
ನವದೆಹಲಿ(ಜು.21): ಭಾರತದಲ್ಲಿರುವ ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಖಾಸಗೀಕರಣ ಮಾಡಲು ನಿರ್ಧರಿಸಲಾಗಿದೆ. ಸದ್ಯ ಇರುವ 12 ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳನ್ನು 5ಕ್ಕೆ ಇಳಿಸಲು ಕೇಂದ್ರ ನಿರ್ಧರಿಸಿದೆ. ಸರ್ಕಾರಿ ಸ್ವಾಮ್ಯದ ಅರ್ಧದಷ್ಟು ಬ್ಯಾಂಕುಗಳನ್ನು ಖಾಸಗೀಕರಣಗೊಳಿಸಲು ಸರ್ಕಾರ ನಿರ್ಧರಿಸಿದೆ ಎಂದು ಸರ್ಕಾರ ಮತ್ತು ಬ್ಯಾಂಕಿಂಗ್ ಮೂಲಗಳು ತಿಳಿಸಿವೆ.
ನಕಲಿ ಎಸ್‌ಬಿಐ ಶಾಖೆ ತೆರೆದ ಭೂಪ!...
ಯೋಜನೆಯ ಮೊದಲ ಹಂತದಲ್ಲಿ ಬ್ಯಾಂಕ್ ಆಫ್ ಇಂಡಿಯಾ, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ, ಇಂಡಿಯನ್ ಓವರ್‌ಸೀಸ್ ಬ್ಯಾಂಕ್, ಯುಕೊ ಬ್ಯಾಂಕ್, ಬ್ಯಾಂಕ್ ಆಫ್ ಮಹಾರಾಷ್ಟ್ರ ಪಂಜಾಬ್ ಮತ್ತು ಸಿಂಧ್ ಬ್ಯಾಂಕ್‌ನಲ್ಲಿ ಹೆಚ್ಚಿನ ಪಾಲನ್ನು ಮಾರಾಟ ಮಾಡಲು ನಿರ್ಧರಿಸಿದೆ. ಈ ಮೂಲಕ ಖಾಸಗೀಕರಣ ಮಾಡವು ಯೋಜನೆ ರೂಪಿಸಲಾಗಿದೆ.
ಇನ್ಮುಂದೆ ಸಹಕಾರಿ ಬ್ಯಾಂಕ್ ಆರ್‌ಬಿಐ ಅಧೀನಕ್ಕೆ
ಸದ್ಯ ಭಾರತದಲ್ಲಿ 12 ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳಿವೆ. ಖಾಸಗೀಕರಣದ ಮೂಲಕ 7 ಬ್ಯಾಂಕ್‌ಗಳ ಪಾಲು ಮಾರಾಟ ಮಾಡಲು ಯೋಜನೆ ಹಾಕಲಾಗಿದೆ. ಈ ಮೂಲಕ ಕೇವಲ 5 ಬ್ಯಾಂಕ್‌ಗಳು ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳಾಗಿ ಮುಂದುವರಿಯಲಿದೆ. ಬ್ಯಾಂಕ್ ಖಾಸಗೀಕರಣ ಅನುಮೋದನೆಗೆ ಕ್ಯಾಬಿನೆಟ್ ಅಂಕಿತ ಪಡೆಯಲು ಸರ್ಕಾರ ತಯಾರಿ ಆರಂಭಿಸಿದೆ ಎಂದು ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ಹೇಳಿದ್ದಾರೆ. ಆದರೆ ಹಣಕಾಸು ಸಚಿವಾಲಯ ಈ ಕುರಿತು ಪ್ರತಿಕ್ರಿಯೆ ನೀಡಲು ನಿರಾಕರಿಸಿದೆ.
ಕೊರೋನಾ ವೈರಸ್ ಕಾರಣದಿಂದ ದೇಶದ ಆರ್ಥಿಕತೆ ಕುಸಿದಿದೆ. ಹೀಗಾಗಿ ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಷೇರುಗಳನ್ನು ಮಾರಾಟ ಮಾಡಿ ಈ ಮೂಲಕ ಹಣ ಸಂಗ್ರಹಣೆಗೆ ಸರ್ಕಾರ ಚಿಂತನೆ ನಡೆಸಿದೆ. ಭಾರತ ಐದಕ್ಕಿಂತ ಹೆಚ್ಚು ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಹೊಂದಿರುವುದು ಉತ್ತಮವಲ್ಲ ಎಂದು ಸರ್ಕಾರಿ ಸಮಿತಿ ಹಾಗೂ ಭಾರತೀಯ ರಿಸರ್ವ್ ಬ್ಯಾಂಕ್(RBI)ಅಭಿಪ್ರಾಯಪಟ್ಟಿದೆ. ಬ್ಯಾಂಕ್ ವಿಲೀನ ಪದ್ದತಿಯನ್ನು ಈಗಾಗಲೇ ಕೈಬಿಡಲಾಗಿದೆ. ಸದ್ಯ ಇರುವ ಆಯ್ಕೆ ಬ್ಯಾಂಕ್ ಖಾಸಗೀಕರಣ ಮಾತ್ರ.
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.