ಆಭರಣ ಪ್ರಿಯರಲ್ಲಿ ಸಂತಸ ಮೂಡಿಸಿದ ಚಿನ್ನದ ದರ ಕುಸಿತ| ಮಲ್ಟಿ ಕಮೋಡಿಟಿ ಎಕ್ಸಚೇಂಜ್’ನಲ್ಲಿ ಚಿನ್ನದ ಬೆಲೆ ಶೇ.0.7ರಷ್ಟು ಇಳಿಕೆ| ದೇಶೀಯ ಮಾರುಕಟ್ಟೆಯಲ್ಲಿ 10 ಗ್ರಾಂ ಚಿನ್ನದ ಬೆಲೆ 38,169 ರೂ.| ದೇಶೀಯ ಮಾರುಕಟ್ಟೆಯಲ್ಲಿ ಬೆಳ್ಳಿ ಬೆಲೆಯಲ್ಲಿ ಶೇ.0.01ರಷ್ಟು ಇಳಿಕೆ| ದೇಶೀಯ ಮಾರುಕಟ್ಟೆಯಲ್ಲಿ ಒಂದು ಕೆಜಿ ಬೆಳ್ಳಿ ಬೆಲೆ 44,825 ರೂ.| ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ಒಂದು ಔನ್ಸ್’ಗೆ 1,472 ಡಾಲರ್|
ನವದೆಹಲಿ(ನ.21): ಚಿನ್ನ, ಬೆಳ್ಳಿ ದರ ದೇಶೀಯ ಮಾರುಕಟ್ಟೆಯಲ್ಲಿ ಇಂದೂ ಕೂಡ ಕೊಂಚ ಇಳಿಕೆ ಕಂಡಿದೆ.
ಮಲ್ಟಿ ಕಮೋಡಿಟಿ ಎಕ್ಸಚೇಂಜ್’ನಲ್ಲಿ ಚಿನ್ನದ ಬೆಲೆ ಶೇ.0.7ರಷ್ಟು ಇಳಿಕೆಯಾಗಿದ್ದು, 10 ಗ್ರಾಂ ಚಿನ್ನದ ಬೆಲೆ 38,169 ರೂ. ಆಗಿದೆ.
undefined
ಭಲೇ ಭಲೇ: ಕಡಿಮೆಯಾಯ್ತು ಚಿನ್ನ, ಬೆಳ್ಳಿ ಬೆಲೆ!
ಈ ಮೂಲಕ ಕಳೆದ ಮೂರು ದಿನಗಳಿಂದ ಏರಿಕೆಯತ್ತ ಮುಖ ಮಾಡಿದ್ದ ಚಿನ್ನದ ದರ ಕೊಂಚ ಇಳಿಕೆ ಕಂಡಿದೆ.
ಕಳೆದ ಸೆಪ್ಟೆಂಬರ್ ದರಕ್ಕೆ ಹೋಲಿಸಿದರೆ ಒಟ್ಟು 1,800 ರೂ. ಇಳಿದಿದೆ.
ಒಟ್ಟು 2,300 ರೂ. ಕುಸಿದ ಚಿನ್ನದ ದರ: ಚಿನ್ನದಷ್ಟೇ ಚೆಂದ ವಹಿವಾಟು!
ಅದರಂತೆ ಬೆಳ್ಳಿ ಬೆಲೆಯಲ್ಲೂ ಗಮನಾರ್ಹ ಇಳಿಕೆ ಕಂಡು ಬಂದಿದ್ದು, ಮಲ್ಟಿ ಕಮೋಡಿಟಿ ಎಕ್ಸಚೇಂಜ್’ನಲ್ಲಿ ಶೇ0.01ರಷ್ಟು ದರ ಇಳಿಕೆಯಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಒಂದು ಕೆಜಿ ಬೆಳ್ಳಿ ಬೆಲೆ 44,825 ರೂ. ಆಗಿದೆ.
ಇನ್ನುಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿದ್ದು, ಶೇ.0.1 ರಷ್ಟು ಇಳಿಕೆಯಾಗಿದೆ. ಚಿನ್ನದ ದರ ಒಂದು ಔನ್ಸ್’ಗೆ 1,472 ಡಾಲರ್ ಆಗಿದೆ.
ಕುಸಿದ ಚಿನ್ನದ ದರ: ನವೆಂಬರ್ ಆಗಲಿದೆಯೇ ಶುಭ ಸುದ್ದಿಗಳ ಆಗರ?
ನವೆಂಬರ್ 21ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: