ಏನಿದು ಕಿಸಾನ್ ಕ್ರೆಡಿಟ್ ಕಾರ್ಡ್? ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸೋದು ಹೇಗೆ? ಇಲ್ಲಿದೆ ಮಾಹಿತಿ

Published : Sep 07, 2022, 05:42 PM ISTUpdated : Sep 07, 2022, 05:45 PM IST
ಏನಿದು ಕಿಸಾನ್ ಕ್ರೆಡಿಟ್ ಕಾರ್ಡ್? ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸೋದು ಹೇಗೆ?  ಇಲ್ಲಿದೆ ಮಾಹಿತಿ

ಸಾರಾಂಶ

ಮಳೆಹಾನಿ,ಬರ, ಪ್ರವಾಹ ಹೀಗೆ ರೈತರು ಬೆವರು ಸುರಿಸಿ ದುಡಿದ ಬೆಳೆ ಒಂದಲ್ಲ ಒಂದು ಕಾರಣಕ್ಕೆ ಹಾನಿಗೊಳಗಾಗುತ್ತಲೇ ಇರುತ್ತದೆ.ಇಂಥ ಸಂದರ್ಭದಲ್ಲಿ ಕಂಗೆಟ್ಟ ರೈತರ ನೆರವಿಗಾಗಿ ಕೇಂದ್ರ ಸರ್ಕಾರ ಕಿಸಾನ್ ಕ್ರೆಡಿಟ್ ಕಾರ್ಡ್ ಎಂಬ ಯೋಜನೆ ಪ್ರಾರಂಭಿಸಿದೆ.ಇದರಡಿಯಲ್ಲಿ ರೈತರು ಕೃಷಿ ಸಾಮಗ್ರಿ ಖರೀದಿ ಹಾಗೂ ಇತರ ಕೃಷಿ ವೆಚ್ಚಗಳಿಗೆ ಬ್ಯಾಂಕುಗಳಿಂದ ಅತೀಕಡಿಮೆ ಬಡ್ಡಿದರಕ್ಕೆ ಸಾಲ ಪಡೆಯಬಹುದಾಗಿದೆ. 

Business Desk:ಅಕಾಲಿಕ ಮಳೆ, ಪ್ರವಾಹ, ಬರ, ಬೆಳೆನಾಶ ಹೀಗೆ ನಾನಾ ಕಾರಣಗಳಿಂದ ಬೆಳೆದ ಬೆಳೆಗಳು ಹಾನಿಗೀಡಾಗಿ ರೈತರು ಸಂಕಷ್ಟಕ್ಕೆ ಸಿಲುಕುತ್ತಾರೆ. ಇಂಥ ಸಂದರ್ಭಗಳಲ್ಲಿ ಉಂಟಾದ ನಷ್ಟ ಭರಿಸಲು ರೈತರು ಸಾಲ ಪಡೆಯೋದು ಅನಿವಾರ್ಯ. ಬಹುತೇಕ ಸಂದರ್ಭಗಳಲ್ಲಿ ಹೆಚ್ಚಿನ ಬಡ್ಡಿದರಕ್ಕೆ ಸಾಲ ಪಡೆಯಲೇಬೇಕಾದಂತಹ ಪರಿಸ್ಥಿತಿ ರೈತರದ್ದು. ಎಷ್ಟೋ ರೈತರು ಬಡ್ಡಿಯ ಹೊರೆಯಿಂದ ಸಾಲ ತೀರಿಸಲಾಗದಂತಹ ಪರಿಸ್ಥಿತಿಗೆ ಸಿಲುಕಿರುತ್ತಾರೆ. ಇದನ್ನು ಮನಗಂಡ ಕೇಂದ್ರ ಸರ್ಕಾರ, ರೈತರಿಗೆ ಅತೀ ಕಡಿಮೆ ಬಡ್ಡಿದರದಲ್ಲಿ ಸಾಲ ಒದಗಿಸುವ ಉದ್ದೇಶದಿಂದ ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯನ್ನು ಪ್ರಾರಂಭಿಸಿದೆ. ಈ ಯೋಜನೆಯಡಿ ರೈತರು ಗರಿಷ್ಠ 3ಲಕ್ಷ ರೂ. ತನಕ ಸಾಲ ಪಡೆಯಬಹುದು. ಈ ಸಾಲದ ಹಣವನ್ನು ರೈತ ಕೃಷಿಗೆ ಸಂಬಂಧಿಸಿದ ಸಾಮಗ್ರಿಗಳು ಅಂದರೆ ಬೀಜ, ಗೊಬ್ಬರ ಸೇರಿದಂತೆ ಅಗತ್ಯ ವಸ್ತುಗಳ ಖರೀದಿ ಹಾಗೂ ಇತರ ವೆಚ್ಚಗಳಿಗೆ ಬಳಸಬಹುದು. ಇದರಡಿಯಲ್ಲಿ ಸಾಲ ಹಾಗೂ ಹಣಕಾಸಿನ ನೆರವು ಪಡೆಯಲು ರೈತರು ಸೇರಿದಂತೆ ಗ್ರಾಮೀಣ ಪ್ರದೇಶದ ಗ್ರಾಹಕರು ತಮ್ಮ ಜಮೀನಿನ ಮಾಲೀಕತ್ವದ ದಾಖಲೆಗಳೊಂದಿಗೆ ಬ್ಯಾಂಕಿನ ಶಾಖೆಗೆ ಭೇಟಿ ನೀಡಬೇಕು. ಸಾಲಕ್ಕೆ ಅರ್ಜಿ ಸಲ್ಲಿಸಿದ ಬಳಿಕ ಅದರ ವಿಲೇವಾರಿಗೆ 2-4 ವಾರಗಳು ಬೇಕಾಗುತ್ತವೆ. 

ಯಾರು ಅರ್ಹರು?
ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಗೆ ಸಂಬಂಧಿಸಿ ಆರ್ ಬಿಐ ಹೊರಡಿಸಿರುವ ಸುತ್ತೋಲೆ ಪ್ರಕಾರ ರೈತರು (ವೈಯಕ್ತಿಕ/ಜಂಟಿ ಸಾಲಗಾರರು), ಹಿಡುವಳಿ ರೈತರು, ಮೌಖಿಕ ಗೇಣಿದಾರರು ಹಾಗೂ ಪಾಲು ಬೆಳೆಗಾರರು, ರೈತರ ಸ್ವಸಹಾಯ ಗುಂಪುಗಳು ಕೂಡ ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯ ಪ್ರಯೋಜನ ಪಡೆಯಲು ಅರ್ಹರಾಗಿದ್ದಾರೆ.

SBI Positive Pay: ಯೋನೋ ಆ್ಯಪ್, ನೆಟ್ ಬ್ಯಾಂಕಿಂಗ್ ನಲ್ಲಿ ಚೆಕ್ ಮಾಹಿತಿ ಸಲ್ಲಿಕೆಗೆ ಹೀಗೆ ಮಾಡಿ

ಕಿಸಾನ್ ಕ್ರೆಡಿಟ್ ಕಾರ್ಡ್ ವಿಶೇಷತೆಗಳು
* ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯಡಿಯಲ್ಲಿ ರೈತರು 1.60ಲಕ್ಷ ರೂ.ನಿಂದ 3ಲಕ್ಷ ರೂ. ತನಕ ಸಾಲ ಪಡೆಯಬಹುದು.
*ಸಾಲ ಪಡೆದವರಿಗೆ ಅಪಘಾತ ವಿಮೆ ಹಾಗೂ ಆರೋಗ್ಯ ವಿಮೆ ಸೌಲಭ್ಯವಿದೆ. ಅಪಘಾತದಿಂದ ಅಂಗವೈಕಲ್ಯ ಅಥವಾ ಮೃತ್ಯುವಾದರೆ 50,000ರೂ. ಹಾಗೂ ಇತರ ಸಂದರ್ಭಗಳಲ್ಲಿ 25,000ರೂ. ವಿಮೆ ಸೌಲಭ್ಯವಿದೆ.
*ಬ್ಯಾಂಕಿನಿಂದ ನಗದು ವಿತ್ ಡ್ರಾಗೆ ಪಾಸ್ ಬುಕ್ ನೀಡಲಾಗುತ್ತದೆ.
* 25,000ರೂ. ನಗದು ಮಿತಿಯೊಂದಿಗೆ ಚೆಕ್ ಬುಕ್ ವಿತರಿಸಲಾಗುತ್ತದೆ.
*ರುಪೇ ಕ್ರೆಡಿಟ್ ಕಾರ್ಡ್ ಕೂಡ ನೀಡಲಾಗುತ್ತದೆ.
*ಸಾಲದ ಹಣದಲ್ಲಿ ರೈತರು ಬೀಜಗಳು, ರಾಸಾಯನಿಕಗಳು ಹಾಗೂ ಕೃಷಿ ಉಪಕರಣಗಳನ್ನು ಖರೀದಿಸಬಹುದು.
*ಉತ್ತಮ ಕ್ರೆಡಿಟ್ ಸ್ಕೋರ್ ಹೊಂದಿರುವ ರೈತರಿಗೆ ಕ್ರೆಡಿಟ್ ಮಿತಿ ಹೆಚ್ಚಳ ಮಾಡಲಾಗುತ್ತದೆ.
*ಉತ್ತಮ ಕ್ರೆಡಿಟ್ ಸ್ಕೋರ್ ಹೊಂದಿರುವ ರೈತರಿಗೆ ಬಡ್ಡಿದರಗಳ ಮೇಲೆ ಸಬ್ಸಿಡಿ ಕೂಡ ನೀಡಲಾಗುತ್ತದೆ. 
*ಸಾಲ ಮೂರು ವರ್ಷಗಳ ಅವಧಿಗೆ ಲಭ್ಯವಿದೆ. 

ಯಾವೆಲ್ಲ ದಾಖಲೆಗಳು ಬೇಕು?
*ಸಹಿ ಹೊಂದಿರುವ ಸಾಲದ ಮನವಿ ಪತ್ರ
*ಗುರುತು ದೃಢೀಕರಣಕ್ಕೆ ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ಮತದಾರರ ಚೀಟಿ, ಡ್ರೈವಿಂಗ್ ಲೈಸೆನ್ಸ್ ಇತ್ಯಾದಿಗಳಲ್ಲಿ ಯಾವುದಾದರೂ ಒಂದು.
*ವಿಳಾಸ  ದೃಢೀಕರಣಕ್ಕೆ ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ಮತದಾರ ಚೀಟಿ ಇತ್ಯಾದಿ.
*ನಿಮ್ಮ ಪಾಸ್ ಪೋರ್ಟ್ ಗಾತ್ರದ ಫೋಟೋ
*ಸಾಲ ನೀಡುವಿಕೆಗೆ ಸಂಬಂಧಿಸಿ ಬ್ಯಾಂಕ್ ಕೋರಿರುವ ಇತರ ಅಗತ್ಯ ದಾಖಲೆಗಳು

ಸರ್ಕಾರದ ಖಜಾನೆ ವ್ಯವಸ್ಥೆಗೆ Karnataka Bank ಸೇರ್ಪಡೆ

ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ
ಕಿಸಾನ್ ಕ್ರೆಡಿಟ್ ಕಾರ್ಡ್ ಗೆ ಆನ್ ಲೈನ್ ಮೂಲಕ ಕೂಡ ಅರ್ಜಿ ಸಲ್ಲಿಸಬಹುದು. ನೀವು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾತೆ ಹೊಂದಿದ್ದರೆ ಯೋನೋ ಅಪ್ಲಿಕೇಷನ್ ಮೂಲಕ  ಅಥವಾ. ಎಸ್ ಬಿಐ ಯೋನೋ ಅಧಿಕೃತ ವೆಬ್ ಸೈಟ್ ನಲ್ಲಿ ಅರ್ಜಿ ಸಲ್ಲಿಸಬಹುದು. 
 

PREV

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

Read more Articles on
click me!

Recommended Stories

ಜಿಎಸ್‌ಟಿ ದರ ಬದಲಾವಣೆ ಬಳಿಕ ವಾಣಿಜ್ಯ ತೆರಿಗೆ ಸಂಗ್ರಹ ಕುಸಿತ
ರೆಪೋ ದರ ಕಡಿತ : ಸಾಲಗಾರರಿಗೆ ಅನುಕೂಲ, ಹೂಡಿಕೆದಾರರಿಗೆ ಬೇಸರ