
ಚೆನ್ನೈ(ಸೆ.12): ಪೆಟ್ರೋಲ್, ಡೀಸೆಲ್ ದರ ಗಗನಕ್ಕೇರಿದ್ದು, ಜನಸಾಮಾನ್ಯ ಕಂಗಾಲಾಗಿದ್ದಾನೆ. ಆದರೆ ತಮಿಳುನಾಡಿನಲ್ಲಿ ಉಚಿತವಾಗಿ ಪೆಟ್ರೋಲ್ ಮತ್ತು ಡೀಸೆಲ್ ನೀಡಲಾಗುತ್ತಿದೆ.
ಹೌದು, ಕೃಷ್ಣಗಿರಿಯ ರಾಯಕೊಟ್ಟೈ ರಸ್ತೆಯಲ್ಲಿನ ಎಚ್‌ಪಿ ಪೆಟ್ರೋಲ್ ಪಂಪ್ ನಲ್ಲಿ ಈ ವಿಶೇಷ ಕೊಡುಗೆ ನೀಡಲಾಗುತ್ತಿದೆ. ನಗದು ರಹಿತ ವಹಿವಾಟು ಉತ್ತೇಜನಕ್ಕಾಗಿ ಹಿಂದೂಸ್ತಾನ್ ಪೆಟ್ರೋಲಿಯಂ ಸಂಸ್ಥೆ ಈ ವಿನೂತನ ಪ್ರಯೋಗಕ್ಕೆ ಮುಂದಾಗಿದೆ.
ತೈಲ ಬೆಲೆ ಏರಿಕೆಯಿಂದಾಗಿ ಜನರು ತೊಂದರೆ ಅನುಭವಿಸುತ್ತಿದ್ದರೆ, ತಮಿಳುನಾಡಿನ ಕೃಷ್ಣಗಿರಿಯ ಹಿಂದೂಸ್ತಾನ್ ಪೆಟ್ರೋಲಿಯಂ ಬಂಕ್ ಗ್ರಾಹಕರಿಗೆ ಉಚಿತವಾಗಿ 1 ಲೀ. ಪೆಟ್ರೋಲ್ ಅಥವಾ ಡೀಸೆಲ್ ನೀಡುತ್ತಿದೆ.
ಆದರೆ ಇದಕ್ಕೆ ಕೆಲ ಷರತ್ತುಗಳಿವೆ. ಉಚಿತ ಪೆಟ್ರೋಲ್ ಮತ್ತು ಡೀಸೆಲ್ ಪಡೆಯಲು ಗ್ರಾಹಕರು ಪೆಟ್ರೋಲ್ ಪಂಪ್ ಆ್ಯಪ್ ಅನ್ನು ಗೂಗಲ್ ಪ್ಲೇ ಸ್ಟೋರ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಬೇಕಿದೆ. ನಗದುರಹಿತ ವಹಿವಾಟು ಉತ್ತೇಜಿಸಲು ಈ ಯೋಜನೆ ಜಾರಿಗೆ ತರಲಾಗಿದೆ ಎಂದು ಬಂಕ್ ಮಾಲೀಕರು ತಿಳಿಸಿದ್ದಾರೆ.ಈ ಆ್ಯಪ್ ಗೆ ಬೆಂಬಲ ನೀಡಿದೆ.
ಆ್ಯಪ್ ಮೂಲಕ ಬಳಕೆದಾರರು ಖರೀದಿಸುವ ಪ್ರತಿ 5 ಲೀ. ಪೆಟ್ರೋಲ್ ಅಥವಾ ಡೀಸೆಲ್ ಜೊತೆಗೆ 1 ಲೀ. ಪೆಟ್ರೋಲ್ ಅಥವಾ ಡೀಸೆಲ್ ಉಚಿತವಾಗಿ ನೀಡಲಾಗುತ್ತದೆ. ಈ ಕೊಡುಗೆ ಎರಡು ತಿಂಗಳ ಅವಧಿಯವರೆಗೆ ಮಾತ್ರ ಎಂದು ಸ್ಪಷ್ಟಪಡಿಸಲಾಗಿದೆ.
ತೈಲ ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಜನತೆಗೆ ಇಲ್ಲಿನ ಉಚಿತ ಇಂಧನ ಕೊಡುಗೆ ಖುಷಿ ಕೊಟ್ಟಿದ್ದು, ನೂರಾರು ಸಂಖ್ಯೆಯಲ್ಲಿ ಜನರು ಆ್ಯಪ್ ಡೌನ್‌ಲೋಡ್ ಮಾಡಿಕೊಂಡು ಪೆಟ್ರೋಲ್ ಬಂಕ್ ಮೇಲೆ ಮುಗಿ ಬಿದ್ದಿದ್ದಾರೆ.
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.