ಚಿನ್ನ, ಬೆಳ್ಳಿ ಕೊಳ್ಳೋರಿಗೆ ಸ್ವಲ್ಪ ಖುಷಿ, ಬೆಲೆ ಕೊಂಚ ಇಳಿಕೆ: ಇಲ್ಲಿದೆ ಅ.05ರ ರೇಟ್!

By Suvarna NewsFirst Published Oct 5, 2020, 4:23 PM IST
Highlights

ಚಿನ್ನದ ದರದಲ್ಲಿ ಕೊಂಚ ಇಳಿಕೆ| ಹಾವು ಏಣಿ ಆಟವಾಡುತ್ತಿದ್ದ ಬಂಗಾರ ದರ ಇಳಿಕೆಯಿಂದ ಗ್ರಾಹಕರಿಗೆ ಕೊಂಚ ಸಮಾಧಾನ| ಇಲ್ಲಿದೆ ನೋಡಿ ಅಕ್ಟೋಬರ್ 04ರ ದರ

ಬೆಂಗಳೂರು(ಅ.04): ಕೊರೋನಾತಂಕ ನಡುವೆ ಚಿನ್ನದ ಬೆಲೆ ಖರೀದಿದಾರರಿಗೆ ತಲೆನೋವು ಕೊಟ್ಟಿದೆ. ಬೇಡಿಕೆ ಕಡಿಮೆ ಇದ್ದರೂ ಉದ್ಯಮಗಳು ನೆಲ ಕಚ್ಚಿದ ಪರಿಣಾಮ ಅನೇಕ ಮಂದಿ ಹಳದಿ ಲೋಹದಲ್ಲಿ ಹೂಡಿಕೆ ಮಾಡಿದ್ದರು. ಇದರ ಪರಿಣಾಮವೆಂಬಂತೆ ಬಂಗಾರ ದರ ಮಹಾಮಾರಿ ನಡುವೆಯೂ ಸಾರ್ವಕಾಲಿಕ ದಾಖಲೆ ಸೃಷ್ಟಿಸಿತ್ತು. ಸದ್ಯ ಚಿನ್ನದ ಬೆಲೆಯಲ್ಲಿ ಏರಿಳಿತವಾಗತೊಡಗಿದ್ದು, ಗ್ರಾಹಕರೂ ಖರೀದಿಸಬೇಕಾ? ಬೇಡವಾ? ಎಂಬ ಗೊಂದಲದಲ್ಲಿದ್ದಾರೆ.

ಬಂಗಾರ ಪ್ರಿಯರಿಗೆ ಮತ್ತೆ ನಿರಾಸೆ: ಚಿನ್ನ, ಬೆಳ್ಳಿ ದರವೇನು ಅನ್ನೋರಿಗೆ ಇಲ್ಲಿದೆ ಉತ್ತರ!

ಇಂದು ಭಾನುವಾರ ಚಿನ್ನ ಹಾಗೂ ಬೆಳ್ಳಿ ಎರಡರ ಬೆಲೆಡಯೂ ಕುಸಿತಗೊಂಡಿದೆ. ಬೆಂಗಳೂರಿನಲ್ಲಿ 10 ಗ್ರಾಂಗೆ 22 ಕ್ಯಾರೆಟ್ ಚಿನ್ನದ ದರದಲ್ಲಿ 340 ರೂಪಾಯಿ ಇಳಿಕೆಯಾಗಿದೆ. ಈ ಮೂಲಕ ಬೆಲೆ 47,420 ರೂಪಾಯಿ ಆಗಿದೆ. ಇನ್ನು, 24 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ 370 ರೂಪಾಯಿ ಏರಿಕೆ ಕಂಡಿದ್ದು, 51,730 ರೂಪಾಯಿ ಆಗಿದೆ. 

ಇನ್ನು ಇತ್ತ ಬೆಳ್ಳಿ ದರವೂ ಕೊಂಚ ಇಳಿಕೆಯಾಗಿದೆ. ಒಂದು ಕೆ. ಜಿ ಬೆಳ್ಳಿಯ ಬೆಲೆ 510ರೂ ಕುಸಿತಗೊಂಡು 60,700 ರೂ ಆಗಿದೆ.

ಇನ್ನೂ ಏರಿಕೆಯಾಗಲಿದೆ ಚಿನ್ನದ ಬೆಲೆ

ಶೀಘ್ರವೇ ಆಭರಣ ಚಿನ್ನದ ಬೆಲೆ 55 ಸಾವಿರ ರೂಪಾಯಿ ಆಗಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿರುವುದ್ದಾರೆ. ಕೊರೋನಾ ಸೋಂಕು ಹರಡುವಿಕೆ ಹೆಚ್ಚುತ್ತಲೇ ಇದೆ. ಇದರಿಂದ ಆರ್ಥಿಕತೆ ಮೇಲೆ ಭಾರೀ ಹೊಡೆತ ಉಂಟಾಗಿದೆ. ಹೀಗಾಗಿ ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ ಕಾಣಲಿದೆ ಎನ್ನುವುದು ತಜ್ಞರ ಅಭಿಪ್ರಾಯ. ಹೀಗಾಗಿ, ಚಿನ್ನ ಖರೀದಿ ಮಾಡಬೇಕು ಎನ್ನುವ ಆಲೋಚನೆಯಲ್ಲಿದ್ದವರು ಚಿಂತಾಕ್ರಾಂತರಾಗಿದ್ದಾರೆ. ಚಿನ್ನ ಖರೀದೀ ಮಾಡಬೇಕೋ ಅಥವಾ ಬೇಡವೋ ಎನ್ನುವ ಗೊಂದಲದಲ್ಲಿದ್ದಾರೆ.

click me!