ಭಾನುವಾರ ಹೇಗಿದೆ ಚಿನ್ನ, ಬೆಳ್ಳಿ ದರ: ನಿಮ್ಮ ನಗರಗಳಲ್ಲಿ ಇಂದಿನ ಬೆಲೆ ವಿವರ ಇಲ್ಲಿದೆ..

By BK AshwinFirst Published Aug 7, 2022, 2:16 PM IST
Highlights

ಬಂಗಾರದ ಮೇಲೆ ಹೂಡಿಕೆ ಮಾಡುವವರು ಇಂದಿನಬೆಲೆಯನ್ನು ನೋಡುತ್ತಿರುತ್ತಾರೆ. ಅದೇ ರೀತಿ,. ನೀವು ಚಿನ್ನ, ಬೆಳ್ಳಿ ಖರೀದಿಸುವ ಪ್ಲ್ಯಾನ್‌ ಇದೆಯಾ..? ಇಂದಿನ ಬೆಲೆ ವಿವರ ಇಲ್ಲಿದೆ ನೋಡಿ..

ಶ್ರಾವಣ ಮಾಸ ಬಂತು ಅಂದ್ರೆ ಶುಭ ಸಮಾರಂಭಗಳು ಹೆಚ್ಚಾಗುತ್ತಾ ಹೋಗುತ್ತೆ. ಹಾಗೆ, ಸಾಲುಸಾಲು ಹಬ್ಬಗಳ ಆರಂಭವೂ ಆಗುತ್ತೆ. ಈ ಹಿನ್ನೆಲೆ ಮಹಿಳೆಯರು ಚಿನ್ನ, ಬೆಳ್ಳಿ ಖರೀದಿಸಲು ಈ ಅವಧಿಯಲ್ಲಿ ಹೆಚ್ಚು ಉತ್ಸುಕರಾಗಿರುತ್ತಾರೆ. ಅಂತಾರಾಷ್ಟ್ರಿಯ ಕಾರಣಗಳು, ಷೇರುಪೇಟೆಯಲ್ಲಿ ಏರಿಕೆ - ಇಳಿಕೆ ಕಾರಣದಿಂದಲೂ ಬಂಗಾರ, ಬೆಳ್ಳಿ ದರದಲ್ಲಿ ವ್ಯತ್ಯಾಸವಾಗುತ್ತಿರುತ್ತದೆ. ಇನ್ನು, ಶುಭ ಸಮಾರಂಭಗಳಿಗಂತೂ ಬೆಲೆ ಎಷ್ಟೇ ಇದ್ದರೂ ಖರೀದಿಸಲೇಬೇಕಾಗಿದೆ. ನೀವೂ ಸಹ ಬಂಗಾರ, ಬೆಳ್ಳಿ ಖರೀದಿಸುವ ಪ್ಲ್ಯಾನ್‌ ಇದೆಯಾ..? ಹಾಗಾದರೆ, ಬೆಂಗಳೂರಿನಲ್ಲಿ ಇಂದು ಚಿನ್ನ, ಬೆಳ್ಳಿ ಬೆಲೆ ಎಷ್ಟಿದೆ..? ದೇಶದ ಪ್ರಮುಖ ನಗರಗಳಲ್ಲಿ ದರ ಹೇಗಿದೆ..? ಇಲ್ಲಿದೆ ವಿವರ. 

ಇಂದು ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಬಂಗಾರದ ದರ ಯಥಾಸ್ಥಿತಿ ಕಾಣಿಸಿಕೊಂಡಿದ್ದು, ನಿನ್ನೆಯಷ್ಟೇ ಇದೆ.

ಚಿತ್ರದುರ್ಗ, ಉತ್ತರ ಕನ್ನಡದಲ್ಲಿ ಇಳಿಕೆಯಾದ ಪೆಟ್ರೋಲ್‌, ಡೀಸೆಲ್‌ ದರ: ಭಾನುವಾರ ನಿಮ್ಮ ನಗರಗಳಲ್ಲಿ ಇಂಧನ ಬೆಲೆ ಎಷ್ಟಿದೆ ನೋಡಿ..

ಒಂದು ಗ್ರಾಂ ಚಿನ್ನ (1GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,760
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,193

ಎಂಟು ಗ್ರಾಂ ಚಿನ್ನ (8GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 38,080
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 41,544

ಹತ್ತು ಗ್ರಾಂ ಚಿನ್ನ (10GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 47,600
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 51,930

ನೂರು ಗ್ರಾಂ ಚಿನ್ನ (100GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ.  4,76,000
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,19,300

ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 47,600 ಆಗಿದ್ದರೆ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 48,450, ರೂ. 47,550, ರೂ. 47,550 ಆಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 47,700 ರೂ. ಆಗಿದೆ. ಈ ಎಲ್ಲ ನಗರಗಳಲ್ಲಿ ನಿನ್ನೆ ಸಹ ಇಷ್ಟೇ ದರ ಇತ್ತು.

ಇಂದಿನ ಬೆಳ್ಳಿ ದರ
ಇನ್ನು, ದೇಶದಲ್ಲಿ ನಿನ್ನೆಗೆ ಹೋಲಿಸಿದರೆ ಇಂದು ಬೆಳ್ಳಿ ದರದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ವ್ಯತ್ಯಾಸವಾದಂತೆ ಚಿನ್ನ, ಬೆಳ್ಳಿ ದರದಲ್ಲೂ ಏರಿಕೆ ಇಳಿಕೆ ಉಂಟಾಗುತ್ತದೆ.

ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್
ದೇಶದಲ್ಲಿ ಬೆಳ್ಳಿ ದರದಲ್ಲಿ ಇಂದು ಯಥಾಸ್ಥಿತಿ ಕಾಯ್ದುಕೊಂಡಿದೆ. ಅದೇ ರೀತಿ ರಾಜ್ಯ ರಾಜಧಾನಿಯಲ್ಲಿ ಸಹ ಬೆಳ್ಳಿ ದರದಲ್ಲಿ ಬದಲಾಣೆಯಾಗಿಲ್ಲ.. ಇಂದು, ಬೆಂಗಳೂರಿನಲ್ಲಿ 10 gm, 100 gm, 1000 gm (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 630, ರೂ. 6,300 ಹಾಗೂ ರೂ. 63,000 ಗಳಾಗಿವೆ. ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 63,000 ಆಗಿದ್ದರೆ, ಮುಂಬೈನಲ್ಲಿ ರೂ. 57,400 ಹಾಗೂ ಕೋಲ್ಕತ್ತದಲ್ಲಿ ಸಹ ರೂ. 57,400 ಗಳಾಗಿದೆ. ಅಲ್ಲದೆ, ರಾಷ್ಟ್ರ ರಾಜಧಾನಿ ನವ ದೆಹಲಿಯಲ್ಲೂ ಇಂದಿನ ಬೆಳ್ಳಿ ದರ ರೂ. 57,400 ಆಗಿದೆ.

click me!