Gold Silver Price Today: ಮತ್ತೆ ದುಬಾರಿಯಾಯ್ತು ಚಿನ್ನದ ಬೆಲೆ; ಇಂದಿನ ಬಂಗಾರ, ಬೆಳ್ಳಿ ದರ ವಿವರ ಹೀಗಿದೆ..

By BK AshwinFirst Published Nov 30, 2022, 11:58 AM IST
Highlights

ನೀವು ಚಿನ್ನ, ಬೆಳ್ಳಿ ಆಭರಣ ಖರೀದಿಗೆ ಪ್ಲ್ಯಾನ್‌ ಮಾಡಿದ್ದೀರಾ.. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..

Gold Rate on November 30th 2022: ಬಂಗಾರದ (Gold) ದರ ಇಳಿಕೆಯಾಗಲು ಕಾಯುತ್ತಿದ್ದವರಿಗೆ ಶಾಕ್‌ ಆಗುವ ಸುದ್ದಿ ಇದು. ನಿನ್ನೆಯಷ್ಟೇ ಇಳಿಕೆಯಾಗಿದ್ದ ಚಿನ್ನದ ಬೆಲೆ ಇಂದು ಮತ್ತೆ ಹೆಚ್ಚಾಗಿದೆ. ಇನ್ನು, ಬೆಂಗಳೂರಲ್ಲಿ ಬೆಳ್ಳಿ  (Silver) ಬೆಲೆ ಸ್ವಲ್ಪ ಕಡಿಮೆಯಾಗಿದ್ದರೂ, ಇತರೆಡೆ ಯಥಾಸ್ಥಿತಿ ಕಾಯ್ದುಕೊಂಡಿದೆ. ಈ ಹಿನ್ನೆಲೆ ಮಗನ, ಮಗಳ ಮದುವೆ ಮಾಡಿಸೋಕೆ ಅಂತ ಹಣ ಕೂಡಿಟ್ಟು ಆಭರಣ  (Jewellery) ಮಾಡಿಸೋಕೆ ತಯಾರಾದವರಿಗೆ ಮತ್ತಷ್ಟು ಹಣ ಕೂಡಿಡುವಂತಹ ಪರಿಸ್ಥಿತಿ ಬಂದೊದಗಿದೆ. ಇನ್ನು, ಪ್ರತಿನಿತ್ಯ ಹಲವರು ಚಿನ್ನ, ಬೆಳ್ಳಿ ದರವನ್ನು ಪರಿಶೀಲಿಸುತ್ತಾರೆ. ನೀವೂ ಸಹ ಚಿನ್ನ (Gold), ಬೆಳ್ಳಿ (Silver) ಖರೀದಿಗೆ ಪ್ಲ್ಯಾನ್‌ ಮಾಡಿದ್ದೀರಾ..? ಇಂದು ಬೆಂಗಳೂರಿನಲ್ಲಿ (Bengaluru) ಬಂಗಾರ, ಬೆಳ್ಳಿ ಬೆಲೆ ಎಷ್ಟಿದೆ ಹಾಗೂ ದೇಶದ ಪ್ರಮುಖ ನಗರಗಳಲ್ಲಿ ದರ ಹೇಗಿದೆ ಎಂಬ ಬಗ್ಗೆ ತಿಳ್ಕೋಬೇಕಾ.. ಇಲ್ಲಿದೆ ವಿವರ..

ಇಂದು ದೇಶದಲ್ಲಿ (India) ಬಂಗಾರದ ದರ ಏರಿಕೆಯಾಗಿದ್ದು, ಆದರೆ ಬೆಳ್ಳಿಯ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಇನ್ನು, ಬೆಂಗಳೂರಲ್ಲಿ ಬೆಳ್ಳಿ ದರ ಅಲ್ಪ ಇಳಿಕೆಯಾಗಿದೆ. ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ ನೋಡಿ..

ಇದನ್ನು ಓದಿ: Petrol, Diesel Price Today: ಉತ್ತರ ಕನ್ನಡ, ಚಿಕ್ಕಮಗಳೂರಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಇಳಿಕೆ

ಒಂದು ಗ್ರಾಂ ಚಿನ್ನ (1GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,860
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,302

ಎಂಟು ಗ್ರಾಂ ಚಿನ್ನ (8GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 38,880
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 42,416

ಹತ್ತು ಗ್ರಾಂ ಚಿನ್ನ (10GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 48,600
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 53,020

ನೂರು ಗ್ರಾಂ ಚಿನ್ನ (100GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ.  4,86,000
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,30,200

ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ.    48,600 ರೂ. ಆಗಿದ್ದು, ನಿನ್ನೆಗಿಂತ ಬೆಲೆಯಲ್ಲಿ ಹೆಚ್ಚಾಗಿದೆ. ಇನ್ನು, ದೇಶದ ಪ್ರಮುಖ ಮೆಟ್ರೋಪಾಲಿಟನ್‌ ನಗರಗಳಾದ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾದಲ್ಲಿ ಕ್ರಮವಾಗಿ ಚಿನ್ನದ ಬೆಲೆ ರೂ. 49,360, ರೂ. 48,550, ರೂ. 48,550 ಆಗಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ಹೊಸ ದೆಹಲಿಯಲ್ಲಿ ಸಹ ಚಿನ್ನದ ಬೆಲೆ ಬುಧವಾರ 48,700 ರೂ. ಆಗಿದ್ದು, ನಿನ್ನೆಗಿಂತ ದರ ಜಾಸ್ತಿಯಾಗಿದೆ.

ಇಂದಿನ ಬೆಳ್ಳಿ ದರ
ಇನ್ನು, ದೇಶದಲ್ಲಿ ನಿನ್ನೆಗೆ ಹೋಲಿಸಿದರೆ ಇಂದು ಬೆಳ್ಳಿ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದ್ದರೂ, ಬೆಂಗಳೂರು, ಚೆನ್ನೈನಲ್ಲಿ ಅಲ್ಪ ಇಳಿಕೆಯಾಗಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ - ಇಳಿಕೆಯಾದಂತೆಯೂ ಚಿನ್ನ - ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ. 

ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್
ದೇಶದ ಹಲವು ನಗರಗಳಲ್ಲಿ ಇಂದು ಬಂಗಾರದ ದರದಲ್ಲಿ ಹೆಚ್ಚಾಗಿದೆ. ಆದರೆ, ಬೆಳ್ಳಿ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ, ಆದರೂ ಬೆಂಗಳೂರರು, ಚೆನ್ನೈನಲ್ಲಿ ಬೆಲೆ ಇಳಿಕೆಯಾಗಿದೆ. ಇಂದು, ಬೆಂಗಳೂರಿನಲ್ಲಿ 10 gm, 100 gm, 1000 gm (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 680, ರೂ. 6,800 ಹಾಗೂ ರೂ. 68,000 ಗಳಾಗಿವೆ. ಇನ್ನು, ದೇಶದ ಇತರೆ ಪ್ರಮುಖ ನಗರಗಳಾದ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 68,000 ಆಗಿದ್ದು, ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ರೂ. 61,400, ಕೋಲ್ಕತ್ತದಲ್ಲಿ ರೂ. 61,400 ಹಾಗೂ ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಸಹ ಇಂದಿನ ಬೆಳ್ಳಿ ದರ ರೂ. 61,400 ಆಗಿದ್ದು, ನಿನ್ನೆಯ ದರ ಸಹ ಇಷ್ಟೇ ಇತ್ತು.

click me!