ಕೊರೋನಾ ಮಧ್ಯೆ ಏರಿದ್ದ ಚಿನ್ನ, ಬೆಳ್ಳಿ ದರ ಇಳಿಕೆ ಹಾದಿಯಲ್ಲಿ: ಇಲ್ಲಿದೆ ಸೆ.24ರ ರೇಟ್!

Published : Sep 24, 2020, 02:46 PM IST
ಕೊರೋನಾ ಮಧ್ಯೆ ಏರಿದ್ದ ಚಿನ್ನ, ಬೆಳ್ಳಿ ದರ ಇಳಿಕೆ ಹಾದಿಯಲ್ಲಿ: ಇಲ್ಲಿದೆ ಸೆ.24ರ ರೇಟ್!

ಸಾರಾಂಶ

ಕೊರೋನಾ ನಡುವೆ ಚಿನ್ನದ ಬೇಡಿಕೆ ಕಡಿಮೆ ಇದ್ದರೂ ಹಾವೇಣಿ ಆಟವಾಡುತ್ತಿದೆ ಚಿನ್ನದ ಬೆಲೆ| ಕಳೆದ ಮೂರು ದಿನಗಳಿಂದ ಇಳಿಕೆ ಕಂಡಿದ್ದ ಚಿನ್ನ, ಬೆಳ್ಳಿ ದರದಲ್ಲಿ ಮತ್ತೆ ಇಳಿಕೆ ದರ ಇಂದು ಹೇಗಿದೆ?| ಇಲ್ಲಿದೆ ಸೆ. 24ರ ಗೋಲ್ಡ್‌ ರೇಟ್  

ಬೆಂಗಳೂರು(ಸೆ.24): ಕೊರೋನಾ ನಡುವೆ ಚಿನ್ನದ ದರ ಏರಿಕೆ ಗ್ರಾಹಕರನ್ನ ಕಂಗಾಲು ಮಾಡಿತ್ತು. ನಿಗಧಿಯಾಗಿದ್ದ ಶುಭ ಕಾರ್ಯದ ಸಂದರ್ಭದಲ್ಲಿ ಬೆಲೆ ಏರಿಕೆ ದೊಡ್ಡ ಪೆಟ್ಟು ನೀಡಿತ್ತು. ಅಚ್ಚರಿ ಎಂಬಂತೆ ಚಿನ್ನದ ಬೇಡಿಕೆ ಭಾರೀ ಕಡಿಮೆ ಇದ್ದರೂ ಬೆಲೆ ಮಾತ್ರ ಸಾರ್ವಕಾಲಿಕ ದಾಖಲೆ ಸೃಷ್ಟಿಸಿತ್ತು. ಉದ್ಯಮಗಳು ನೆಲ ಕಚ್ಚಿದ ಹಿನ್ನೆಲೆ ಅನೇಕ ಮಂದಿ ಚಿನ್ನದಲ್ಲಿ ಹೂಡಿಕೆ ಮಾಡಿದ್ದೇ ಇದಕ್ಕೆ ಕಾರಣವಾಗಿತ್ತು. ಆದರೀಗ ಮತ್ತೆ ಚಿನ್ನ ಇಳಿಕೆ ಹಾದಿ ಕಂಡಿದೆ ತಜ್ಞರು ಮಾತ್ರ ಮತ್ತೆ ಹಳದಿ ಲೋಹದ ಬೆಲೆ ಏರಿಕೆಯಾಗುತ್ತದೆ ಎಂದಿದ್ದಾರೆ. ಇಲ್ಲಿದೆ ನೋಡಿ ಇಂದಿನ ಗೋಲ್ಡ್‌ ಆಂಡ್ ಸಿಲ್ವರ್ ರೇಟ್.

ಚಿನ್ನದ ದರ ಭಾರೀ ಇಳಿಕೆ, ಗ್ರಾಹಕರಿಗೆ ಖುಷಿಯೋ ಖುಷಿ: ಇಲ್ಲಿದೆ ಸೆ. 22ರ ಚಿನ್ನದ ಬೆಲೆ!

ಇಂದು ಗುರುವಾರ ಬೆಂಗಳೂರಿನಲ್ಲಿ 10 ಗ್ರಾಂಗೆ 22 ಕ್ಯಾರೆಟ್ ಚಿನ್ನದ ದರದಲ್ಲಿ 550 ರೂಪಾಯಿ ಇಳಿಕೆಯಾಗಿದೆ. ಈ ಮೂಲಕ ಬೆಲೆ 46,950 ರೂಪಾಯಿ ಆಗಿದೆ. ಇನ್ನು, 24 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ 590 ರೂಪಾಯಿ ಇಳಿಕೆ ಕಂಡಿದ್ದು, 51,220 ರೂಪಾಯಿ ಆಗಿದೆ. 

ಇನ್ನು ಇತ್ತ ಬೆಳ್ಳಿ ದರದಲ್ಲೂ 2,000ರೂ. ಇಳಿಕೆಯಾಗಿದ್ದು, ಒಂದು ಕೆ. ಜಿ ಬೆಳ್ಳಿಯ ಬೆಲೆ 57,000 ರೂ ಆಗಿದೆ.

ಏರಿಕೆ ಕಂಡಿದ್ದ ಚಿನ್ನದ ದರದಲ್ಲಿ ಭಾರಿ ಇಳಿಕೆ, ಇಲ್ಲಿದೆ ಸೆ. 21ರ ಬೆಲೆ!

ಇನ್ನೂ ಏರಿಕೆಯಾಗಲಿದೆ ಚಿನ್ನದ ಬೆಲೆ

ಶೀಘ್ರವೇ ಆಭರಣ ಚಿನ್ನದ ಬೆಲೆ 55 ಸಾವಿರ ರೂಪಾಯಿ ಆಗಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿರುವುದ್ದಾರೆ. ಕೊರೋನಾ ಸೋಂಕು ಹರಡುವಿಕೆ ಹೆಚ್ಚುತ್ತಲೇ ಇದೆ. ಇದರಿಂದ ಆರ್ಥಿಕತೆ ಮೇಲೆ ಭಾರೀ ಹೊಡೆತ ಉಂಟಾಗಿದೆ. ಹೀಗಾಗಿ ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ ಕಾಣಲಿದೆ ಎನ್ನುವುದು ತಜ್ಞರ ಅಭಿಪ್ರಾಯ. ಹೀಗಾಗಿ, ಚಿನ್ನ ಖರೀದಿ ಮಾಡಬೇಕು ಎನ್ನುವ ಆಲೋಚನೆಯಲ್ಲಿದ್ದವರು ಚಿಂತಾಕ್ರಾಂತರಾಗಿದ್ದಾರೆ. ಚಿನ್ನ ಖರೀದೀ ಮಾಡಬೇಕೋ ಅಥವಾ ಬೇಡವೋ ಎನ್ನುವ ಗೊಂದಲದಲ್ಲಿದ್ದಾರೆ.

PREV

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

click me!

Recommended Stories

ಚಿನ್ನ ಅಡವಿಟ್ಟವರಿಗೆ ಗುಡ್ ನ್ಯೂಸ್... ಸಾಲ ಮನ್ನಾ ಬಗ್ಗೆ ಶೀಘ್ರದಲ್ಲೇ ಮಹತ್ವದ ಘೋಷಣೆ?
ಮಂಡ್ಯದಲ್ಲಿ ARAI ಕೇಂದ್ರ ಸ್ಥಾಪನೆಗೆ ಬಸರಾಳು ಬಳಿ 105 ಎಕರೆ ಭೂಮಿ ಲಭ್ಯ: ಕುಮಾರಸ್ವಾಮಿಗೆ ಪತ್ರ ಬರೆದ ಎಂ.ಬಿ. ಪಾಟೀಲ