್ದರೆ, ಮುಂಬೈನಲ್ಲಿ ರೂ. 58,300 ಹಾಗೂ ಕೋಲ್ಕತ್ತದಲ್ಲೂ ರೂ. 58,300 ಗಳಾಗಿದೆ. ಅಲ್ಲದೆ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸಹ ಇಂದಿನ ಬೆಳ್ಳಿ ದರ ರೂ. 58,300 ಇದೆ.
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.