ಬಂಗಾರದ ಬೆಲೆಯಲ್ಲಿ ಭಾರೀ ಇಳಿಕೆ, ಬೆಳ್ಳಿ ಬೆಲೆ ಕೂಡ ಕಡಿಮೆ!

By Suvarna News  |  First Published Dec 8, 2019, 5:53 PM IST

ಡಿಸೆಂಬರ್ ಆರಂಭದಲ್ಲಿ ಇಳಿಕೆಯತ್ತ ಮುಖ ಮಾಡಿದ ಚಿನ್ನದ ದರ| ಆಭರಣ ಪ್ರೀಯರಲ್ಲಿ ಸಂತಸ ಮೂಡಿಸಿದ ಚಿನ್ನದ ದರ ಇಳಿಕೆ| ಮಲ್ಟಿ ಕಮೋಡಿಟಿ ಎಕ್ಸಚೇಂಜ್’ನಲ್ಲಿ ಶೇ.1ರಷ್ಟು ಇಳಿಕೆ ಕಂಡ ಚಿನ್ನದ ದರ| ದೇಶೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಇದೀಗ 37,685 ರೂ.| ಬೆಳ್ಳಿ ಬೆಲೆಯಲ್ಲಿ ಒಟ್ಟು ಶೇ.2.5ರಷ್ಟು ಇಳಿಕೆ| ದೇಶೀಯ ಮಾರುಕಟ್ಟೆಯಲ್ಲಿ ಬೆಳ್ಳಿ ಬೆಲೆ ಇದೀಗ 43,536 ರೂ.| ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಒಂದು ಔನ್ಸ್ ಚಿನ್ನದ ಬೆಲೆ 1,465 ಡಾಲರ್|


ನವದೆಹಲಿ(ಡಿ.08): ನವೆಂಬರ್ ತಿಂಗಳಲ್ಲಿ ಹೆಚ್ಚು ಕಡಿಮೆ ಹಾವು-ಏಣಿ ಆಟವಾಡಿದ್ದ ಆಭರಣ ದರ, ಡಿಸೆಂಬರ್ ಆರಂಭದಲ್ಲಿ ಗಮನಾರ್ಹ ಇಳಿಕೆ ಕಾಣುವ ಮೂಲಕ ಆಭರಣ ಪ್ರಿಯರಲ್ಲಿ ಸಂತಸ ಮೂಡಿಸಿದೆ.

ಟ್ರಂಪ್ ಆಡಿದ ಅದೊಂದು ಮಾತು: ಚಿನ್ನದ ದರ ಕತೆಯೇ ಬೇರೆ ಆಯ್ತು!

Latest Videos

undefined

ಮಲ್ಟಿ ಕಮೋಡಿಟಿ ಎಕ್ಸಚೇಂಜ್’ನಲ್ಲಿ ಚಿನ್ನದ ಬೆಲೆಯಲ್ಲಿ ಶೇ.1ರಷ್ಟು ಇಳಿಕೆ ಕಂಡಿದೆ. ಈ ಮೂಲಕ 10 ಗ್ರಾಂ ಚಿನ್ನದ ಬೆಲೆ ಇದೀಗ 37,685 ರೂ. ಆಗಿದೆ.

ಡಿಸೆಂಬರ್ ಶುಭಾರಂಭ: ಚಿನ್ನದ ಬೆಲೆಯಲ್ಲಿ ಗಮನಾರ್ಹ ಇಳಿಕೆ!

ಇದೇ ವೇಳೆ ಬೆಳ್ಳಿ ಬೆಲೆಯಲ್ಲೂ ಗಮನಾರ್ಹ ಇಳಿಕೆ ಕಂಡಿದ್ದು, ಒಟ್ಟು ಶೇ.2.5ರಷ್ಟು ಇಳಿಕೆ ದಾಖಲಾಗಿದೆ. ಈ ಮೂಲಕ ಮಾರುಕಟ್ಟೆಯಲ್ಲಿ ಒಂದು ಕೆಜಿ ಬೆಳ್ಳಿ ಬೆಲೆ 43,536 ರೂ. ಆಗಿದೆ.

ದೇಶೀಯ ಮಾರುಕಟ್ಟೆಯಲ್ಲಿ ಕೆಜಿ ಬೆಳ್ಳಿ ಬೆಲೆಯಲ್ಲಿ ಒಟ್ಟು 1,074 ರೂ. ಕಡಿಮೆಯಾಗಿರುವುದು ವಿಶೇಷ.

ಚಿನ್ನದ ಬೆಲೆ ಲೆಕ್ಕ ಹಾಕೋದ್ಹೇಗೆ?

ಇನ್ನು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲೂ ಚಿನ್ನದ ದರ ಗಮನಾರ್ಹ ಇಳಿಕೆ ಕಂಡಿದ್ದು, ಒಟ್ಟು ಶೇ.1.2ರಷ್ಟು ಇಳಿಕೆ ದಾಖಲಾಗಿದೆ. ಈ ಮೂಲಕ ಒಂದು ಔನ್ಸ್ ಚಿನ್ನದ ಬೆಲೆ 1,465  ಡಾಲರ್ ಆಗಿದೆ.
 

click me!