ಮತ್ತೆ ಏಣಿ ಏರಿದ ಚಿನ್ನ, ನಿಂತಲ್ಲೇ ನಿಂತ ಬೆಳ್ಳಿ: ಇಲ್ಲಿದೆ ಅ. 18ರ ಗೋಲ್ಡ್ ರೇಟ್

By Suvarna NewsFirst Published Oct 18, 2020, 5:33 PM IST
Highlights

ಸತತ ಎರಡು ದಿನ ಇಳಿಕೆ ಕಂಡಿದ್ದ ಚಿನ್ನದ ದರ| ಹಾವು ಏಣಿ ಆಟವಾಡುತ್ತಿದ್ದ ಬಂಗಾರ ದರ ಮತ್ತೆ ಏರಿಕೆ| ಇಲ್ಲಿದೆ ನೋಡಿ ಅಕ್ಟೋಬರ್ 18ರ ದರ

ಬೆಂಗಳೂರು(ಅ.18): ಕೊರೋನಾತಂಕ ನಡುವೆ ಚಿನ್ನದ ಬೇಡಿಕೆ ಕಡಿಮೆ ಇದ್ದರೂ ಉದ್ಯಮಗಳು ನೆಲ ಕಚ್ಚಿದ ಪರಿಣಾಮ ಅನೇಕ ಮಂದಿ ಹಳದಿ ಲೋಹದಲ್ಲಿ ಹೂಡಿಕೆ ಮಾಡಿದ್ದರು. ಇದರ ಪರಿಣಾಮವೆಂಬಂತೆ ಬಂಗಾರ ದರ ಮಹಾಮಾರಿ ನಡುವೆಯೂ ಸಾರ್ವಕಾಲಿಕ ದಾಖಲೆ ಸೃಷ್ಟಿಸಿತ್ತು. ಸದ್ಯ ಚಿನ್ನದ ಬೆಲೆಯಲ್ಲಿ ಏರಿಳಿತವಾಗತೊಡಗಿದ್ದು, ಗ್ರಾಹಕರೂ ಖರೀದಿಸಬೇಕಾ? ಬೇಡವಾ? ಎಂಬ ಗೊಂದಲದಲ್ಲಿದ್ದಾರೆ.

ಇಂದು ಭಾನುವಾರ ಬೆಂಗಳೂರಿನಲ್ಲಿ 10 ಗ್ರಾಂಗೆ 22 ಕ್ಯಾರೆಟ್ ಚಿನ್ನದ ದರದಲ್ಲಿ 10 ರೂಪಾಯಿ ಏರಿಕೆಯಾಗಿದೆ. ಈ ಮೂಲಕ ಬೆಲೆ 47,860 ರೂಪಾಯಿ ಆಗಿದೆ. ಇನ್ನು, 24 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ 10 ರೂಪಾಯಿ ಏರಿಕೆ ಕಂಡಿದ್ದು, 52,210 ರೂಪಾಯಿ ಆಗಿದೆ. 

ಇನ್ನು ಇತ್ತ ಬೆಳ್ಳಿ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಒಂದು ಕೆ. ಜಿ ಬೆಳ್ಳಿಯ ಬೆಲೆ 61,700 ರೂ ಆಗಿದೆ.

ಇನ್ನೂ ಏರಿಕೆಯಾಗಲಿದೆ ಚಿನ್ನದ ಬೆಲೆ

ಶೀಘ್ರವೇ ಆಭರಣ ಚಿನ್ನದ ಬೆಲೆ 55 ಸಾವಿರ ರೂಪಾಯಿ ಆಗಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿರುವುದ್ದಾರೆ. ಕೊರೋನಾ ಸೋಂಕು ಹರಡುವಿಕೆ ಹೆಚ್ಚುತ್ತಲೇ ಇದೆ. ಇದರಿಂದ ಆರ್ಥಿಕತೆ ಮೇಲೆ ಭಾರೀ ಹೊಡೆತ ಉಂಟಾಗಿದೆ. ಹೀಗಾಗಿ ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ ಕಾಣಲಿದೆ ಎನ್ನುವುದು ತಜ್ಞರ ಅಭಿಪ್ರಾಯ. ಹೀಗಾಗಿ, ಚಿನ್ನ ಖರೀದಿ ಮಾಡಬೇಕು ಎನ್ನುವ ಆಲೋಚನೆಯಲ್ಲಿದ್ದವರು ಚಿಂತಾಕ್ರಾಂತರಾಗಿದ್ದಾರೆ. ಚಿನ್ನ ಖರೀದೀ ಮಾಡಬೇಕೋ ಅಥವಾ ಬೇಡವೋ ಎನ್ನುವ ಗೊಂದಲದಲ್ಲಿದ್ದಾರೆ

click me!