Gold and Silver Price: ಚಿನ್ನದ ದರ ಕುಸಿತ, ಗ್ರಾಹಕರಿಗೆ ಸಂತಸ: ಇಲ್ಲಿದೆ ಇಂದಿನ ರೇಟ್

Published : May 25, 2022, 02:14 PM ISTUpdated : May 25, 2022, 04:39 PM IST
Gold and Silver Price: ಚಿನ್ನದ ದರ ಕುಸಿತ, ಗ್ರಾಹಕರಿಗೆ ಸಂತಸ: ಇಲ್ಲಿದೆ ಇಂದಿನ ರೇಟ್

ಸಾರಾಂಶ

ಹೆಣ್ಮಕ್ಕಳಿಗೆ ಚಿನ್ನವೆಂದರೆ ಅಚ್ಚುಮೆಚ್ಚು ಆದರೀಗ ಚಿನ್ನ ಹಾಗೂ ಬೆಳ್ಳಿ ದರ ಏರಿಕೆಯಾಗುತ್ತಿದ್ದು, ಚಿನ್ನ ಪ್ರಿಯರನ್ನು ನಿರಾಸೆಗೊಳಿಸಿದೆ. ಶುಭ ಕಾರ್ಯಗಳನ್ನಿಟ್ಟುಕೊಂಡವರು ಬೇರೆ ದಾರಿ ಇಲ್ಲದೇ ಚಿನ್ನ ಖರೀದಿಸುತ್ತಿದ್ದರೆ, ಇತ್ತ ಹೂಡಿಕೆಗಾಗಿ ಚಿನ್ನ ಖರೀದಿಸಹೊರಟವರು ತಮ್ಮ ಯೋಜನೆಯನ್ನು ಮುಂದಕ್ಕೆ ದೂಡುತ್ತಿದ್ದಾರೆ.  

ಬೆಂಗಳೂರು(ಮೇ.25): ಕೊರೋನಾ ಬಳಿಕ ಏರಿಕೆ ಹಾದಿ ಹಿಡಿದು, ದಾಖಲೆ ಸೃಷ್ಟಿಸಿದ್ದ ಚಿನ್ನದ ದರ ಪ್ರಕರಣಳು ಕುಸಿತಗೊಂಡಾಗ ಕೊಂಚ ಇಳಿಕೆ ಕಂಡಿತ್ತು. ಆದರೆ ರಷ್ಯಾ ಉಕ್ರೇನ್ ಯುದ್ಧದ ಸಂದರ್ಭದಲ್ಲಿ ಮತ್ತೆ ಏರಿಕೆ ಕಂಡಿತ್ತು. ಇದು ಚಿನ್ನ ಕೊಳ್ಳಲು ತಯಾರಾದವರಿಗೆ ಶಾಕ್ ಕೊಟ್ಟಿತ್ತು. ಇದಾದ ಬಳಿಕ ಏರಿಕೆಗೆ ಕೊಂಚ ಬ್ರೇಕ್ ಬಿದ್ದಿದೆಯಾದರೂ ಚಿನ್ನ, ಬೆಳ್ಳಿ ದರ ಮಾತ್ರ ಇಳಿಕೆಯಾಗಿಲ್ಲ. ಇನ್ನು ಬೆಂಗಳೂರಿನಲ್ಲಿ ಇಂದು ಚಿನ್ನ ದರ ಎಷ್ಟಿದೆ? ದೇಶದ ಪ್ರಮುಖ ನಗರಗಳಲ್ಲಿ ದರ ಹೇಗಿದೆ? ಇಲ್ಲಿದೆ ವಿವರ

ಒಂದು ಗ್ರಾಂ (1GM)

22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ.  4,645
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ.  5,067

ಎಂಟು ಗ್ರಾಂ (8GM)

22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 37,160
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 40,536

ಹತ್ತು ಗ್ರಾಂ (10GM)

22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 46,450
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 50,670

ನೂರು ಗ್ರಾಂ (100GM)

22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ.  4,64,500
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,06,700

ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್

ರಾಜಧಾನಿ ನಗರ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 46,450 ಆಗಿದ್ದರೆ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 47,726, ರೂ. 46,450, ರೂ. 46,450 ಆಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 46,450 ರೂ. ಆಗಿದೆ.

ಇಂದಿನ ಬೆಳ್ಳಿ ದರ

ನಿನ್ನೆಗೆ ಹೋಲಿಸಿದರೆ ಇಂದು ಭಾರತದಲ್ಲಿ ಬೆಳ್ಳಿ ದರದಲ್ಲಿ ಹೆಚ್ಚಳವಾಗಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಅವಲಂಬಿತವಾಗಿದ್ದು ಏರಿಕೆ, ಇಳಿಕೆಗಳು ಆಗುತ್ತಿರುತ್ತವೆ. ಅಲ್ಲದೆ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನವೂ ಸಹ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಲೆ ಇರುತ್ತದೆ.

ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್

ಇಂದು, ಬೆಂಗಳೂರಿನಲ್ಲಿ 10 gm, 100 gm, 1000 gm (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 670, ರೂ. 6,700 ಹಾಗೂ ರೂ. 67,000 ಗಳಾಗಿವೆ. ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ 67,000 ಆಗಿದ್ದರೆ ದೆಹಲಿಯಲ್ಲಿ 62,300 ಮುಂಬೈನಲ್ಲಿ 62,300 ಹಾಗೂ ಕೋಲ್ಕತ್ತದಲ್ಲೂ ರೂ. 62,300 ಗಳಾಗಿದೆ.

PREV

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

Read more Articles on
click me!

Recommended Stories

ರಿಲಯನ್ಸ್‌ ಪವರ್‌, 10 ಮಂದಿ ವಿರುದ್ಧ ಇ.ಡಿ.ಚಾರ್ಜ್‌ಶೀಟ್‌
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!