ಒಟ್ಟು 2,300 ರೂ. ಕುಸಿದ ಚಿನ್ನದ ದರ: ಚಿನ್ನದಷ್ಟೇ ಚೆಂದ ವಹಿವಾಟು!

By Web Desk  |  First Published Nov 12, 2019, 1:32 PM IST

ಮಾರುಕಟ್ಟೆಯಲ್ಲಿ ಹಾವು-ಏಣಿ ಆಟ ಆಡುತ್ತಿರುವ ಚಿನ್ನದ ದರ| ಆಭರಣ ಪ್ರಿಯರಲ್ಲಿ ಸಂತಸ ಮೂಡಿಸಿದ ಚಿನ್ನದ ದರ ಕುಸಿತ| ಮಲ್ಟಿ ಕಮೋಡಿಟಿ ಎಕ್ಸಚೇಂಜ್’ನಲ್ಲಿ ಚಿನ್ನದ ಬೆಲೆ ಶೇ.0.04ರಷ್ಟು ಇಳಿಕೆ| ದೇಶೀಯ ಮಾರುಕಟ್ಟೆಯಲ್ಲಿ 10 ಗ್ರಾಂ ಚಿನ್ನದ ಬೆಲೆ 37,671 ರೂ.| ದೇಶೀಯ ಮಾರುಕಟ್ಟೆಯಲ್ಲಿ ಬೆಳ್ಳಿ ಬೆಲೆಯಲ್ಲಿ ಶೇ.0.30ರಷ್ಟು ಏರಿಕೆ| ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ಒಂದು ಔನ್ಸ್’ಗೆ 1,512.54 ಡಾಲರ್| 


ನವದೆಹಲಿ(ನ.12): ನವೆಂಬರ್ ಆರಂಭದಿಂದಲೇ ಕುಸಿತದ ಹಾದಿ ಹಿಡಿದಿರುವ ಚಿನ್ನ, ಬೆಳ್ಳಿ ದರ ದೇಶೀಯ ಮಾರುಕಟ್ಟೆಯಲ್ಲಿ ಇಂದೂ ಕೂಡ ಕೊಂಚ ಇಳಿಕೆ ಕಂಡಿದೆ. ಈ ಮೂಲಕ ಆಭರಣ ಪ್ರಿಯರಲ್ಲಿ ಸಂತಸ ಮೂಡಿಸಿದೆ.

ಕುಸಿದ ಚಿನ್ನದ ದರ: ನವೆಂಬರ್‌ ಆಗಲಿದೆಯೇ ಶುಭ ಸುದ್ದಿಗಳ ಆಗರ?

Tap to resize

Latest Videos

undefined

ಮಲ್ಟಿ ಕಮೋಡಿಟಿ ಎಕ್ಸಚೇಂಜ್’ನಲ್ಲಿ ಚಿನ್ನದ ಬೆಲೆ ಶೇ.0.04ರಷ್ಟು ಇಳಿಕೆಯಾಗಿದ್ದು, 10 ಗ್ರಾಂ ಚಿನ್ನದ ಬೆಲೆ 37,671 ರೂ. ಆಗಿದೆ. ಸೆಪ್ಟೆಂಬರ್ ಆರಂಭದಲ್ಲಿ ಇದ್ದ ಚಿನ್ನದ ದರಕ್ಕಿಂತ ಬರೋಬ್ಬರಿ 2,300 ರೂ.ಇಳಿಕೆ ಕಂಡಿದೆ.

ಚಿನ್ನದ ದರದಲ್ಲಿ ಕುಸಿತ: ದೀಪಾವಳಿ ಖರೀದಿಗೆ ಇರಲಿ ಧಾವಂತ!

ಆದರೆ ಬೆಳ್ಳಿ ಬೆಲೆಯಲ್ಲಿ ಏರಿಕೆ ಕಂಡುಬಂದಿದ್ದು, ಮಲ್ಟಿ ಕಮೋಡಿಟಿ ಎಕ್ಸಚೇಂಜ್’ನಲ್ಲಿ ಶೇ.0.30ರಷ್ಟು ದರದಲ್ಲಿ ಏರಿಕೆಯಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಒಂದು ಕೆಜಿ ಬೆಳ್ಳಿ ಬೆಲೆ 44,000 ರೂ. ಆಗಿದೆ.

ನಿರಂತರವಾಗಿ ಇಳಿಯುತ್ತಲೇ ಇದೆ ಚಿನ್ನ: ಅಳೆದು ತೂಗಿ ಕೊಂಡರೆ ಚೆನ್ನ!

ಇನ್ನುಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿದ್ದು, ಶೇ.0.32 ರಷ್ಟು ಇಳಿಕೆಯಾಗಿದೆ. ಚಿನ್ನದ ದರ ಒಂದು ಔನ್ಸ್’ಗೆ 1,512.54  ಡಾಲರ್ ಆಗಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲದಲಿ ಚಿನ್ನದ ಬೆಲೆಯಲ್ಲೂ ಇಳಿಕೆಯಾಗಿದ್ದು, ಶೇ.0.24ರಷ್ಟು ಇಳಿಕೆ ಕಂಡಿದೆ. ಒಂದು ಔನ್ಸ್ ಚಿನ್ನದ ಬೆಲೆ 1,455.55 ಡಾಲರ್ ಆಗಿದೆ.

ಚಿನ್ನದ ಬೆಲೆಯಲ್ಲಿನ ನಿರಂತರ ಇಳಿಕೆಯಿಂದ ದೇಶೀಯ ಮಾರುಕಟ್ಟೆಯಲ್ಲಿ ವಹಿವಾಟು ಹೆಚ್ಚಿದ್ದು, ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಮತ್ತಷ್ಟು ಇಳಿಕೆ ಕಾಣುವ ಸಂಭವವಿದೆ ಎನ್ನಲಾಗಿದೆ.

ನವೆಂಬರ್ 12ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

click me!