ಓಡುತ್ತಿದ್ದ ಚಿನ್ನ, ಬೆಳ್ಳಿ ದರಕ್ಕೆ ಬಿತ್ತು ಬ್ರೇಕ್: ಎರಡನೇ ದಿನವೂ ಬೆಲೆ ಇಳಿಕೆ!

By Suvarna NewsFirst Published Oct 24, 2020, 4:14 PM IST
Highlights

ಕಳೆದೆರಡು ದಿನದಲ್ಲಿ ದಾಖಲೆಯ ಇಳಿಕೆ ಕಂಡ ಚಿನ್ನದ ದರ| ಬೆಳ್ಳಿ ದರವೂ ಕುಸಿತ| ಇಲ್ಲಿದೆ ನೋಡಿ ಅಕ್ಟೋಬರ್ 24ರ ದರ

ಬೆಂಗಳೂರು(ಅ. 24): ಕೊರೋನಾತಂಕ ನಡುವೆ ಚಿನ್ನದ ಬೇಡಿಕೆ ಕಡಿಮೆ ಇದ್ದರೂ ಉದ್ಯಮಗಳು ನೆಲ ಕಚ್ಚಿದ ಪರಿಣಾಮ ಅನೇಕ ಮಂದಿ ಹಳದಿ ಲೋಹದಲ್ಲಿ ಹೂಡಿಕೆ ಮಾಡಿದ್ದರು. ಇದರ ಪರಿಣಾಮವೆಂಬಂತೆ ಬಂಗಾರ ದರ ಮಹಾಮಾರಿ ನಡುವೆಯೂ ಸಾರ್ವಕಾಲಿಕ ದಾಖಲೆ ಸೃಷ್ಟಿಸಿತ್ತು. ಸದ್ಯ ಚಿನ್ನದ ಬೆಲೆಯಲ್ಲಿ ಏರಿಳಿತವಾಗತೊಡಗಿದ್ದು, ಗ್ರಾಹಕರಲ್ಲೂ ಖರೀದಿಸಬೇಕಾ? ಬೇಡವಾ? ಎಂಬ ಗೊಂದಲದಲ್ಲಿದ್ದರು. ಸದ್ಯ ಕಳೆದೆರಡು ದಿನದಿಂದ ಚಿನ್ನದ ದರ ಇಳಿಕೆ ಕಂಡಿದ್ದು ಗ್ರಾಹಕರನ್ನು ಹಿಗ್ಗುವಂತೆ ಮಾಡಿದೆ.

ಇಂದು ಬೆಂಗಳೂರಿನಲ್ಲಿ 10 ಗ್ರಾಂಗೆ 22 ಕ್ಯಾರೆಟ್ ಚಿನ್ನದ ದರದಲ್ಲಿ 210 ರೂಪಾಯಿ ಇಳಿಕೆಯಾಗಿದೆ. ಈ ಮೂಲಕ ಬೆಲೆ 47,000 ರೂಪಾಯಿ ಆಗಿದೆ. ಇನ್ನು, 24 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ 130 ರೂಪಾಯಿ ಇಳಿಕೆ ಕಂಡಿದ್ದು, 51,270 ರೂಪಾಯಿ ಆಗಿದೆ. 

ಇನ್ನು ಇತ್ತ ಬೆಳ್ಳಿ ದರವೂ 100 ರೂ. ಇಳಿಕೆಯಾಗಿ. ಒಂದು ಕೆ. ಜಿ ಬೆಳ್ಳಿಯ ಬೆಲೆ 62,500 ರೂ ಆಗಿದೆ.

ಇನ್ನೂ ಏರಿಕೆಯಾಗಲಿದೆ ಚಿನ್ನದ ಬೆಲೆ

ಶೀಘ್ರವೇ ಆಭರಣ ಚಿನ್ನದ ಬೆಲೆ 55 ಸಾವಿರ ರೂಪಾಯಿ ಆಗಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿರುವುದ್ದಾರೆ. ಕೊರೋನಾ ಸೋಂಕು ಹರಡುವಿಕೆ ಹೆಚ್ಚುತ್ತಲೇ ಇದೆ. ಇದರಿಂದ ಆರ್ಥಿಕತೆ ಮೇಲೆ ಭಾರೀ ಹೊಡೆತ ಉಂಟಾಗಿದೆ. ಹೀಗಾಗಿ ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ ಕಾಣಲಿದೆ ಎನ್ನುವುದು ತಜ್ಞರ ಅಭಿಪ್ರಾಯ. ಹೀಗಾಗಿ, ಚಿನ್ನ ಖರೀದಿ ಮಾಡಬೇಕು ಎನ್ನುವ ಆಲೋಚನೆಯಲ್ಲಿದ್ದವರು ಚಿಂತಾಕ್ರಾಂತರಾಗಿದ್ದಾರೆ. ಚಿನ್ನ ಖರೀದೀ ಮಾಡಬೇಕೋ ಅಥವಾ ಬೇಡವೋ ಎನ್ನುವ ಗೊಂದಲದಲ್ಲಿದ್ದಾರೆ.

click me!