ಕೊರೋನಾತಂಕ ನಡುವೆ ಹೀಗಿದೆ ಚಿನ್ನದ ದರ, ಈಗ ಖರೀದಿಸಿದ್ರೆ ಲಾಭ!

By Suvarna News  |  First Published Aug 31, 2020, 11:18 AM IST

ಕೊರೋನಾ ಅಟ್ಟಹಾಸದ ನಡುವೆ ಬಂಗಾರ ಪ್ರಿಯರಿಗೆ ಶಾಕ್ ಕೊಟ್ಟಿದ್ದ ಚಿನ್ನದ ದರ| ಇಳಿಕೆಯಾದ ಚಿನ್ನದ ಬೆಲೆ, ಖರೀದಿಸೋದೆ ಉತ್ತಮ| ಮತ್ತೆ ಏರುತ್ತೆ ಚಿನ್ನದ ದರ


ಬೆಂಗಳೂರು(ಆ.31): ಕೊರೋನಾ ಮಹಾಮಾರಿ ಇಡೀ ವಿಶ್ವವನ್ನೇ ನಲುಗಿಸಿದೆ. ಜನ ಸಾಮಾನ್ಯರ ಬದುಕನ್ನೇ ಬದಲಾಯಿಸಿರುವ ಈ ವೈರಸ್ ಆರ್ಥಿಕ ಪರರಿಸ್ಥಿತಿಯನ್ನೂ ಹದಗೆಡಿಸಿದೆ. ಉದ್ಯಮಗಳು ನೆಲ ಕಚ್ಚಿವೆ. ಹೀಗಿರುವಾಗ ಅನೇಕ ಮಂದಿ ತಮ್ಮ ಣವನ್ನು ಚಿನ್ನದಲ್ಲಿ ಹೂಡಿಕೆ ಮಾಡಿದ್ದಾರೆ. ಹೀಗಾಗಿ ಕೊರೋನಾ ಮಹಾಮಾರಿ ಆತಂಕ ಹುಟ್ಟಿಸಿದ್ದರೂ ಚಿನ್ನ, ಬೆಳ್ಳಿ ದರ ಮಾತ್ರ ಯಾವುದೇ ಅಡೆ ತಡೆ ಇಲ್ಲದೇ ಏರುತ್ತಾ ಸಾಗಿತ್ತು. ಆದರೀಗ 55 ಸಾವಿರ ಗಡಿ ದಾಟಿದ್ದ ಚಿನ್ನದ ದರ ಇಳಿಯಲಾರಂಭಿಸಿದ್ದು, 50 ಸಾವಿರಕ್ಕಿಂತ ಕಡಿಮೆಯಾಗಿದೆ. ಇಲ್ಲಿದೆ ನೋಡಿ ಇಂದಿನ ಚಿನ್ನದ ದರ.

ಮೈಸೂರು ಪಾಲಿಕೆ ಅಧಿಕಾರಿ ಮನೆಯಲ್ಲಿ 1.3 ಕೆ.ಜಿ. ಚಿನ್ನ ಪತ್ತೆ!

Tap to resize

Latest Videos

22 ಕ್ಯಾರೆಟ್‌ 10 ಗ್ರಾಂ ಚಿನ್ನದ ದರ 48,530 ರುಪಾಯಿ ಆಗಿದ್ದು, 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 52,940 ರುಪಾಯಿ ಆಗಿದೆ. ಬೆಳ್ಳಿ ದರ ಕೇಜಿಗೆ 66,360 ರುಪಾಯಿ ಆಗಿದೆ. ತಜ್ಞರು ಮತ್ತೆ ಚಿನ್ನದ ದರ ಏರಿಕೆಯಾಗಲಿದೆ ಎಂದಿದ್ದು, ಬಂಗಾರ ಪ್ರಿಯರು ಚಿನ್ನ ಖರೀದಿಸಲು ಇದೇ ಸೂಕ್ತ ಸಮಯ ಎನ್ನಬಹುದು.

ಚಿನ್ನದ ದರ ಹೆಚ್ಚಿದರೂ ಆಭರಣ ಉದ್ದಿಮೆ ನಷ್ಟದಲ್ಲಿ!

ಸಾಮಾನ್ಯವಾಗಿ ಚಿನ್ನದ ದರ ಏರಿದಾಗಲೆಲ್ಲ ಖುಷಿಪಡುತ್ತಿದ್ದ ಚಿನ್ನಾಭರಣ ವ್ಯಾಪಾರಿಗಳು ಕೆಲ ತಿಂಗಳಿನಿಂದ ಚಿನ್ನದ ಬೆಲೆ ಗಗನಕ್ಕೇರುತ್ತಿದ್ದರೂ ಆತಂಕದಲ್ಲಿ ದಿನ ಕಳೆಯುವಂತಾಗಿದೆ. ಕಾರಣ, ಲಾಕ್‌ಡೌನ್‌ ಹಾಗೂ ಆರ್ಥಿಕ ಹಿಂಜರಿಕೆಯಿಂದಾಗಿ ಚಿನ್ನಕ್ಕೆ ಬೇಡಿಕೆ ದೊಡ್ಡ ಪ್ರಮಾಣದಲ್ಲಿ ತಗ್ಗಿದೆ.

ದೇಶದ ಅತ್ಯಂತ ಪ್ರತಿಷ್ಠಿತ ಚಿನ್ನಾಭರಣ ಮಾರುಕಟ್ಟೆಯಾದ ಮುಂಬೈನ ಜವೇರಿ ಬಜಾರ್‌ನಲ್ಲಿ ಇನ್ನೂ ಅನೇಕ ಚಿನ್ನಾಭರಣ ಅಂಗಡಿಗಳು ಲಾಕ್‌ಡೌನ್‌ ನಂತರ ತೆರೆದೇ ಇಲ್ಲ. ಚಿನ್ನಾಭರಣ ತಯಾರಿಸುವ ಕುಶಲಕರ್ಮಿಗಳು ಕೂಡ ಹಳ್ಳಿಗಳಿಗೆ ವಲಸೆ ಹೋಗಿದ್ದಾರೆ. ತೆರೆದಿರುವ ಅಂಗಡಿಗಳಿಗೂ ಗ್ರಾಹಕರು ಬಹಳ ಕಡಿಮೆ ಸಂಖ್ಯೆಯಲ್ಲಿ ಬರುತ್ತಿದ್ದಾರೆ. ಕಳೆದ 40-50 ವರ್ಷಗಳಿಂದ ಇಷ್ಟುನೀರಸ ಹಾಗೂ ನಷ್ಟದ ವ್ಯಾಪಾರವನ್ನು ನಾವು ನೋಡಿಲ್ಲ ಎಂದು ಚಿನ್ನಾಭರಣ ವ್ಯಾಪಾರಿಗಳು ಹೇಳುತ್ತಿದ್ದಾರೆ.

ಚಿನ್ನ ಬೆಳ್ಳಿ ಬೆಲೆಯಲ್ಲಿ ಭಾರೀ ಇಳಿಕೆ: ಬಂಗಾರ ಪ್ರಿಯರಲ್ಲಿ ಮುಗುಳ್ನಗೆ!

ಲಾಕ್‌ಡೌನ್‌ನಿಂದಾಗಿ ಅನೇಕರು ಆರ್ಥಿಕ ನಷ್ಟಅನುಭವಿಸಿ ತಮ್ಮಲ್ಲಿರುವ ಚಿನ್ನವನ್ನೇ ಅಡ ಇಡುತ್ತಿದ್ದಾರೆ. ಇನ್ನು ಅನೇಕರು ಚಿನ್ನದ ಬೆಲೆ ದುಬಾರಿಯಾಗಿರುವುದರಿಂದ ಮತ್ತು ಕೈಯಲ್ಲಿ ಸಾಕಷ್ಟುಹಣವಿಲ್ಲದೆ ಇರುವುದರಿಂದ ಮದುವೆ ಮತ್ತು ಶುಭ ಸಮಾರಂಭಗಳಿಗೆ ಚಿನ್ನ ಕೊಳ್ಳುವುದನ್ನು ಕಡಿಮೆ ಮಾಡುತ್ತಿದ್ದಾರೆ. ಇದೇ ವೇಳೆ, ಕೊರೋನಾ ವೈರಸ್‌ ಭೀತಿಯಿಂದ ಜನರು ಚಿನ್ನಾಭರಣ ಮಳಿಗೆಗಳಿಗೆ ಬರುವುದು ಕೂಡ ಕಡಿಮೆಯಾಗುತ್ತಿದೆ. ಚಿನ್ನದ ಮೇಲೆ ಹೂಡಿಕೆ ಮಾಡುವ ಹೊಸ ತಲೆಮಾರಿನವರು ಹೆಚ್ಚಾಗಿ ಭೌತಿಕ ಚಿನ್ನ ಕೊಳ್ಳದೆ ಡಿಜಿಟಲ್‌ ಚಿನ್ನ ಕೊಳ್ಳುತ್ತಿದ್ದಾರೆ. ಇವೆಲ್ಲಾ ಕಾರಣಗಳಿಂದಾಗಿ ಚಿನ್ನಕ್ಕೆ ಬೇಡಿಕೆಯಿಲ್ಲದಂತಾಗಿದೆ.

ಮತ್ತೆ ಏರಿಕೆಯಾಗಲಿದೆ ಚಿನ್ನದ ಬೆಲೆ

ಶೀಘ್ರವೇ ಆಭರಣ ಚಿನ್ನದ ಬೆಲೆ 55 ಸಾವಿರ ರೂಪಾಯಿ ಆಗಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿರುವುದ್ದಾರೆ. ಕೊರೋನಾ ಸೋಂಕು ಹರಡುವಿಕೆ ಹೆಚ್ಚುತ್ತಲೇ ಇದೆ. ಇದರಿಂದ ಆರ್ಥಿಕತೆ ಮೇಲೆ ಭಾರೀ ಹೊಡೆತ ಉಂಟಾಗಿದೆ. ಹೀಗಾಗಿ ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ ಕಾಣಲಿದೆ ಎನ್ನುವುದು ತಜ್ಞರ ಅಭಿಪ್ರಾಯ. ಹೀಗಾಗಿ, ಚಿನ್ನ ಖರೀದಿ ಮಾಡಬೇಕು ಎನ್ನುವ ಆಲೋಚನೆಯಲ್ಲಿದ್ದವರು ಚಿಂತಾಕ್ರಾಂತರಾಗಿದ್ದಾರೆ. ಚಿನ್ನ ಖರೀದೀ ಮಾಡಬೇಕೋ ಅಥವಾ ಬೇಡವೋ ಎನ್ನುವ ಗೊಂದಲದಲ್ಲಿದ್ದಾರೆ.

click me!