ನೀವು ತಿಳಿದುಕೊಳ್ಳಲೇಬೇಕಾದ ಚಿನ್ನದ ದರ: ಮಾರುಕಟ್ಟೆ ಹರೋಹರ!

By Suvarna News  |  First Published Dec 27, 2019, 12:30 PM IST

ಮಾರುಕಟ್ಟೆಯಲ್ಲಿ ಇಂದಿನ ಚಿನ್ನದ ದರ ಎಷ್ಟು ಗೊತ್ತಾ?| ಬೆಳ್ಳಿ ಬೆಲೆ ಕುರಿತು ನಿಮಗೆ ಗೊತ್ತಿರಲೇಬಾಕಾದ ಮಾಹಿತಿ| ಮೂರು ದಿನಗಳಿಂದ ನಿರಂತರವಾಗಿ ಏರಿಕೆಯಾಗುತ್ತಿರುವ ಚಿನ್ನದ ದರ| ಮಲ್ಟಿ ಕಮೋಡಿಟಿ ಎಕ್ಸಚೇಂಜ್'ನಲ್ಲಿ ಚಿನ್ನದ ಬೆಲೆಯಲ್ಲಿ ಶೇ. 0.32ರಷ್ಟು ಏರಿಕೆ| ದೇಶೀಯ ಮಾರುಕಟ್ಟೆಯಲ್ಲಿ 10 ಗ್ರಾಂ ಚಿನ್ನದ ಬೆಲೆ 38,763 ರೂ.| ದೇಶೀಯ ಮಾರುಕಟ್ಟೆಯಲ್ಲಿ ಒಂದು ಕೆಜಿ ಬೆಳ್ಳಿ ಬೆಲೆ 46,935 ರೂ.| ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಒಂದು ಔನ್ಸ್'ಗೆ 1,503 ಡಾಲರ್|


ನವದೆಹಲಿ(ಡಿ.27): ಹೊಸ ವರ್ಷದ ಹುಮ್ಮಸ್ಸಿನಲ್ಲಿರುವ ಆಭರಣ ಪ್ರಿಯರಿಗೆ ಚಿನ್ನದ ಬೆಲೆ ಏರಿಕೆಯ ಬಿಸಿ ಮುಟ್ಟಿದ್ದು, ನಿರಂತರ ದರ ಇಳಿಕೆಯಿಂದ ತೀವ್ರ ಚಟುವಟಿಕೆಯಿಂದ ಕೂಡಿದ್ದ ಮಾರುಕಟ್ಟೆ ಇದೀಗ ಮಂದಗತಿಯಲ್ಲಿ ಸಾಗುತ್ತಿದೆ.

ಒಟ್ಟು 2 ಸಾವಿರ ರೂ. ಇಳಿದ ಚಿನ್ನ: ಇಂದಿನ ಮಾರಾಟ ದರ..!

Latest Videos

ಮಲ್ಟಿ ಕಮೋಡಿಟಿ ಎಕ್ಸಚೇಂಜ್'ನಲ್ಲಿ ಚಿನ್ನದ ಬೆಲೆಯಲ್ಲಿ ಶೇ. 0.32ರಷ್ಟು ಏರಿಕೆಯಾಗಿದ್ದು, 10 ಗ್ರಾಂ ಚಿನ್ನದ ಬೆಲೆ ದೇಶೀಯ ಮಾರುಕಟ್ಟೆಯಲ್ಲಿ ಇದೀಗ 38,763 ರೂ. ಆಗಿದೆ.

ಶುಭಸುದ್ದಿ: ಚಿನ್ನ, ಬೆಳ್ಳಿ ಬೆಲೆಯಲ್ಲಿ ಇಳಿಕೆ!

ಮೂರು ದಿನಗಳಿಂದ ನಿರಂತರವಾಗಿ ಚಿನ್ನದ ಬೆಲೆಯಲ್ಲಿ ಏರಿಕೆಯಾಗುತ್ತಿದ್ದು, ಎರಡು ತಿಂಗಳ ಅವಧಿಯಲ್ಲಿ ಅತ್ಯಂತ ಹೆಚ್ಚಿನ ಬೆಲೆಗೆ ಮಾರಾಟವಾಗುತ್ತಿದೆ.

ಶುರುವಾಯಿತು ಇಳಿಕೆಯ ಪರ್ವ: ಬಂಗಾರದ ಬೆಲೆ ತುಂಬ ಅಪೂರ್ವ!

ಇನ್ನು ಬೆಳ್ಳಿ ಬೆಲೆಯಲ್ಲೂ ಶೇ.1ರಷ್ಟು ಏರಿಕೆ ಕಂಡುಬಂದಿದ್ದು, ದೇಶೀಯ ಮಾರುಕಟ್ಟೆಯಲ್ಲಿ ಒಂದು ಕೆಜಿ ಬೆಳ್ಳಿ ಬೆಲೆ 46,935 ರೂ. ಆಗಿದೆ.

ಚಿನ್ನದ ಬೆಲೆ ಲೆಕ್ಕ ಹಾಕೋದ್ಹೇಗೆ?

ಅದರಂತೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯಲ್ಲಿ ಶೇ.0.3ರಷ್ಟು ಏರಿಕೆಯಾಗಿದ್ದು, ಚಿನ್ನದ ಬೆಲೆ ಒಂದು ಔನ್ಸ್'ಗೆ 1,503 ಡಾಲರ್ ಆಗಿದೆ.

ಡಿಸೆಂಬರ್ 27ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

click me!