
ನವದೆಹಲಿ: ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರದಲ್ಲಿ ಇಳಿಕೆಯಾಗಿದ್ದು, ಇಂದಿನಿಂದ ವಾಣಿಜ್ಯ ಬಳಕೆಯ ಸಿಲಿಂಡರ್ ದರದಲ್ಲಿ 39.5 ರೂ ಇಳಿಕೆಯಾಗಿದೆ. ಪ್ರಸ್ತುತ ತೈಲ ಕಂಪನಿಗಳು ಇಂದಿನಿಂದ ಜಾರಿಗೆ ಬರುವಂತೆ 19 ಕೆಜಿ ವಾಣಿಜ್ಯ ಸಿಲಿಂಡರ್ ದರದಲ್ಲಿ 39.5 ರೂ ಇಳಿಕೆ ಮಾಡಿವೆ. ಆದರೆ ಗೃಹ ಬಳಕೆಯ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆ ಇಲ್ಲ.
ಪ್ರಸ್ತುತ ಬದಲಾದ ದರದ ಜೊತೆ ದೇಶದ ಮೆಟ್ರೋ ನಗರಗಳಲ್ಲಿ ಪರೀಕ್ಷಿತ ದರದ ವಿವರ ಇಲ್ಲಿದೆ. ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ದರ 1757 ರೂ ಇದೆ. ಅದೇ ರೀತಿ ಕೋಲ್ಕತ್ತಾದಲ್ಲಿ ಒಂದು ವಾಣಿಜ್ಯ ಸಿಲಿಂಡರ್ ದರ 1868 ಇದೆ. ಹಾಗೆಯೇ ಮುಂಬೈನಲ್ಲಿ 1710, ಚೆನ್ನೈನಲ್ಲಿ 1929 ದರ ಇದೆ. ದರ ಇಳಿಕೆಯಿಂದ ಹೊಟೇಲ್ ಹಾಗೂ ಉಪಹಾರ ಉದ್ಯಮದಲ್ಲಿ ತೊಡಗಿರುವವರಿಗೆ ಸ್ವಲ್ಪ ನಿರಾಳವಾಗಿದೆ.
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.