
ನವದೆಹಲಿ(ಜೂ.26): ಬ್ಯಾಂಕ್‌ಗಳಿಗೆ ಸಾವಿರಾರು ಕೋಟಿ ರೂ. ಸಾಲ ಮರುಪಾವತಿ ಮಾಡಬೇಕಿರುವ ವಿಜಯ್ ಮಲ್ಯಾ 'ನಾನು ಬ್ಯಾಂಕ್ ಸುಸ್ತಿದಾರರ ಪೋಸ್ಟರ್ ಬಾಯ್ ಆಗಿದ್ದೇನೆ' ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ತಮ್ಮ ಬಹುಕಾಲದ ಮೌನವನ್ನು ಮುರಿದಿರುವ ವಿಜಯ್ ಮಲ್ಯಾ, ಬ್ಯಾಂಕ್ ಸಾಲ ಮರುಪಾವತಿ ಮಾಡುವುದಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಹಾಗೂ ವಿತ್ತ ಸಚಿವರಿಗೆ 2016 ರ ಏ.15 ರಂದು ಪತ್ರ ಬರೆದಿದ್ದಾಗಿ ತಿಳಿಸಿದ್ದಾರೆ. ಆಡರೆ ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದೂ ಮಲ್ಯ ಸ್ಪಷ್ಟಪಡಿಸಿದ್ದಾರೆ.
ಕಿಂಗ್ ಫಿಷರ್ ಏರ್‌ಲೈನ್ಸ್ ಗಾಗಿ ಪಡೆದಿದ್ದ 9,000 ಕೋಟಿ ರೂ. ಕಳ್ಳತನ ಮಾಡಿ ಪರಾರಿಯಾಗಿದ್ದೇನೆ ಎಂಬಂತೆ ರಾಜಕಾರಣಿಗಳು ಹಾಗೂ ಮಾಧ್ಯಮದವರು ನನ್ನ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಕೆಲವೊಂದು ಬ್ಯಾಂಕ್‌ಗಳು ನನ್ನನ್ನು ಉದ್ದೇಶಪೂರ್ವಕವಾಗಿ ಸುಸ್ತಿದಾರನೆಂಬ ಹಣೆಪಟ್ಟಿ ಕೊಟ್ಟಿವೆ ಎಂದು ಮಲ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.