ಚಿನ್ನ ಬೆಳ್ಳಿ ಬೆಲೆಯಲ್ಲಿ ಭಾರೀ ಇಳಿಕೆ: ಬಂಗಾರ ಪ್ರಿಯರಲ್ಲಿ ಮುಗುಳ್ನಗೆ!

By Suvarna NewsFirst Published Aug 23, 2020, 10:04 AM IST
Highlights

ಕೊರೋನಾತಂಕ ನಡುವೆ ಏರಿಕೆ ಕಂಡಿದ್ದ ಚಿನ್ನದ ಬೆಲೆ|  ಏರಿಕೆ ಕಂಡಿದ್ದ ಚಿನ್ನದ ಬೆಲೆ ಹಬ್ಬದ ನಡುವೆ ಇಳಿಕೆ| ಬಂಗಾರ ಪ್ರಿಯರ ಮುಖದಲ್ಲಿ ಮುಗುಳ್ನಗೆ| ಖರೀದಿಗೆ ತಡ ಮಾಡಬೇಡಿ, ಮತ್ತೆ ಏರಿಕೆಯಾಗುತ್ತೆ ಚಿನ್ನ

ನವದೆಹಲಿ(ಆ.23): ಕೊರೋನಾತಂಕದ ನಡುವೆ ದೇಶದಲ್ಲಿ ಏರಿಕೆ ಕಂಡಿದ್ದ ಚಿನ್ನ, ಬೆಳ್ಳಿ ದರ ಗ್ರಾಹಕರ ಚಿಂತೆಗೆ ಕಾರಣವಾಗಿತ್ತು. ಆದರೀಗ ಹಬ್ಬದ ನಡುವೆ ಚಿನ್ನ, ಬೆಳ್ಳಿ ದರ ಇಳೆಕೆ ಕಾಣುವ ಮೂಲಕ ಬಂಗಾರ ಪ್ರಿಯರನ್ನು ಕೊಂಚ ನಿರಾಳವಾಗಿಸಿದೆ.

ಬರೋಬ್ಬರಿ ಐದು ತಿಂಗಳ ನಂತರ ರಾಜಧಾನಿಯ ಹೋಟೆಲ್‌ಗಳು ಓಪನ್

ಹೌದು ದೇಶದಲ್ಲಿ ಕೊರೋನಾ ಎಂಟ್ರಿ ಕೊಟ್ಟ ದಿನದಿಂದಲೂ ಚಿನ್ನ ಭಾರೀ ಏರಿಕೆ ಕಂಡಿತ್ತು. ಅನೇಕ ಮಂದಿ ಚಿನ್ನವನ್ನು ಕೊಂಡು ಹೂಡಿಕೆ ಮಾಡಿದ್ದರು. ಆದರೀಗ ಹಬ್ಬದ ನಡುವೆ ಚಿನ್ನದ ದರ ಇಳಿಕೆಯಾಗಿದೆ. ಶನಿವಾರ 10 ಗ್ರಾಂ ಚಿನ್ನದದಲ್ಲಿ 100 ರೂಪಾಯಿ ಇಳಿಕೆಯಾಗಿದ್ದು, ಬೆಲೆ 49,500 ರೂಪಾಯಿ ಆಗಿದೆ. ಇನ್ನು 24 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ  110 ರೂಪಾಯಿ ಇಳಿಕೆ ಕಂಡಿದ್ದು, 54,000 ರೂಪಾಯಿ ಆಗಿದೆ. 

ಚಿನ್ನದ ದರ ಹೆಚ್ಚಿದರೂ ಆಭರಣ ಉದ್ದಿಮೆ ನಷ್ಟದಲ್ಲಿ!

ಸಾಮಾನ್ಯವಾಗಿ ಚಿನ್ನದ ದರ ಏರಿದಾಗಲೆಲ್ಲ ಖುಷಿಪಡುತ್ತಿದ್ದ ಚಿನ್ನಾಭರಣ ವ್ಯಾಪಾರಿಗಳು ಕೆಲ ತಿಂಗಳಿನಿಂದ ಚಿನ್ನದ ಬೆಲೆ ಗಗನಕ್ಕೇರುತ್ತಿದ್ದರೂ ಆತಂಕದಲ್ಲಿ ದಿನ ಕಳೆಯುವಂತಾಗಿದೆ. ಕಾರಣ, ಲಾಕ್‌ಡೌನ್‌ ಹಾಗೂ ಆರ್ಥಿಕ ಹಿಂಜರಿಕೆಯಿಂದಾಗಿ ಚಿನ್ನಕ್ಕೆ ಬೇಡಿಕೆ ದೊಡ್ಡ ಪ್ರಮಾಣದಲ್ಲಿ ತಗ್ಗಿದೆ.

ದೇಶದ ಅತ್ಯಂತ ಪ್ರತಿಷ್ಠಿತ ಚಿನ್ನಾಭರಣ ಮಾರುಕಟ್ಟೆಯಾದ ಮುಂಬೈನ ಜವೇರಿ ಬಜಾರ್‌ನಲ್ಲಿ ಇನ್ನೂ ಅನೇಕ ಚಿನ್ನಾಭರಣ ಅಂಗಡಿಗಳು ಲಾಕ್‌ಡೌನ್‌ ನಂತರ ತೆರೆದೇ ಇಲ್ಲ. ಚಿನ್ನಾಭರಣ ತಯಾರಿಸುವ ಕುಶಲಕರ್ಮಿಗಳು ಕೂಡ ಹಳ್ಳಿಗಳಿಗೆ ವಲಸೆ ಹೋಗಿದ್ದಾರೆ. ತೆರೆದಿರುವ ಅಂಗಡಿಗಳಿಗೂ ಗ್ರಾಹಕರು ಬಹಳ ಕಡಿಮೆ ಸಂಖ್ಯೆಯಲ್ಲಿ ಬರುತ್ತಿದ್ದಾರೆ. ಕಳೆದ 40-50 ವರ್ಷಗಳಿಂದ ಇಷ್ಟುನೀರಸ ಹಾಗೂ ನಷ್ಟದ ವ್ಯಾಪಾರವನ್ನು ನಾವು ನೋಡಿಲ್ಲ ಎಂದು ಚಿನ್ನಾಭರಣ ವ್ಯಾಪಾರಿಗಳು ಹೇಳುತ್ತಿದ್ದಾರೆ.

ದೇಗುಲದಲ್ಲಿ ಅಪಾರ ಚಿನ್ನಾಭರಣ ಕದ್ದೋಡಿದ ಕಳ್ಳರು

ಲಾಕ್‌ಡೌನ್‌ನಿಂದಾಗಿ ಅನೇಕರು ಆರ್ಥಿಕ ನಷ್ಟಅನುಭವಿಸಿ ತಮ್ಮಲ್ಲಿರುವ ಚಿನ್ನವನ್ನೇ ಅಡ ಇಡುತ್ತಿದ್ದಾರೆ. ಇನ್ನು ಅನೇಕರು ಚಿನ್ನದ ಬೆಲೆ ದುಬಾರಿಯಾಗಿರುವುದರಿಂದ ಮತ್ತು ಕೈಯಲ್ಲಿ ಸಾಕಷ್ಟುಹಣವಿಲ್ಲದೆ ಇರುವುದರಿಂದ ಮದುವೆ ಮತ್ತು ಶುಭ ಸಮಾರಂಭಗಳಿಗೆ ಚಿನ್ನ ಕೊಳ್ಳುವುದನ್ನು ಕಡಿಮೆ ಮಾಡುತ್ತಿದ್ದಾರೆ. ಇದೇ ವೇಳೆ, ಕೊರೋನಾ ವೈರಸ್‌ ಭೀತಿಯಿಂದ ಜನರು ಚಿನ್ನಾಭರಣ ಮಳಿಗೆಗಳಿಗೆ ಬರುವುದು ಕೂಡ ಕಡಿಮೆಯಾಗುತ್ತಿದೆ. ಚಿನ್ನದ ಮೇಲೆ ಹೂಡಿಕೆ ಮಾಡುವ ಹೊಸ ತಲೆಮಾರಿನವರು ಹೆಚ್ಚಾಗಿ ಭೌತಿಕ ಚಿನ್ನ ಕೊಳ್ಳದೆ ಡಿಜಿಟಲ್‌ ಚಿನ್ನ ಕೊಳ್ಳುತ್ತಿದ್ದಾರೆ. ಇವೆಲ್ಲಾ ಕಾರಣಗಳಿಂದಾಗಿ ಚಿನ್ನಕ್ಕೆ ಬೇಡಿಕೆಯಿಲ್ಲದಂತಾಗಿದೆ.

ಮತ್ತೆ ಏರಿಕೆಯಾಗಲಿದೆ ಚಿನ್ನದ ಬೆಲೆ

ಶೀಘ್ರವೇ ಆಭರಣ ಚಿನ್ನದ ಬೆಲೆ 55 ಸಾವಿರ ರೂಪಾಯಿ ಆಗಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿರುವುದ್ದಾರೆ. ಕೊರೋನಾ ಸೋಂಕು ಹರಡುವಿಕೆ ಹೆಚ್ಚುತ್ತಲೇ ಇದೆ. ಇದರಿಂದ ಆರ್ಥಿಕತೆ ಮೇಲೆ ಭಾರೀ ಹೊಡೆತ ಉಂಟಾಗಿದೆ. ಹೀಗಾಗಿ ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ ಕಾಣಲಿದೆ ಎನ್ನುವುದು ತಜ್ಞರ ಅಭಿಪ್ರಾಯ. ಹೀಗಾಗಿ, ಚಿನ್ನ ಖರೀದಿ ಮಾಡಬೇಕು ಎನ್ನುವ ಆಲೋಚನೆಯಲ್ಲಿದ್ದವರು ಚಿಂತಾಕ್ರಾಂತರಾಗಿದ್ದಾರೆ. ಚಿನ್ನ ಖರೀದೀ ಮಾಡಬೇಕೋ ಅಥವಾ ಬೇಡವೋ ಎನ್ನುವ ಗೊಂದಲದಲ್ಲಿದ್ದಾರೆ.

click me!