
ನವದೆಹಲಿ(ಅ.5): ರೆಪೋ ದರ ಮತ್ತು ರಿವರ್ಸ್ ರೆಪೋ ದರಗಳಲ್ಲಿ ಯಾವುದೇ ಬದಲಾವಣೆ ಮಾಡದೇ ಇರಲು ಭಾರತೀಯ ರಿಸರ್ವ್ ಬ್ಯಾಂಕ್(ಆರ್ಬಿಐ) ನಿರ್ಧರಿಸಿದೆ.
ರೆಪೋ ದರಗಳನ್ನು ಶೇ. 6.50ರ ದರದಲ್ಲಿ ಮತ್ತು ರಿವರ್ಸ್ ರೆಪೋ ದರವನ್ನು ಶೇ.6.25ರ ದರದಲ್ಲಿಯೇ ಮುಂದುವರೆಸಲು ಆರ್ಬಿಐ ತೀರ್ಮಾನಿಸಿದೆ.
ಈ ಹಿಂದೆ ರೆಪೋ ಮತ್ತು ರಿವರ್ಸ್ ರೆಪೋ ದರವನ್ನು ಎರಡು ಬಾರಿ ಏರಿಸಿದ್ದ ಆರ್ ಬಿಐ ಈ ಬಾರಿ ಯಾವುದೇ ಬದಲಾವಣೆ ಮಾಡದೆ ಯಥಾಸ್ಥಿತಿ ಕಾಯ್ದು ಕೊಂಡಿದೆ.
ರೂಪಾಯಿ ಮೌಲ್ಯ ಕುಸಿತ ಹಾಗೂ ತೈಲ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಆರ್ಬಿಐ ರೆಪೋ ದರವನ್ನು ಶೇ. 25 ಮೂಲಾಂಶಗಳಷ್ಟು ಏರಿಕೆ ಮಾಡುವ ನಿರೀಕ್ಷೆ ಇತ್ತು. ಆದರೆ ಮಾರುಕಟ್ಟೆ ಸ್ಥಿರತೆಗಾಗಿ ಈ ಕ್ರಮ ಜರುಗಿಸಲಾಗಿದೆ ಎಂದು ಆರ್ ಬಿಐ ಹೇಳಿದೆ.
ಈ ಮಧ್ಯೆ ಆರ್ಬಿಐ ತನ್ನ ನಿರ್ಧಾರ ಪ್ರಕಟಿಸಿದ ಬೆನ್ನಲ್ಲೇ ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತ ಕಂಡಿದ್ದು, 74.13 ರೂ. ಸಾರ್ವಕಾಲಿಕ ದಾಖಲೆಯ ಕುಸಿತ ಕಂಡಿದೆ.
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.