ಚಿನ್ನದ ದರದಲ್ಲಿ ಮತ್ತೆ ಭಾರೀ ಇಳಿಕೆ: ಹೀಗಿದೆ ಇಂದಿನ ದರ!

Published : Aug 29, 2020, 09:41 AM ISTUpdated : Aug 31, 2020, 11:29 AM IST
ಚಿನ್ನದ ದರದಲ್ಲಿ ಮತ್ತೆ ಭಾರೀ ಇಳಿಕೆ: ಹೀಗಿದೆ ಇಂದಿನ ದರ!

ಸಾರಾಂಶ

ಚಿನ್ನದ ದರದದಲ್ಲಿ ಭಾರೀ ಇಳಿಕೆ| ಕೊರೋನಾತಂಕದಿಂದ ಹೆಚ್ಚುತ್ತಿದ್ದ ಚಿನ್ನದ ದರ| ಮತ್ತೆ ದರ ಏರಿಕೆ ಭೀತಿ

ಬೆಂಗಳೂರು(ಆ.29): ಕೊರೋನಾ ಎಂಬ ಮಹಾಮಾರಿ ಎಲ್ಲರ ಬದುಕನ್ನು ಅಸ್ತ ವ್ಯಸ್ತಗೊಳಿಸಿದೆ. ಅಗತ್ಯಕ್ಕಷ್ಟೇ ಹೊರ ಹೋಗಿ, ಮನೆಯೊಳಗೇ ಇರುವಂತೆ ಈ ಮಹಾಮಾರಿ ಮಾಡಿದೆ. ಅನೇಕ ಚಟುವಟಕೆಗಳು ಸ್ಥಗಿತಗೊಂಡು ಭಾರೀ ಆರ್ಥಿಕ ನಷ್ಟವೂ ಸಂಭವಿಸಿದೆ. ಈ ನಡುವೆ ಚಿನ್ನದ ದರ ಏರಿಕೆಯಾಗಿದ್ದು ಚಿನ್ನ ಪ್ರಿಯರಿಗೂ ಭಾರೀ ನಿರಾಸೆಯುಂಟು ಮಾಡಿತ್ತು. ಆದರೀಗ 53 ಸಾವಿರ ಗಡಿ ದಾಟಿ ದಾಖಲೆ ಬರೆದಿದ್ದ ಚಿನ್ನದ ದರ ನಿಧಾನವಾಗಿ ಇಳಿಕೆಯಾಗುತ್ತಿದೆ.  

ಗುರುವಾರ ಹೊರತುಪಡಿಸಿ ಕಳೆದ ಆರು ದಿನಗಳಿಂದ ಚಿನ್ನದ ದರ ಇಳಿಕೆ ಕಂಡಿದೆ. ಶುಕ್ರವಾರ 22 ಕ್ಯಾರೆಟ್, 10 ಗ್ರಾಂ ಚಿನ್ನದ ದರ 530 ರೂಪಾಯಿ ಇಳಿಕೆಯಾಗಿ  48,520 ರೂಪಾಯಿ ಬೆಲೆ ನಿಗದಿಯಾಗಿದೆ. ಅತ್ತ 24 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರದಲ್ಲಿ  1110 ರೂಪಾಯಿ ಇಳಿಕೆಯಾಗಿ, 52,390 ರೂಪಾಯಿ ಆಗಿದೆ. 

ಮೈಸೂರು ಪಾಲಿಕೆ ಅಧಿಕಾರಿ ಮನೆಯಲ್ಲಿ 1.3 ಕೆ.ಜಿ. ಚಿನ್ನ ಪತ್ತೆ!

ಒಟ್ಟಾರೆಯಾಗಿ ಕಳೆದ ಆರು ದಿನಗಳಲ್ಲಿ ಚಿನ್ನದ ಬೆಲೆ 10 ಗ್ರಾಂಗೆ 2,100 ರೂಪಾಯಿ ಇಳಿಕೆಯಾಗಿದ್ದುಮ ಒಂದೇ ತಿಂಗಳಲ್ಲಿ ಚಿನ್ನದ ಬೆಲೆ  5000 ರೂ. ಇಳಿಕೆ ಕಂಡಿದೆ.

ಚಿನ್ನದ ದರ ಹೆಚ್ಚಿದರೂ ಆಭರಣ ಉದ್ದಿಮೆ ನಷ್ಟದಲ್ಲಿ!

ಸಾಮಾನ್ಯವಾಗಿ ಚಿನ್ನದ ದರ ಏರಿದಾಗಲೆಲ್ಲ ಖುಷಿಪಡುತ್ತಿದ್ದ ಚಿನ್ನಾಭರಣ ವ್ಯಾಪಾರಿಗಳು ಕೆಲ ತಿಂಗಳಿನಿಂದ ಚಿನ್ನದ ಬೆಲೆ ಗಗನಕ್ಕೇರುತ್ತಿದ್ದರೂ ಆತಂಕದಲ್ಲಿ ದಿನ ಕಳೆಯುವಂತಾಗಿದೆ. ಕಾರಣ, ಲಾಕ್‌ಡೌನ್‌ ಹಾಗೂ ಆರ್ಥಿಕ ಹಿಂಜರಿಕೆಯಿಂದಾಗಿ ಚಿನ್ನಕ್ಕೆ ಬೇಡಿಕೆ ದೊಡ್ಡ ಪ್ರಮಾಣದಲ್ಲಿ ತಗ್ಗಿದೆ.

ದೇಶದ ಅತ್ಯಂತ ಪ್ರತಿಷ್ಠಿತ ಚಿನ್ನಾಭರಣ ಮಾರುಕಟ್ಟೆಯಾದ ಮುಂಬೈನ ಜವೇರಿ ಬಜಾರ್‌ನಲ್ಲಿ ಇನ್ನೂ ಅನೇಕ ಚಿನ್ನಾಭರಣ ಅಂಗಡಿಗಳು ಲಾಕ್‌ಡೌನ್‌ ನಂತರ ತೆರೆದೇ ಇಲ್ಲ. ಚಿನ್ನಾಭರಣ ತಯಾರಿಸುವ ಕುಶಲಕರ್ಮಿಗಳು ಕೂಡ ಹಳ್ಳಿಗಳಿಗೆ ವಲಸೆ ಹೋಗಿದ್ದಾರೆ. ತೆರೆದಿರುವ ಅಂಗಡಿಗಳಿಗೂ ಗ್ರಾಹಕರು ಬಹಳ ಕಡಿಮೆ ಸಂಖ್ಯೆಯಲ್ಲಿ ಬರುತ್ತಿದ್ದಾರೆ. ಕಳೆದ 40-50 ವರ್ಷಗಳಿಂದ ಇಷ್ಟುನೀರಸ ಹಾಗೂ ನಷ್ಟದ ವ್ಯಾಪಾರವನ್ನು ನಾವು ನೋಡಿಲ್ಲ ಎಂದು ಚಿನ್ನಾಭರಣ ವ್ಯಾಪಾರಿಗಳು ಹೇಳುತ್ತಿದ್ದಾರೆ.

ಚಿನ್ನ ಬೆಳ್ಳಿ ಬೆಲೆಯಲ್ಲಿ ಭಾರೀ ಇಳಿಕೆ: ಬಂಗಾರ ಪ್ರಿಯರಲ್ಲಿ ಮುಗುಳ್ನಗೆ!

ಲಾಕ್‌ಡೌನ್‌ನಿಂದಾಗಿ ಅನೇಕರು ಆರ್ಥಿಕ ನಷ್ಟಅನುಭವಿಸಿ ತಮ್ಮಲ್ಲಿರುವ ಚಿನ್ನವನ್ನೇ ಅಡ ಇಡುತ್ತಿದ್ದಾರೆ. ಇನ್ನು ಅನೇಕರು ಚಿನ್ನದ ಬೆಲೆ ದುಬಾರಿಯಾಗಿರುವುದರಿಂದ ಮತ್ತು ಕೈಯಲ್ಲಿ ಸಾಕಷ್ಟುಹಣವಿಲ್ಲದೆ ಇರುವುದರಿಂದ ಮದುವೆ ಮತ್ತು ಶುಭ ಸಮಾರಂಭಗಳಿಗೆ ಚಿನ್ನ ಕೊಳ್ಳುವುದನ್ನು ಕಡಿಮೆ ಮಾಡುತ್ತಿದ್ದಾರೆ. ಇದೇ ವೇಳೆ, ಕೊರೋನಾ ವೈರಸ್‌ ಭೀತಿಯಿಂದ ಜನರು ಚಿನ್ನಾಭರಣ ಮಳಿಗೆಗಳಿಗೆ ಬರುವುದು ಕೂಡ ಕಡಿಮೆಯಾಗುತ್ತಿದೆ. ಚಿನ್ನದ ಮೇಲೆ ಹೂಡಿಕೆ ಮಾಡುವ ಹೊಸ ತಲೆಮಾರಿನವರು ಹೆಚ್ಚಾಗಿ ಭೌತಿಕ ಚಿನ್ನ ಕೊಳ್ಳದೆ ಡಿಜಿಟಲ್‌ ಚಿನ್ನ ಕೊಳ್ಳುತ್ತಿದ್ದಾರೆ. ಇವೆಲ್ಲಾ ಕಾರಣಗಳಿಂದಾಗಿ ಚಿನ್ನಕ್ಕೆ ಬೇಡಿಕೆಯಿಲ್ಲದಂತಾಗಿದೆ.

ಮತ್ತೆ ಏರಿಕೆಯಾಗಲಿದೆ ಚಿನ್ನದ ಬೆಲೆ

ಶೀಘ್ರವೇ ಆಭರಣ ಚಿನ್ನದ ಬೆಲೆ 55 ಸಾವಿರ ರೂಪಾಯಿ ಆಗಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿರುವುದ್ದಾರೆ. ಕೊರೋನಾ ಸೋಂಕು ಹರಡುವಿಕೆ ಹೆಚ್ಚುತ್ತಲೇ ಇದೆ. ಇದರಿಂದ ಆರ್ಥಿಕತೆ ಮೇಲೆ ಭಾರೀ ಹೊಡೆತ ಉಂಟಾಗಿದೆ. ಹೀಗಾಗಿ ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ ಕಾಣಲಿದೆ ಎನ್ನುವುದು ತಜ್ಞರ ಅಭಿಪ್ರಾಯ. ಹೀಗಾಗಿ, ಚಿನ್ನ ಖರೀದಿ ಮಾಡಬೇಕು ಎನ್ನುವ ಆಲೋಚನೆಯಲ್ಲಿದ್ದವರು ಚಿಂತಾಕ್ರಾಂತರಾಗಿದ್ದಾರೆ. ಚಿನ್ನ ಖರೀದೀ ಮಾಡಬೇಕೋ ಅಥವಾ ಬೇಡವೋ ಎನ್ನುವ ಗೊಂದಲದಲ್ಲಿದ್ದಾರೆ.

"

PREV

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

click me!

Recommended Stories

Business Idea: ಕಡಿಮೆ ಬಂಡವಾಳ, ಅಧಿಕ ಆದಾಯ.. ಎಂದಿಗೂ ಲಾಸ್‌ ಆಗದ ವ್ಯವಹಾರಗಳಿವು!
Whatsapp ಮೂಲಕವೂ ಗ್ಯಾಸ್​ ಸಿಲಿಂಡರ್​ ಬುಕಿಂಗ್​ಗೆ ಅವಕಾಶ: ಸಂಪೂರ್ಣ ಡಿಟೇಲ್ಸ್​ ಇಲ್ಲಿದೆ