ಸಂಜೆ ಹೊತ್ತಲ್ಲಿ ಚಿನ್ನದ ಬೆಲೆ: ಕೊಳ್ಳುವ ಮೊದಲು ದರಪಟ್ಟಿ ನೋಡಿ ಇಲ್ಲೇ!

Published : Jan 02, 2020, 07:46 PM IST
ಸಂಜೆ ಹೊತ್ತಲ್ಲಿ ಚಿನ್ನದ ಬೆಲೆ: ಕೊಳ್ಳುವ ಮೊದಲು ದರಪಟ್ಟಿ ನೋಡಿ ಇಲ್ಲೇ!

ಸಾರಾಂಶ

ಮಾರುಕಟ್ಟೆಯಲ್ಲಿ ಇಂದಿನ ಚಿನ್ನದ ದರ ಎಷ್ಟು ಗೊತ್ತಾ?| ಬೆಳ್ಳಿ ಬೆಲೆ ಕುರಿತು ನಿಮಗೆ ಗೊತ್ತಿರಲೇಬಾಕಾದ ಮಾಹಿತಿ| ಮೂರು ದಿನಗಳಿಂದ ನಿರಂತರವಾಗಿ ಏರಿಕೆಯಾಗುತ್ತಿರುವ ಚಿನ್ನದ ದರ| ಮಲ್ಟಿ ಕಮೋಡಿಟಿ ಎಕ್ಸಚೇಂಜ್'ನಲ್ಲಿ ಚಿನ್ನದ ಬೆಲೆಯಲ್ಲಿ ಶೇ. 0.25ರಷ್ಟು ಏರಿಕೆ| ದೇಶೀಯ ಮಾರುಕಟ್ಟೆಯಲ್ಲಿ 10 ಗ್ರಾಂ ಚಿನ್ನದ ಬೆಲೆ 39,165 ರೂ.| ದೇಶೀಯ ಮಾರುಕಟ್ಟೆಯಲ್ಲಿ ಒಂದು ಕೆಜಿ ಬೆಳ್ಳಿ ಬೆಲೆ 46,780 ರೂ.| ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಒಂದು ಔನ್ಸ್'ಗೆ 1,518.60 ಡಾಲರ್|

ನವದೆಹಲಿ(ಡಿ.27): ಹೊಸ ವರ್ಷದ ಹುಮ್ಮಸ್ಸಿನಲ್ಲಿರುವ ಆಭರಣ ಪ್ರಿಯರಿಗೆ ಚಿನ್ನದ ಬೆಲೆ ಏರಿಕೆಯ ಬಿಸಿ ಮುಟ್ಟಿದ್ದು, ನಿರಂತರ ದರ ಇಳಿಕೆಯಿಂದ ತೀವ್ರ ಚಟುವಟಿಕೆಯಿಂದ ಕೂಡಿದ್ದ ಮಾರುಕಟ್ಟೆ ಇದೀಗ ಮಂದಗತಿಯಲ್ಲಿ ಸಾಗುತ್ತಿದೆ.

ಮಲ್ಟಿ ಕಮೋಡಿಟಿ ಎಕ್ಸಚೇಂಜ್'ನಲ್ಲಿ ಚಿನ್ನದ ಬೆಲೆಯಲ್ಲಿ ಶೇ. 0.25ರಷ್ಟು ಏರಿಕೆಯಾಗಿದ್ದು, 10 ಗ್ರಾಂ ಚಿನ್ನದ ಬೆಲೆ ದೇಶೀಯ ಮಾರುಕಟ್ಟೆಯಲ್ಲಿ ಇದೀಗ 39,165 ರೂ. ಆಗಿದೆ.

ಮೂರು ದಿನಗಳಿಂದ ನಿರಂತರವಾಗಿ ಚಿನ್ನದ ಬೆಲೆಯಲ್ಲಿ ಏರಿಕೆಯಾಗುತ್ತಿದ್ದು, ಎರಡು ತಿಂಗಳ ಅವಧಿಯಲ್ಲಿ ಅತ್ಯಂತ ಹೆಚ್ಚಿನ ಬೆಲೆಗೆ ಮಾರಾಟವಾಗುತ್ತಿದೆ.

ನೀವು ತಿಳಿದುಕೊಳ್ಳಲೇಬೇಕಾದ ಚಿನ್ನದ ದರ: ಮಾರುಕಟ್ಟೆ ಹರೋಹರ!

ಇನ್ನು ಬೆಳ್ಳಿ ಬೆಲೆಯಲ್ಲೂ ಶೇ.0.25ರಷ್ಟು ಏರಿಕೆ ಕಂಡುಬಂದಿದ್ದು, ದೇಶೀಯ ಮಾರುಕಟ್ಟೆಯಲ್ಲಿ ಒಂದು ಕೆಜಿ ಬೆಳ್ಳಿ ಬೆಲೆ 46,780 ರೂ. ಆಗಿದೆ.

ಅದರಂತೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯಲ್ಲಿ ಶೇ.0.1ರಷ್ಟು ಏರಿಕೆಯಾಗಿದ್ದು, ಚಿನ್ನದ ಬೆಲೆ ಒಂದು ಔನ್ಸ್'ಗೆ 1,518.60 ಡಾಲರ್ ಆಗಿದೆ.

ಚಿನ್ನದ ಬೆಲೆ ಲೆಕ್ಕ ಹಾಕೋದ್ಹೇಗೆ?

PREV

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

click me!

Recommended Stories

"100 ಮಿಲಿಯನ್ ವೀವ್ಸ್ ಬಂದ್ರೂ ವೇಸ್ಟ್?!": ಯೂಟ್ಯೂಬ್ ಮೇಲೆ ಕಾಮಿಡಿಯನ್ ಸಮಯ್ ರೈನಾ ಸಖತ್ ಗರಂ!
​ಇಂದು ₹2 ಲಕ್ಷ ಇರುವ ಸ್ಕೂಲ್‌ ಫೀಸ್ 10 ವರ್ಷದ ನಂತ್ರ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಶಾಕಿಂಗ್ ಲೆಕ್ಕಾಚಾರ!