ಡಿಸೆಂಬರ್ ಶುಭಾರಂಭ: ಚಿನ್ನದ ಬೆಲೆಯಲ್ಲಿ ಗಮನಾರ್ಹ ಇಳಿಕೆ!

Published : Dec 02, 2019, 02:42 PM ISTUpdated : Dec 02, 2019, 04:29 PM IST
ಡಿಸೆಂಬರ್ ಶುಭಾರಂಭ: ಚಿನ್ನದ ಬೆಲೆಯಲ್ಲಿ ಗಮನಾರ್ಹ ಇಳಿಕೆ!

ಸಾರಾಂಶ

ಡಿಸೆಂಬರ್ ಆರಂಭದಲ್ಲಿ ಇಳಿಕೆಯತ್ತ ಮುಖ ಮಾಡಿದ ಚಿನ್ನದ ದರ| ಆಭರಣ ಪ್ರೀಯರಲ್ಲಿ ಸಂತಸ ಮೂಡಿಸಿದ ಚಿನ್ನದ ದರ ಇಳಿಕೆ| ಮಲ್ಟಿ ಕಮೋಡಿಟಿ ಎಕ್ಸಚೇಂಜ್’ನಲ್ಲಿ ಶೇ. 0.4ರಷ್ಟು ಇಳಿಕೆ ಕಂಡ ಚಿನ್ನದ ದರ| ದೇಶೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಇದೀಗ 37,878 ರೂ.| ಬೆಳ್ಳಿ ಬೆಲೆಯಲ್ಲಿ ಒಟ್ಟು ಶೇ.0.74ರಷ್ಟು ಇಳಿಕೆ| ದೇಶೀಯ ಮಾರುಕಟ್ಟೆಯಲ್ಲಿ ಬೆಳ್ಳಿ ಬೆಲೆ ಇದೀಗ 44,736 ರೂ.| ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಒಂದು ಔನ್ಸ್ ಚಿನ್ನದ ಬೆಲೆ 1,461.15  ಡಾಲರ್|

ನವದೆಹಲಿ(ಡಿ.02): ನವೆಂಬರ್ ತಿಂಗಳಲ್ಲಿ ಹೆಚ್ಚು ಕಡಿಮೆ ಹಾವು-ಏಣಿ ಆಟವಾಡಿದ್ದ ಆಭರಣ ದರ, ಡಿಸೆಂಬರ್ ಆರಂಭದಲ್ಲಿ ಗಮನಾರ್ಹ ಇಳಿಕೆ ಕಾಣುವ ಮೂಲಕ ಆಭರಣ ಪ್ರಿಯರಲ್ಲಿ ಸಂತಸ ಮೂಡಿಸಿದೆ.

ಮಲ್ಟಿ ಕಮೋಡಿಟಿ ಎಕ್ಸಚೇಂಜ್’ನಲ್ಲಿ ಚಿನ್ನದ ಬೆಲೆಯಲ್ಲಿ ಶೇ.0.4ರಷ್ಟು ಇಳಿಕೆ ಕಂಡಿದೆ. ಈ ಮೂಲಕ 10 ಗ್ರಾಂ ಚಿನ್ನದ ಬೆಲೆ ಇದೀಗ 37,878 ರೂ. ಆಗಿದೆ.

ಚಿನ್ನದ ಬೆಲೆ ಲೆಕ್ಕ ಹಾಕೋದ್ಹೇಗೆ?

ಕಳೆದ 10 ದಿನಗಳಲ್ಲಿ ಒಟ್ಟು 8 ದಿನಗಳಲ್ಲಿ ಚಿನ್ನದ ದರ ಇಳಿಕೆಯಾಗಿದ್ದು, ವರ್ಷದ ಆರಂಭದಲ್ಲಿ ಅಂದರೆ ಫಬ್ರವರಿ 2019ಕ್ಕೆ ಹೋಲಿಸಿದರೆ ಒಟ್ಟು 2,100 ರೂ. ಇಳಿಕೆ ಕಂಡಿದೆ.

ಇದೇ ವೇಳೆ ಬೆಳ್ಳಿ ಬೆಲೆಯಲ್ಲೂ ಗಮನಾರ್ಹ ಇಳಿಕೆ ಕಂಡಿದ್ದು, ಒಟ್ಟು ಶೇ.0.71ರಷ್ಟು ಇಳಿಕೆ ದಾಖಲಾಗಿದೆ. ಈ ಮೂಲಕ ಮಾರುಕಟ್ಟೆಯಲ್ಲಿ ಒಂದು ಕೆಜಿ ಬೆಳ್ಳಿ ಬೆಲೆ 44,736 ರೂ. ಆಗಿದೆ.

ಮತ್ತೆ ಇಳಿಯಿತು ಬೆಳ್ಳಿ, ಬಂಗಾರ: ಕಷ್ಟವಾಗದು ಸಿಂಗಾರ!

ಇನ್ನು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲೂ ಚಿನ್ನದ ದರ ಗಮನಾರ್ಹ ಇಳಿಕೆ ಕಂಡಿದ್ದು, ಒಟ್ಟು ಶೇ.0.3ರಷ್ಟು ಇಳಿಕೆ ದಾಖಲಾಗಿದೆ. ಈ ಮೂಲಕ ಒಂದು ಔನ್ಸ್ ಚಿನ್ನದ ಬೆಲೆ 1,461.15  ಡಾಲರ್ ಆಗಿದೆ.

ಚೆಲುವೆಯ ಅಂದದ ಮೊಗಕೆ: ಚಿನ್ನ, ಬೆಳ್ಳಿ ದರದಲ್ಲಿ ಇಳಿಕೆ!

ಡಿಸೆಂಬರ್ 2ರ ಟಾಪ್ 10  ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:

PREV

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

click me!

Recommended Stories

Business Idea: ಕಡಿಮೆ ಬಂಡವಾಳ, ಅಧಿಕ ಆದಾಯ.. ಎಂದಿಗೂ ಲಾಸ್‌ ಆಗದ ವ್ಯವಹಾರಗಳಿವು!
Whatsapp ಮೂಲಕವೂ ಗ್ಯಾಸ್​ ಸಿಲಿಂಡರ್​ ಬುಕಿಂಗ್​ಗೆ ಅವಕಾಶ: ಸಂಪೂರ್ಣ ಡಿಟೇಲ್ಸ್​ ಇಲ್ಲಿದೆ