ಅಬ್ಬಬ್ಬಾ ಮೋದಿ-ಜೇಟ್ಲಿ ಹೊಸ ನಿರ್ಧಾರ: ಆರ್ಥಿಕ ಸ್ಥಿರತೆಗೆ ಇದೇ ಆಧಾರ!

Published : Sep 15, 2018, 02:09 PM ISTUpdated : Sep 19, 2018, 09:26 AM IST
ಅಬ್ಬಬ್ಬಾ ಮೋದಿ-ಜೇಟ್ಲಿ ಹೊಸ ನಿರ್ಧಾರ: ಆರ್ಥಿಕ ಸ್ಥಿರತೆಗೆ ಇದೇ ಆಧಾರ!

ಸಾರಾಂಶ

ಚಾಲ್ತಿ ಖಾತೆ ಕೊರತೆ ತಡೆಯಲು ಕೇಂದ್ರ ಸರ್ಕಾರ ನಿರ್ಧಾರ! ಸಾಗರೋತ್ತರ ಸಾಲ ಹೆಚ್ಚಿಸಲು ನಿಯಮಗಳ ಸಡಿಲಿಕೆ! ಅನಗತ್ಯ ಆಮದುಗಳ ಮೇಲೆ ನಿರ್ಬಂಧ ವಿಧಿಸಲು ನಿರ್ಧಾರ! ಪ್ರಧಾನಿ ಮೋದಿ ನೇತೃತ್ವದ ಪರಿಶೀಲನಾ ಸಭೆಯಲ್ಲಿ ನಿರ್ಧಾರ

ನವದೆಹಲಿ(ಸೆ.15): ಕೊನೆಗೂ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಹೆಚ್ಚುತ್ತಿರುವ ಚಾಲ್ತಿ ಖಾತೆ ಕೊರತೆ(ಸಿಎಡಿ: ಆಮದು-ರಫ್ತು ನಡುವಿನ ಅಂತರ)ಯನ್ನು ತಡೆಯಲು ಮುಂದಾಗಿದ್ದು, ಸಾಗರೋತ್ತರ ಸಾಲ ಹೆಚ್ಚಿಸಲು ನಿಯಮಗಳ ಸಡಿಲಿಕೆ ಮತ್ತು ಅನಗತ್ಯ ಆಮದುಗಳ ಮೇಲೆ ನಿರ್ಬಂಧ ವಿಧಿಸಲು ನಿರ್ಧರಿಸಿದೆ.

ದೇಶದ ಆರ್ಥಿಕ ಪರಿಸ್ಥಿತಿ ಕುರಿತು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಪರಿಶೀಲನಾ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ತಿಳಿಸಿದ್ದಾರೆ. ಸಭೆಯಲ್ಲಿ ಆರ್‌ಬಿಐ ಗವರ್ನರ್ ಊರ್ಜಿತ್ ಪಟೇಲ್ ಹಾಗೂ ಹಣಕಾಸು ಸಚಿವಾಲಯದ ಅಧಿಕಾರಿಗಳು ಪ್ರಧಾನಿಗೆ ಮಾಹಿತಿ ನೀಡಿದರು ಎಂದು ಜೇಟ್ಲಿ ಮಾಹಿತಿ ನೀಡಿದ್ದಾರೆ.

ಸರ್ಕಾರ ರಫ್ತು ಉತ್ತೇಜನಕ್ಕೆ ಅಗತ್ಯ ಕ್ರಮ ತೆಗೆದುಕೊಳ್ಳಲಿದೆ ಮತ್ತು ಅಗತ್ಯವಲ್ಲದ ಆಮದುಗಳ ಮೇಲೆ ನಿರ್ಬಂಧ ವಿಧಿಸಲಾಗುವುದು ಎಂದು ಅವರು ಹೇಳಿದರು. ಆದರೆ ವಾಯ ವಸ್ತುಗಳ ಆಮದಿಗೆ ನಿರ್ಬಂಧ ವಿಧಿಸಲಾಗುವುದು ಎಂಬುದನ್ನು ಜೇಟ್ಲಿ ಬಹಿರಂಗಪಡಿಸಿಲ್ಲ.

ಯಾವ ವಸ್ತಗಳ ಆಮದಿಗೆ ನಿರ್ಬಂಧ ವಿಧಿಸಬೇಕು ಎಂಬುದನ್ನು ಸಂಬಂಧಪಟ್ಟ ಸಚಿವರೊಂದಿಗೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುವುದಾಗಿ ಜೇಟ್ಲಿ ತಿಳಿಸಿದ್ದಾರೆ. ಸೆಪ್ಟೆಂಬರ್ 12ರಂದು ಅಮೆರಿಕದ ಡಾಲರ್ ಎದುರು ಭಾರತದ ರೂಪಾಯಿ ವಿನಿಮಯ ಮೌಲ್ಯ ಸಾರ್ವಕಾಲಿಕ ದಾಖಲೆಯ ಕುಸಿತ ಕಂಡಿದ್ದು, 72.91 ರೂಪಾಯಿಗೆ ತಲುಪಿತ್ತು.

PREV

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

click me!

Recommended Stories

ಲಿಯೋನಲ್ ಮೆಸ್ಸಿಗೆ RM 003-V2 ವಾಚ್ ಉಡುಗೊರೆ, ಇದ್ರ ಬೆಲೆಗೆ 2 ರೋಲ್ಸ್ ರಾಯ್ಸ್ ಕಾರು ಬರುತ್ತೆ
ಆದಾಯ ಕಡಿಮೆ ಆಗಿದ್ದೋ, ಖರ್ಚು ಜಾಸ್ತಿಯಾಗಿದ್ದೋ! ಯೋಚಿಸಬೇಕಾದ ಕೆಲವು ಆರ್ಥಿಕ ಸಂಗತಿಗಳು