
ನವದೆಹಲಿ(ಜ.10): ಸಣ್ಣ ಉದ್ಯಮಗಳಿಗೆ ಪ್ರೋತ್ಸಾಹ ನೀಡುವ ಸಲುವಾಗಿ ಕೇಂದ್ರ ಸರ್ಕಾರ ಮಹತ್ವದ ನಿರ್ಣಯ ಕೈಗೊಂಡಿದೆ. ಇಂದು ನಡೆದ ಜಿಎಸ್ ಟಿ ಕೌನ್ಸಿಲ್ ಸಭೆಯಲ್ಲಿ ಉದ್ದಿಮೆದಾರರಿಗೆ ತೆರಿಗೆ ವಿನಾಯಿತಿ ಮಿತಿಯನ್ನು ದ್ವಿಗುಣಗೊಳಿಸಿದೆ.
ಜಿಎಸ್ ಟಿ ಕೌನ್ಸಿಲ್ ವಿನಾಯಿತಿ ಮಿತಿಯನ್ನು ಈಶಾನ್ಯ ರಾಜ್ಯಗಳಿಗೆ 20 ಲಕ್ಷ ರೂ. ಮತ್ತು ದೇಶದ ಉಳಿದ ಭಾಗಗಳಿಗೆ 40 ಲಕ್ಷ ರೂ. ಏರಿಕೆ ಮಾಡಿದೆ ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ತಿಳಿಸಿದ್ದಾರೆ.
ಸಣ್ಣ ವ್ಯಾಪಾರಿಗಳು ಮೌಲ್ಯದ ಸೇರ್ಪಡೆಗೆ ಬದಲಾಗಿ ವಹಿವಾಟಿನ ಆಧಾರದ ಮೇಲೆ ತೆರಿಗೆ ಪಾವತಿಸುವ ಅವಕಾಶ ಮಾಡಿಕೊಡಲಾಗಿದ್ದು, ಜಿಎಸ್ ಟಿ ಸಂಯೋಜನೆ ವ್ಯಾಪ್ತಿಯನ್ನು ಈಗಿನ 1 ಕೋಟಿ ರೂ.ದಿಂದ 1.5 ಕೋಟಿ ರೂ.ಗೆ ಏರಿಸಲಾಗಿದೆ.
ಕೇರಳದಲ್ಲಿ ಉಂಟಾದ ಭೀಕರ ಪ್ರವಾಹದ ಕಾರಣ ಸಾಕಷ್ಟು ನಷ್ಟವುಂಟಾಗಿದ್ದು, ಕೇರಳ ವ್ಯವಹರಿಸುವ ಅಂತರಾಜ್ಯ ವಹಿವಾಟಿಗೆ ಸಂಬಂಧಿಸಿ ಕಟ್ಟಬೇಕಾಗಿದ್ದ ಸೆಸ್ ತೆರಿಗೆಯನ್ನು ಒಂದು ವರ್ಷದಿಂದ ಎರಡು ವರ್ಷಗಳಿಗೆ ರದ್ದು ಮಾಡಲಾಗಿದೆ.
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.