
ಬೆಂಗಳೂರು: ಕಳೆದ 8 ದಿನದಲ್ಲಿ ಚಿನ್ನದ ಬೆಲೆ ಗಣನೀಯವಾಗಿ ಇಳಿಕೆ ಕಂಡು ಬಂದಿದೆ. ಇಂದು ಸಹ ಭಾರತದಲ್ಲಿ ಚಿನ್ನದ ಬೆಲೆ ಕುಸಿತ ಕಂಡು ಬಂದಿದೆ. ಗೂಡ್ಸ್ ರಿಟರ್ನ್ ವರದಿ ಪ್ರಕಾರ, 24 ಕ್ಯಾರಟ್ 100 ಗ್ರಾಂ ಚಿನ್ನದಲ್ಲಿ 34,900 ರೂಪಾಯಿ ಇಳಿಕೆಯಾಗಿದೆ. ಭವಿಷ್ಯದಲ್ಲಿಯೂ ಚಿನ್ನ ಮತ್ತು ಬೆಳ್ಳಿ ದರಗಳು ಕಡಿಮೆಯಾಗುವ ಸಾಧ್ಯತೆಗಳಿವೆ ಎಂದು ಮಾರುಕಟ್ಟೆ ತಜ್ಞರು ವಿಶ್ಲೇಷಣೆ ಮಾಡುತ್ತಿದ್ದಾರೆ. ಲೈವ್ ಮಿಂಟ್ ಪ್ರಕಾರ ಭಾರತದಲ್ಲಿಂದು ಚಿನ್ನದ ಬೆಲೆ ಎಷ್ಟಿದೆ ಎಂದು ನೋಡೋಣ ಬನ್ನಿ.
ಭಾರತದಲ್ಲಿಂದು 22 ಕ್ಯಾರಟ್ ಚಿನ್ನದ ಬೆಲೆ
ಭಾರತದಲ್ಲಿಂದು 24 ಕ್ಯಾರಟ್ ಚಿನ್ನದ ಬೆಲೆ
ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ
22 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆ ಹೀಗಿದೆ. ಬೆಂಗಳೂರು: 89,155 ರೂಪಾಯಿ, ಚೆನ್ನೈ: 89,161 ರೂಪಾಯಿ, ದೆಹಲಿ: 89,313 ರೂಪಾಯಿ, ಕೋಲ್ಕತ್ತಾ: 89,165 ರೂಪಾಯಿ, ಮುಂಬೈ: 89,167 ರೂಪಾಯಿ ಮತ್ತು ಪುಣೆ: 89,173 ರೂಪಾಯಿ
ಇಂದಿನ ಬೆಳ್ಳಿ ಬೆಲೆ
ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ, ಇಳಿಕೆಯಾದಂತೆಯೂ ಚಿನ್ನ ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ.
ಇಂದು ಹೂಡಿಕೆದಾರರು ಚಿನ್ನದ ಜೊತೆ ಬೆಳ್ಳಿ ಮೇಲೆಯೂ ಅಧಿಕವಾಗಿ ಹೂಡಿಕೆ ಮಾಡುತ್ತಿದ್ದಾರೆ. ಈ ಹಿನ್ನೆಲೆ ಬೆಳ್ಳಿ ಬೆಲೆಯೂ 1 ಲಕ್ಷ ರೂ. ಗಡಿ ದಾಟಿದೆ. ಇಂದಿನ ಬೆಲೆ ಹೀಗಿದೆ.
ಒಮ್ಮೆ ಚಿನ್ನ ನೀವು ಖರೀದಿಸಿದ್ದೀರಿ ಎಂದಾದರೆ ಅದು ಒಂದು ರೀತಿಯ ಹೂಡಿಕೆಯಂತೆಯೇ. ಅನೇಕರು ಮದುವೆ ಮುಂಜಿಗಳಿಗೆ ಮಾತ್ರವಲ್ಲದೇ ಕಷ್ಟಕಾಲಕ್ಕೆ ನೆರವಿಗೆ ಬರಬಹುದು ಎಂಬ ಕಾರಣಕ್ಕೂ ಚಿನ್ನ ಖರೀದಿಸುತ್ತಾರೆ. ಆಭರಣದ ಬದಲು ಚಿನ್ನದ ಬಿಸ್ಕೆಟ್, ಚಿನ್ನದ ಬಾಂಡ್ ಖರೀದಿಸಿದರೆ ಅದು ಒಂದು ರೀತಿಯ ಹೂಡಿಕೆಯಂತೆಯೇ ಇದು ಎಂದಿಗೂ ಸೆಕೆಂಡ್ ಹ್ಯಾಂಡ್ ಆಗುವುದಿಲ್ಲ. ಇದನ್ನು ನೀವು ಆ ದಿನದ ಚಿನ್ನದ ದರ ಹೇಗಿದೆ ಎಂಬುದರ ಮೇಲೆ ಬಹು ವರ್ಷಗಳ ನಂತರವೂ ಉತ್ತಮ ದರವನ್ನು ಪಡೆಯಬಹುದು. ಹೀಗಾಗಿಯೇ ಚಿನ್ನ ಹೂಡಿಕೆದಾರರ ಅಚ್ಚುಮೆಚ್ಚಿನ ಹೂಡಿಕೆಯ ವಿಷಯವಾಗಿದೆ. ಅಲ್ಲದೇ ಷೇರು ಮಾರುಕಟ್ಟೆಯ ಹೂಡಿಕೆದಾರರು ಮಾತ್ರವಲ್ಲದೇ ಜನ ಸಾಮಾನ್ಯರು ಕೂಡ ಚಿನ್ನದ ದರದ ಮೇಲೆ ಒಂದು ಕಣ್ಣಿಟ್ಟಿರುತ್ತಾರೆ.
ಇದನ್ನೂ ಓದಿ: 200 ಟನ್ ಚಿನ್ನ, 2.5 ಲಕ್ಷ ಕೋಟಿ ಮೌಲ್ಯದ ಖಜಾನೆ: ಸಿಕ್ತು 300 ವರ್ಷ ಹಿಂದೆ ಮುಳುಗಿದ ಹಡಗು
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.