ಎರಡು ದಿನ ಇಳಿಕೆ ಕಂಡಿದ್ದ ಚಿನ್ನದ ಬೆಲೆ, ಇವತ್ತಿನ ಕತೆ ಏನು? ಇಲ್ಲಿದೆ ಸೆ. 13ರ ದರ!

By Suvarna NewsFirst Published Sep 13, 2020, 4:08 PM IST
Highlights

ಸತತ ಎರಡು ದಿನ ಇಳಿಕೆ ಕಂಡಿದ್ದ ಚಿನ್ನದ ದರ| ಬಂಗಾರ ಪ್ರಿಯರನ್ನು ಸಂತಸ ಪಡಿಸಿದ್ದ ಚಿನ್ನದ ಬೆಲೆ| ಮತ್ತೆ ಏರಿಳಿತ ಆಟವಾಡುತ್ತಿದೆ ಚಿನ್ನ| ಇಲ್ಲಿದೆ ನೋಡಿ ಸೆ. 13ರ ಚಿನ್ನದ ದರ

ಬೆಂಗಳೂರು(ಸ.13): ಕೊರೋನಾತಂಕದ ನಡುವೆ ಚಿನ್ನದ ದರ ಏರಿಕೆ, ಇಳಿಕೆಯಾಟ ಆಡುತ್ತಿದ್ದು, ಇದು ಬಂಗಾರ ಪ್ರಿಯರ ತಲೆನೋವಿಗೆ ಕಾರಣವಾಗಿದೆ. ಸತತ ಎರಡು ದಿನ ಇಳಿಕೆ ಕಂಡಿದ್ದ ಚಿನ್ನದ ದರ ಮತ್ತೆ ಕೊಂಚ ಏರಿಕೆ ಕಂಡಿದ್ದು, ಗ್ರಾಹಕರು ಖರೀದಿಸುವುದೋ ಬೇಡವೋ ಎಂಬ ಗೊಂದಲದಲ್ಲಿದ್ದಾರೆ. ಅಷ್ಟಕ್ಕು ಇಂದಿನ ಚಿನ್ನದ ದರ ಏನಂತೀರಾ? ಇಲಲಿದೆ ನೋಡಿ.

ಬೆಂಗಳೂರಿನಲ್ಲಿ 10 ಗ್ರಾಂಗೆ 22 ಕ್ಯಾರೆಟ್ ಚಿನ್ನದ ದರದಲ್ಲಿ 10 ರೂಪಾಯಿ ಏರಿಕೆಯಾಗಿದೆ. ಈ ಮೂಲಕ ಬೆಲೆ 48,410 ರೂಪಾಯಿ ಆಗಿದೆ. ಇನ್ನು, 24 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ  10 ರೂಪಾಯಿ ಏರಿಕೆ ಕಂಡಿದ್ದು, 52,810 ರೂಪಾಯಿ ಆಗಿದೆ. 

ಇನ್ನು ಇಳಿಕೆಯ ಹಾದಿಯಲ್ಲಿದ್ದ ಬೆಳ್ಳಿ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ.  ಒಂದು ಕೆಜಿ ಬೆಳ್ಳಿ ಬೆಲೆ 67,900 ರೂ ಆಗಿದೆ.

ಇನ್ನೂ ಏರಿಕೆಯಾಗಲಿದೆ ಚಿನ್ನದ ಬೆಲೆ

ಶೀಘ್ರವೇ ಆಭರಣ ಚಿನ್ನದ ಬೆಲೆ 55 ಸಾವಿರ ರೂಪಾಯಿ ಆಗಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿರುವುದ್ದಾರೆ. ಕೊರೋನಾ ಸೋಂಕು ಹರಡುವಿಕೆ ಹೆಚ್ಚುತ್ತಲೇ ಇದೆ. ಇದರಿಂದ ಆರ್ಥಿಕತೆ ಮೇಲೆ ಭಾರೀ ಹೊಡೆತ ಉಂಟಾಗಿದೆ. ಹೀಗಾಗಿ ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ ಕಾಣಲಿದೆ ಎನ್ನುವುದು ತಜ್ಞರ ಅಭಿಪ್ರಾಯ. ಹೀಗಾಗಿ, ಚಿನ್ನ ಖರೀದಿ ಮಾಡಬೇಕು ಎನ್ನುವ ಆಲೋಚನೆಯಲ್ಲಿದ್ದವರು ಚಿಂತಾಕ್ರಾಂತರಾಗಿದ್ದಾರೆ. ಚಿನ್ನ ಖರೀದೀ ಮಾಡಬೇಕೋ ಅಥವಾ ಬೇಡವೋ ಎನ್ನುವ ಗೊಂದಲದಲ್ಲಿದ್ದಾರೆ.
 

click me!