
ಬೆಂಗಳೂರು(ಸೆ.14): ಕೊರೋನಾತಂಕ ನಡುವೆ ಭಾರೀ ಬದಲಾವಣೆ ಕಂಡಿದ್ದು ಚಿನ್ನದ ದರ. ಬೇಡಿಕೆ ಕಡಿಮೆ ಇದ್ದರೂ ಉದ್ಯಮಗಳು ನೆಲ ಕಚ್ಚಿದ ಪರಿಣಾಮ ಅನೇಕ ಮಂದಿ ಹಳದಿ ತಾಮ್ರದಲ್ಲಿ ಹೂಡಿಕೆ ಮಾಡಿದ್ದರು. ಇದರ ಪರಿಣಾಮವೆಂಬಂತೆ ಬಂಗಾರ ದರ ಮಹಾಮಾರಿ ನಡುವೆಯೂ ಸಾರ್ವಕಾಲಿಕ ದಾಖಲೆ ಸೃಷ್ಟಿಸಿತ್ತು. ಸದ್ಯ ಚಿನ್ನದ ಬೆಲೆಯಲ್ಲಿ ಏರಿಳಿತವಾಗತೊಡಗಿದ್ದು, ಗ್ರಾಹಕರೂ ಖರೀದಿಸಬೇಕಾ? ಬೇಡವಾ? ಎಂಬ ಗೊಂದಲದಲ್ಲಿದ್ದಾರೆ.
ಇಂದು ಸೋಮವಾರ ಬೆಂಗಳೂರಿನಲ್ಲಿ 10 ಗ್ರಾಂಗೆ 22 ಕ್ಯಾರೆಟ್ ಚಿನ್ನದ ದರದಲ್ಲಿ 90 ರೂಪಾಯಿ ಏರಿಕೆಯಾಗಿದೆ. ಈ ಮೂಲಕ ಬೆಲೆ 48,500 ರೂಪಾಯಿ ಆಗಿದೆ. ಇನ್ನು, 24 ಕ್ಯಾರೆಟ್ನ 10 ಗ್ರಾಂ ಚಿನ್ನದ ದರ 90 ರೂಪಾಯಿ ಏರಿಕೆ ಕಂಡಿದ್ದು, 52,900 ರೂಪಾಯಿ ಆಗಿದೆ.
ಇನ್ನು ಇತ್ತ ಇಳಿಕೆಯ ಹಾದಿಯಲ್ಲಿದ್ದ ಬೆಳ್ಳಿ ದರವೂ ಸದ್ಯ ಏರಿಕೆಯಾಗಿದೆ. ಒಂದು ಕೆ. ಜಿ ಬೆಳ್ಳಿಯ ಬೆಲೆ 400 ರೂ. ಏರಿಕೆಯಾಗಿವ ಮೂಲಕ 68,300 ರೂ ಆಗಿದೆ.
ಇನ್ನೂ ಏರಿಕೆಯಾಗಲಿದೆ ಚಿನ್ನದ ಬೆಲೆ
ಶೀಘ್ರವೇ ಆಭರಣ ಚಿನ್ನದ ಬೆಲೆ 55 ಸಾವಿರ ರೂಪಾಯಿ ಆಗಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿರುವುದ್ದಾರೆ. ಕೊರೋನಾ ಸೋಂಕು ಹರಡುವಿಕೆ ಹೆಚ್ಚುತ್ತಲೇ ಇದೆ. ಇದರಿಂದ ಆರ್ಥಿಕತೆ ಮೇಲೆ ಭಾರೀ ಹೊಡೆತ ಉಂಟಾಗಿದೆ. ಹೀಗಾಗಿ ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ ಕಾಣಲಿದೆ ಎನ್ನುವುದು ತಜ್ಞರ ಅಭಿಪ್ರಾಯ. ಹೀಗಾಗಿ, ಚಿನ್ನ ಖರೀದಿ ಮಾಡಬೇಕು ಎನ್ನುವ ಆಲೋಚನೆಯಲ್ಲಿದ್ದವರು ಚಿಂತಾಕ್ರಾಂತರಾಗಿದ್ದಾರೆ. ಚಿನ್ನ ಖರೀದೀ ಮಾಡಬೇಕೋ ಅಥವಾ ಬೇಡವೋ ಎನ್ನುವ ಗೊಂದಲದಲ್ಲಿದ್ದಾರೆ.
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.