ನಾನು ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಇಂಧನ ಸಚಿವನಾಗಿದ್ದಾಗ ತುಮಕೂರಿನ ಪಾವಗಡದಲ್ಲಿ ಸೋಲಾರ್ ಪಾರ್ಕ್ ಮಾಡಿ ವಿಶ್ವದ ಗಮನ ಸೆಳೆದಿದ್ದೆ. ನಮ್ಮ ಮಾದರಿಯನ್ನು ಇಡೀ ದೇಶ ಮೆಚ್ಚಿ ಕೇಂದ್ರ ಸರ್ಕಾರ ಎಲ್ಲಾ ತಾಲೂಕುಗಳಲ್ಲಿ ಸೌರಶಕ್ತಿ ಯೋಜನೆ ಜಾರಿಗೆ ತಂದಿದ್ದಾರೆ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
ಚಾಮರಾಜನಗರ(ಆ.27): ಗಡಿ ಪ್ರದೇಶ ಚಾಮರಾಜನಗರದಲ್ಲಿ ಕೈಗಾರಿಕೆಗೆ ಬಂಡವಾಳ ಹೂಡಿಕೆ ಮಾಡುವವರಿಗೆ ನಮ್ಮ ಸರ್ಕಾರ ಪ್ರೋತ್ಸಾಹ ನೀಡಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮೊದಲ ಬಾರಿಗೆ ಚಾಮರಾಜನಗರಕ್ಕೆ ಆಗಮಿಸಿದ್ದು, ಇಲ್ಲಿ ಕೈಗಾರಿಕಾ ಪ್ರದೇಶದಲ್ಲಿ ಸೌರಶಕ್ತಿ ಶೇಖರಣೆಯ ಬ್ಯಾಟರಿ ಉತ್ಪಾದನಾ ಘಟಕದ ಶಂಕುಸ್ಥಾಪನೆಗೆ ಬಂದಿದ್ದೇನೆ.
undefined
ಆಪರೇಷನ್ ಹಸ್ತ ಅಗತ್ಯವಿಲ್ಲ, ಪಕ್ಷಕ್ಕೆ ಬರೋರ ತಡೆಯಲ್ಲ: ಡಿ.ಕೆ.ಶಿವಕುಮಾರ್
ನಾನು ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಇಂಧನ ಸಚಿವನಾಗಿದ್ದಾಗ ತುಮಕೂರಿನ ಪಾವಗಡದಲ್ಲಿ ಸೋಲಾರ್ ಪಾರ್ಕ್ ಮಾಡಿ ವಿಶ್ವದ ಗಮನ ಸೆಳೆದಿದ್ದೆ. ನಮ್ಮ ಮಾದರಿಯನ್ನು ಇಡೀ ದೇಶ ಮೆಚ್ಚಿ ಕೇಂದ್ರ ಸರ್ಕಾರ ಎಲ್ಲಾ ತಾಲೂಕುಗಳಲ್ಲಿ ಸೌರಶಕ್ತಿ ಯೋಜನೆ ಜಾರಿಗೆ ತಂದಿದ್ದಾರೆ. ಟ್ರಾನ್ಸ್‌ಮಿಷನ್‌ನಲ್ಲಿ ವೆಚ್ಚ ಉಳಿತಾಯ ಮಾಡುವಲ್ಲಿ ಕರ್ನಾಟಕ ಮಾದರಿ ದೇಶಕ್ಕೆ ಮಾದರಿಯಾಗಿತ್ತು. ಈಗ ವಿದ್ಯುತ್ ಶೇಖರಣೆ ಬಗ್ಗೆ ಕೆಲಸ ಮಾಡಲಾಗುತ್ತಿದೆ. ಖಾಸಗಿ ಕಂಪನಿ ಸುಮಾರು 2 ಸಾವಿರ ಕೋಟಿ ಬಂಡವಾಳ ಹೂಡಿಕೆ ಮಾಡಲು ಮುಂದಾಗಿದ್ದು, ಮೊದಲ ಹಂತದಲ್ಲಿ 500 ಕೋಟಿಯನ್ನು ಇಲ್ಲಿ ಹೂಡಿಕೆ ಮಾಡಿ ಬ್ಯಾಟರಿ ಉತ್ಪಾದನಾ ಘಟಕ ನಿರ್ಮಾಣ ಮಾಡುತ್ತಿದ್ದಾರೆ. ಇದಕ್ಕೆ ಉತ್ತೇಜನ ನೀಡಲು ಇಲ್ಲಿಗೆ ಬಂದಿದ್ದೇನೆ ಎಂದರು.